ಪುರಸಭೆ 14ನೇ ವಾರ್ಡಿನ ಉಪಚುನಾವಣೆ ಫಲಿತಾಂಶ; ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

Team Udayavani, Dec 30, 2023, 12:31 PM IST

10-mahalingapura

ಮಹಾಲಿಂಗಪುರ: ಭಾರಿ ಕೂತುಹಲ ಕೆರಳಿಸಿದ್ದ ಹಾಗೂ ಕಾಂಗ್ರೆಸ್ ಬಿಜೆಪಿ ಪಕ್ಷದ ನಡುವೆ ತುರುಸಿನಿಂದ ಡಿ.27 ರಂದು ನಡೆದಿದ್ದ ಸ್ಥಳಿಯ ಪುರಸಭೆ 14 ನೇ ವಾರ್ಡಿನ ಉಪಚುನಾವಣೆಯ ಫಲಿತಾಂಶ ಡಿ.30ರ ಶನಿವಾರ ಮುಂಜಾನೆ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಬಾಗವಾನ 328 ಮತಗಳ ಭಾರಿ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಶನಿವಾರ ಮುಂಜಾನೆ ರಬಕವಿ-ಬನಹಟ್ಟಿ ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆದ ಮತ ಎಣಿಕೆಯ‌ ನಂತರ ಚುನಾವಣಾಧಿಕಾರಿ ವ್ಹಿ.ಸಿ.ಬೆಳಗಲ್ಲ ಫಲಿತಾಂಶ ಘೋಷಿಸಿದರು.

ಅಭ್ಯರ್ಥಿಗಳು ಪಡೆದ ಮತಗಳ ವಿವರ: ಕಾಂಗ್ರೆಸ್ ನ ಅಬ್ದುಲ್ ಬಾಗವಾನ (630), ಬಿಜೆಪಿಯ ಶ್ರೀಮಂತ ಹಳ್ಳಿ(302), ಪಕ್ಷೇತರ ಬಸಪ್ಪ ಚಿಂಚಖಂಡಿ(15), ಮಹಾಂತೇಶ ಅವಟಗಿ(15), ಪಕ್ಷೇತರ/ಎಸ್ ಡಿಪಿಆಯ್ ರಮಜಾನ ಖಾಲೇಖಾನ (31), ನೋಟಾ (5) ಮತಗಳು ಚಲಾವಣೆ ಆಗಿವೆ. ಕಾಂಗ್ರೆಸ್ ಅಭ್ಯರ್ಥಿ 328 ಮತಗಳ ಭಾರಿ ಅಂತರದಲ್ಲಿ ಜಯಶಾಲಿಯಾಗಿದ್ದಾರೆ.

ಅನುಕಂಪದ ಅಲೆಗೆ ಮಣಿದ ಮತದಾರರು: 14ನೇ ವಾರ್ಡಿನ ಹಿಂದಿನ ಸದಸ್ಯ ಜಾವೇದ ಬಾಗವಾನ ಅವರ ಅಕಾಲಿಕ ನಿಧನದಿಂದ ಉಪಚುನಾವಣೆ ನಡೆದಿತ್ತು. ಉಪಚುನಾವಣೆಯಲ್ಲಿ ಮೃತ ಜಾವೇದ ಸಹೋದರ ಅಬ್ದುಲ್ ಬಾಗವಾನ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿ ಅಭ್ಯರ್ಥಿ ಶ್ರೀಮಂತ ಹಳ್ಳಿ ಅವರ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಜಾವೇದ ಅವರ ಅಕಾಲಿಕ ಸಾವಿನ ಅನುಕುಂಪ ಜೊತೆಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಮನಸೋತ ವಾರ್ಡಿನ ಮತದಾರರು ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆ ಜೈ ಎಂದಿದ್ದಾರೆ.

ವಿಜಯೋತ್ಸವ ಆಚರಣೆ: ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಪುರಸಭೆ ಸದಸ್ಯರು, ಕಾರ್ಯಕರ್ತರು ಪಟ್ಟಣದ ವಿವಿಧ ವೃತ್ತಗಳಲ್ಲಿ ಹಾಗೂ 14 ನೇ ವಾರ್ಡಿನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಗುಲಾಲ್ ಎರಚಿಕೊಂಡು ವಿಜಯೋತ್ಸವ ಆಚರಿಸಿದರು.

ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ  ಮುಖಂಡ ಸಿದ್ದು ಕೊಣ್ಣೂರ, ಸ್ಥಳಿಯ ಮುಖಂಡರಾದ ಯಲ್ಲನಗೌಡ ಪಾಟೀಲ್, ಮಹಾಲಿಂಗಪ್ಪ ತಟ್ಟಿಮನಿ, ಮುಸ್ತಕ್ ಚಿಕ್ಕೋಡಿ, ಮಲ್ಲಪ್ಪ ಸಿಂಗಾಡಿ, ಪ್ರಕಾಶ ಮಮದಾಪೂರ, ಈಶ್ವರ ಚಮಕೇರಿ, ಮಲ್ಲಪ್ಪ ಭಾವಿಕಟ್ಟಿ, ಬಸವರಾಜ ರಾಯರ, ಬಲವಂತಗೌಡ ಪಾಟೀಲ್, ರಾಜು ಗೌಡಪ್ಪಗೋಳ, ಸುನೀಲಗೌಡ ಪಾಟೀಲ, ನಜೀರ ಜಾರೆ, ಅರ್ಜುನ ದೊಡಮನಿ, ಸುರೇಶ ಬಿದರಿ, ಅರುಣ ಬಂತಿ, ರವಿ ಬಿದರಿ, ರಾಜೇಶ ಭಾವಿಕಟ್ಟಿ, ಸಿರಾಜ ಪಾಂಡು, ಅನೀಲ ದೇಸಾಯಿ, ನಾನಾ ಜೋಶಿ, ಸಿದ್ದು ಬೆನ್ನೂರ,  ಸಯ್ಯದ ಯಾದವಾಡ, ಲಕ್ಷ್ಮಣ ಮಾಂಗ, ಹೊಳೆಪ್ಪ ಬಾಡಗಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.