

Team Udayavani, Jan 30, 2025, 12:37 PM IST
ಲೋಕಾಪುರ: ಸಾರ್ವಜನಿಕರಿಗೆ ವಿತರಣೆ ಮಾಡುವ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿ ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಲೋಕಾಪುರ ಪಟ್ಟಣದ ಹೊರವಲಯದಲ್ಲಿರುವ ರೈಲು ನಿಲ್ದಣದ ಬಳಿ ಜ.28ರ ಮಂಗಳವಾರ ನಡೆದಿದೆ.
ಸುಮಾರು 35 ಟನ್ ಅಕ್ಕಿ ತುಂಬಿಕೊoಡು ಗಂಗಾವತಿಯಿoದ ಲೋಕಾಪುರ ಮಾರ್ಗವಾಗಿ ಕೊಲ್ಹಾಪುರಕ್ಕೆ ಹೊರಟಿದ್ದ ಲಾರಿ, ಮಂಗಳವಾರ ರಾತ್ರಿ ವೇಳೆ ಚಕ್ರದ ಘರ್ಷಣೆಯಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಹೆದ್ದಾರಿ ಮಧ್ಯದಲ್ಲಿ ಬೆಂಕಿಗಾಹುತಿಯಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆoದು ತಿಳಿದುಬಂದಿದೆ. ಸುಮಾರು 700 ಚೀಲದ ಸುಮಾರು 30 ಟನ್ ಅಕ್ಕಿ ಹಾಗೂ ಲಾರಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ಕಿ ಸಾರ್ವಜನಿಕರಿಗೆ ವಿತರಣೆ ಮಾಡುವ ಪಡಿತರ ಅಕ್ಕಿ ಎಂದು ಶಂಕಿಸಲಾಗಿದೆ.
ಗಂಗಾವತಿಯಿoದ ಲೋಕಾಪುರ ಮಾರ್ಗವಾಗಿ ಕೊಲ್ಹಾಪೂರಕ್ಕೆ ಹೊರಟ್ಟಿದ್ದ ಸಾರ್ವಜನಿಕರಿಗೆ ವಿತರಣೆ ಮಾಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಕ್ಕಿ ಚೀಲ ತುಂಬಿದ್ದ ಲಾರಿ ಸುಟ್ಟು ಹೋಗಿದೆ.
ಆದ್ದರಿಂದ ಅದರಲ್ಲಿದ ಅಕ್ಕಿಯನ್ನು ಬೇರೆ ಲಾರಿ ಮೂಲಕ ವಶಕ್ಕೆ ಪಡೆಯಲಾಗಿದೆ. ಅಂದಾಜು 7 ಲಕ್ಷ ರೂ. ಮೌಲ್ಯದ 35 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿ ಮೂಲದಿಂದ ತಿಳಿದು ಬಂದಿದೆ.
ಅಕ್ಕಿಯನ್ನು ಎಲ್ಲಿಂದ ತೆಗೆದುಕೊಂಡು ಬಂದಿದ್ದಾರೆ. ಅದರ ಮಾಲೀಕರ ಯಾರು ಎನ್ನುವ ಮಾಹಿತಿಯನ್ನು ಪೋಲೀಸರು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಘಟನೆ ತಿಳಿದು ಸ್ಥಳಕ್ಕೆ ಜಿಲ್ಲಾ ಆಹಾರ ಇಲಾಖೆ ಅಧಿಕಾರಿ ಶ್ರೀಶೈಲ ಕಂಕನವಾಡಿ, ಮುಧೀಳ ತಹಶೀಲ್ದಾರ, ತಾಲೂಕು ಆಹಾರ ಗುಣಮಟ್ಟ ಅಧಿಕಾರಿ ಸದಾಶಿವ ಹಡಪದ, ಜಮಖಂಡಿ ಆರ್‌ಟಿಓ ಅಧಿಕಾರಿ ಸದಾಶಿವ ಮರಲಿಂಗನವರ ಹಾಗೂ ಲೋಕಾಪೂರ ಠಾಣಾ ಪಿಎಸ್‌ಐ ಕೆ.ಬಿ. ಜಕ್ಕನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಥಳದಲಿದ್ದ ಆಹಾರ ಶಿರಸ್ತೆದಾರ ಡಿ.ಬಿ. ದೇಶಪಾಂಡೆ ಅವರಿಗೆ ಈ ಅಕ್ಕಿ ಸಾಗಟ ಮಾಡಿದ ಮಾಲೀಕ ಮತ್ತು ಲಾರಿ ಮಾಲೀಕನ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾ ಆಹಾರ ಇಲಾಖೆ ಅಧಿಕಾರಿ ಶ್ರೀಶೈಲ ಕಂಕನವಾಡಿ ತಿಳಿಸಿದರು.
ಈ ವೇಳೆ ಮುಧೋಳ ತಹಶೀಲ್ದಾರ ಕಛೇರಿಯ ಆಹಾರ ಶಿರಸ್ತೆದಾರ ಡಿ.ಬಿ. ದೇಶಪಾಂಡೆ, ಆಹಾರ ನಿರೀಕ್ಷಕಿ ಸತ್ಯವ್ವ ಮಾದರ ಹಾಗೂ ಲೋಕಾಪುರ ಗ್ರಾಮ ಆಡಳಿತಾಧಿಕಾರಿ ಪ್ರಕಾಶ ಶೇರಖಾನೆ, ಪೋಲಿಸ ಇಲಾಖೆ ಸಿಬ್ಬಂದಿಗಳಾದ ಎಸ್.ಎಸ್. ಗಂಗಾಯಿ, ಎಮ್.ಕೆ. ಪತ್ತಾರ, ಯಡಹಳ್ಳಿ ಇದ್ದರು.
Black Turmeric:ಕಪ್ಪು ಅರಿಶಿಣ ಬೆಳೆದು ಅಧಿಕ ಲಾಭ ಗಳಿಸಿದ ಧರೆಪ್ಪ;ಔಷಧ ತಯಾರಿಕೆಯಲ್ಲಿ ಬಳಕೆ
Rabkavi Banhatti: ಸಾಲಬಾಧೆಯಿಂದ ಬೇಸತ್ತು ಮಗ್ಗದ ಬಳಿಯೇ ನೇಕಾರ ಆತ್ಮಹ*ತ್ಯೆ
Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ
Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ
Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ
Bollywood Movie: ಕರಣ್ ಜೋಹರ್ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ
Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ
ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ
Push-Up: ಮೈ ಕೊಡವಿಕೊಂಡು ಎದ್ದು ನಿಲ್ಲಿಸುವ ಪುಶ್
UV Fusion: ನಮ್ಮೂರು ನಮ್ಮ ಹೆಮ್ಮೆ
You seem to have an Ad Blocker on.
To continue reading, please turn it off or whitelist Udayavani.