ತಾಲೂಕು ಕೇಂದ್ರಕ್ಕೆ ಆಗ್ರಹಿಸಿ ನಾಳೆ ಮಹಾಲಿಂಗಪುರ ಬಂದ್‌

ಸಾಮೂಹಿಕ ನಾಯಕತ್ವದಡಿ ತಾಲೂಕು ಹೋರಾಟ; ಬಂದ್‌ ವೇಳೆ ಬಸ್‌ ಸಂಚಾರ ಸಂಪೂರ್ಣ ಸ್ಥಗಿತ

Team Udayavani, Aug 16, 2022, 2:49 PM IST

9

ಮಹಾಲಿಂಗಪುರ: ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಸರ್ಕಾರದ ಕಾರ್ಯವೈಖರಿ ಖಂಡಿಸಿ ಆ.17ರಂದು ಮಹಾಲಿಂಗಪುರ ಬಂದ್‌ಗೆ ಕರೆ ನೀಡಲಾಗಿದ್ದು, ಸಾಮೂಹಿಕ ನಾಯಕತ್ವದಡಿ ತಾಲೂಕು ಕೇಂದ್ರಕ್ಕೆ ಹೋರಾಟ ನಡೆಸಲಾಗುವುದು ಎಂದು ತಾಲೂಕು ಹೋರಾಟ ಸಮಿತಿ ಸದಸ್ಯರು ಹೇಳಿದ್ದಾರೆ.

ಹೋರಾಟದ ವೇದಿಕೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.15ರೊಳಗೆ ಮಹಾಲಿಂಗಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿದ್ದರೆ 17ರಂದು ಮಹಾಲಿಂಗಪುರ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಗುವುದೆಂದು ತಿಳಿಸಲಾಗಿತ್ತು. ಸರ್ಕಾರ ಮಹಾಲಿಂಗಪುರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಿಲ್ಲ. ಹೀಗಾಗಿ ಆ.17ರಂದು ಮಹಾಲಿಂಗಪುರ ಬಂದ್‌ ನಡೆಸಲಾಗುವುದು ಎಂದರು.

17ರಂದು ಬೆಳಗ್ಗೆ 9ಗಂಟೆಗೆ ಬಸವೇಶ್ವರ ವೃತ್ತದಿಂದ ನಡುಚೌಕಿ, ಜವಳಿ ಬಜಾರ್‌, ಗಾಂಧಿ ವೃತ್ತದ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿ ಚನ್ನಮ್ಮ ವೃತ್ತದಲ್ಲಿ ಸಮಾಪ್ತಿಗೊಳಿಸಿ ಹೋರಾಟ ವೇದಿಕೆಯಲ್ಲಿ ಸಭೆ ನಡೆಸಲಾಗುವುದು. ಸಭೆಯ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲಾಧಿಕಾರಿಗಳು ಹೋರಾಟ ವೇದಿಕೆಗೆ ಆಗಮಿಸಿ, 125 ದಿನಗಳ ಕಾಲ ನಡೆದ ತಾಲೂಕು ಹೋರಾಟದ ಕುರಿತು ಸರ್ಕಾರಕ್ಕೆ ಸಲ್ಲಿಸಿದ ವರದಿ ಬಹಿರಂಗಪಡಿಸಬೇಕು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಮಹಾಲಿಂಗಪುರ ಬಂದ್‌ ಹಿನ್ನೆಲೆ ಬಸ್‌ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುವುದು. ಪಟ್ಟಣದ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗ್ಗಟ್ಟುಗಳನ್ನು ಬಂದ್‌ ಮಾಡಿ, ಪಕ್ಷಾತೀತವಾಗಿ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಸನಗೌಡ ಪಾಟೀಲ, ಯಲ್ಲನಗೌಡ ಪಾಟೀಲ, ಜಾವೇದ ಬಾಗವಾನ, ನಿಂಗಪ್ಪ ಬಾಳಿಕಾಯಿ, ಸಂಗಪ್ಪ ಹಲ್ಲಿ, ಮಹಾಲಿಂಗಪ್ಪ ಕುಳ್ಳೊಳ್ಳಿ, ಬಿ.ಎಂ.ಯಾದವಾಡ, ಸುನೀಲಗೌಡ ಪಾಟೀಲ, ಅರ್ಜುನ ಹಲಗಿಗೌಡರ, ಗಂಗಾಧರ ಮೇಟಿ, ಮಹಾದೇವ ಮಾರಾಪುರ, ಪರಮಾನಂದ ಸಂಕ್ರಟ್ಟಿ, ಈರಪ್ಪ ದಿನ್ನಿಮನಿ, ವೀರೇಶ ಆಸಂಗಿ, ಹಣಮಂತ ಜಮಾದಾರ, ಸಿದ್ದಪ್ಪ ಶಿರೋಳ, ಶಿವಲಿಂಗ ಟಿರಕಿ, ಪರಪ್ಪ ಸತ್ತಿಗೇರಿ, ವಿಠ್ಠಲ ಕುಳಲಿ ಇದ್ದರು.

ಟಾಪ್ ನ್ಯೂಸ್

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.