ಮಹಾಲಿಂಗಪುರ ತಾಲೂಕು ಹೋರಾಟ ತೀವ್ರ
ಮಹಾಲಿಂಗಪುರ-9 ಹಳ್ಳಿಗಳನ್ನು ತೇರದಾಳ ತಾಲೂಕಿಗೆ ಸೇರಿಸದಿರಿ
Team Udayavani, Apr 7, 2022, 11:55 AM IST
ಮಹಾಲಿಂಗಪುರ: ಏ.7ರಂದು ನಡೆಯಲಿರುವ ಬಾಗಲಕೋಟೆಯ ಕೆಡಿಪಿ ಸಭೆಯಲ್ಲಿ ಯಾವುದೇ ಕಾರಣಕ್ಕೂ ಮಹಾಲಿಂಗಪುರ ಪಟ್ಟಣ ಮತ್ತು ಸುತ್ತಲಿನ 9 ಹಳ್ಳಿಗಳನ್ನು ನೂತನ ತೇರದಾಳ ತಾಲೂಕಿಗೆ ಸೇರಿಸಬೇಡಿ. ಒಂದು ವೇಳೆ ಸೇರಿಸಿದರೆ ಉಗ್ರ ಹೋರಾಟ ಅನಿವಾರ್ಯ ಎಂದು ಮಹಾಲಿಂಗಪುರ ಹೋರಾಟ ಸಮಿತಿ ಸದಸ್ಯರು, ವಿವಿಧ ಪಕ್ಷಗಳ ಮುಖಂಡರು ಖಡಕ್ ಎಚ್ಚರಿಕೆ ನೀಡಿದರು.
ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 9 ಗ್ರಾಮಗಳ ಹಿರಿಯರು, ವಿವಿಧ ಪಕ್ಷಗಳು ಮುಖಂಡರ ನೇತೃತ್ವದಲ್ಲಿ ಮಹಾಲಿಂಗಪುರ ತಾಲೂಕಿಗೆ ಒತ್ತಾಯಿಸಿ ಹೋರಾಟ ಸಮಿತಿ ಬುಧವಾರ ಕರೆ ನೀಡಿದ್ದ ಮಹಾಲಿಂಗಪುರ ಬಂದ್ ಹಾಗೂ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರಗಳು ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ. ಈ ಬಾರಿಯ ಹೋರಾಟ ಮಾಡು ಇಲ್ಲವೇ ಮಡಿ ಆಗಿದೆ. ಈ ಬಾರಿ ಮಹಾಲಿಂಗಪುರ ತಾಲೂಕು ಘೋಷಣೆಯಾಗುವರೆಗೂ ಹೋರಾಟ ನಿರಂತರ ಮುನ್ನಡೆಯುತ್ತದೆ. ಈಗಿರುವ ಪಕ್ಷಾತೀತ ಮತ್ತು ಜಾತ್ಯತೀತ ಹೋರಾಟ ಸಮಿತಿಗೆ ಮಹಾಲಿಂಗಪುರ ಮತ್ತು 9 ಗ್ರಾಮಗಳ ಸಾರ್ವಜನಿಕರು, ಸರ್ವ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹೋರಾಟದ ಯಶಸ್ವಿಯಾಗಿ ಬೆಂಬಲಿಸಬೇಕು ಎಂದು ಮನವು ಮಾಡಿದರು.
ಮಹಾಲಿಂಗಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳನ್ನು ನೂತನ ತೇರದಾಳ ತಾಲೂಕಿಗೆ ಸೇರಿಸುವುದು ಅವೈಜ್ಞಾನಿಕ, ಒಂದು ತಾಲೂಕು(ರಬಕವಿ-ಬನಹಟ್ಟಿ)ನ್ನು ದಾಟಿ ತಾಲೂಕಿಗೆ ಹೋಗಬೇಕಾಗುವುದು. ಅದಕ್ಕಾಗಿ ಯಾವುದೇ ಕಾರಣಕ್ಕೂ ಸೇರಿಸಬಾರದು ಎಂದು ಒತ್ತಾಯಿಸಿದರು.
ರೈತ ಸಂಘದ ಮುಖಂಡರಾದ ಸುಭಾಸ ಶಿರಬೂರ, ಗಂಗಾಧರ ಮೇಟಿ, ಬಂದು ಪಕಾಲಿ, ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಎಂ.ಎಂ. ಉಳ್ಳೇಗಡ್ಡಿ, ಸಿದ್ದು ಕೊಣ್ಣೂರ, ಸಂಗಪ್ಪ ಹಲ್ಲಿ, ಡಾ| ಎ.ಆರ್.ಬೆಳಗಲಿ, ಮನೋಹರ ಶಿರೋಳ, ಮಹಾದೇವ ಮಾರಾಪುರ, ಯಲ್ಲನಗೌಡ ಪಾಟೀಲ, ಬಸವನಗೌಡ ಪಾಟೀಲ, ಧರೆಪ್ಪ ಸಾಂಗ್ಲಿಕರ್, ಎಂ.ಐ. ಕೋಳಿಗುಡ್ಡ, ನಿಂಗಪ್ಪ ಬಾಳಿಕಾಯಿ, ಚನಬಸು ಹುರಕಡ್ಲಿ ಮಾತನಾಡಿ, ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 9 ಗ್ರಾಮಗಳನ್ನು ನೂತನ ತೇರದಾಳ ತಾಲೂಕಿಗೆ ಸೇರಿಸಬಾರದು. ಮುಧೋಳ ತಾಲೂಕಿನ ರನ್ನಬೆಳಗಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮ ಸೇರಿಸಿ ಮಹಾಲಿಂಗಪುರ ನೂತನ ತಾಲೂಕು ಘೋಷಿಸುವಂತೆ ಒತ್ತಾಯಿಸಿದರು.
ಬೃಹತ್ ಪ್ರತಿಭಟನಾ ಮೆರವಣಿಗೆ: ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿ ಸದಸ್ಯರು ಪಟ್ಟಣದ ಬಸವ ವೃತ್ತದಿಂದ ಡಬಲ್ ರಸ್ತೆ, ನಡಚೌಕಿ, ಜವಳಿಬಜಾರ್, ಗಾಂಧಿ ವೃತ್ತ ಮಾರ್ಗವಾಗಿ ಚನ್ನಮ್ಮ ವೃತ್ತಕ್ಕೆ ಬಂದು ಟೈರ್‌ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಅರ್ಧ ಗಂಟೆಗಳ ಕಾಲ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಬಂದ್ ಮಾಡಿ, ಘೋಷಣೆ ಕೂಗಿ ಪ್ರತಿಭಟಿಸಿದರು.
ಅಲ್ಲಿಂದ ಪುರಸಭೆಗೆ ಆಗಮಿಸಿ ರಬಕವಿ-ಬನಹಟ್ಟಿ ಉಪ ತಹಶೀಲ್ದಾರ್ ಎಸ್. ಎಲ್. ಕಾಗಿಯವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನಂತರ ಮಹಾಲಿಂಗಪುರ ಹಾಗೂ ಸುತ್ತಲಿನ 9 ಗ್ರಾಮಗಳಿಂದ 20ಕ್ಕೂ ಹೆಚ್ಚು ವಾಹನಗಳ ಮೂಲಕ ಬಾಗಲಕೋಟೆ ಕೆಡಿಪಿ ಸಭೆಗೆ ಹೋಗಿ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಚಿವರು, ಶಾಸಕರು, ಅಧಿಕಾರಿಗೆ ಮುತ್ತಿಗೆ ಹಾಕಿ ಮಹಾಲಿಂಗಪುರ ಹಾಗೂ 9 ಗ್ರಾಮಗಳನ್ನು ನೂತನ ತೇರದಾಳ ತಾಲೂಕಿಗೆ ಸೇರಿಸದಂತೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.
ಗುರುವಾರ ಬಾಗಲಕೋಟೆಯಲ್ಲಿ ನಡೆಯುವ ಬೆಳವಣಿಗೆ ನೋಡಿಕೊಂಡು, ಏ.9ರಂದು ಬೆಳಗ್ಗೆ 10.30ಕ್ಕೆ ತಾಲೂಕು ಹೋರಾಟದ ಮುಂದಿನ ರೂಪುರೇಷೆಗಳ ಕುರಿತು ಬೃಹತ್ ಸಭೆ ನಡೆಸಲು ನಿರ್ಣಯಿಸಲಾಯಿತು. ತಾಲೂಕು ಹೋರಾಟಕ್ಕೆ ಪಟ್ಟಣದ ಅಂಗಡಿಕಾರರು ಅಂಗಡಿ-ಮುಂಗಟ್ಟು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಬೆಂಬಲಿಸಿದರು. ಠಾಣಾಧಿಕಾರಿ ವಿಜಯ ಕಾಂಬಳೆ ಮತ್ತು ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.