ಮಹಾಲಿಂಗಪುರ ಪುರಸಭೆಯ ಆಡಳಿತ ಮಂಡಳಿಯ ಪಟ್ಟಿಯಲ್ಲಿ ಅಧ್ಯಕ್ಷರ ಹೆಸರೇ ಮಾಯ!
Team Udayavani, Nov 2, 2022, 11:39 AM IST
ಮಹಾಲಿಂಗಪುರ: ಪುರಸಭೆಯ ಹಾಲಿ ಅಧ್ಯಕ್ಷ ಬಸವರಾಜ ಹಿಟ್ಟಿನಮಠ ಅವರು ಜುಲೈ 15ರಂದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರ ಆಯ್ಕೆಯಾಗಿ ಮೂರುವರೆ ತಿಂಗಳುಗಳೇ ಕಳೆದರೂ ಸಹ ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಅಲಕ್ಷ್ಯದಿಂದಾಗಿ ಪುರಸಭೆಯ ಆಡಳಿತ ಮಂಡಳಿ ಮಾಹಿತಿ ಫಲಕದಲ್ಲಿ ಇಂದಿನ ವರೆಗೂ ನೂತನ ಅಧ್ಯಕ್ಷರ ಹೆಸರನ್ನು ನಮೂದಿಸದೇ ಇರುವದು ಪುರಸಭೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.
ಪುರಸಭೆಯ ಕಾರ್ಯಾಲಯದ ಒಳಾಂಗಣದ ಗೋಡೆಯ ಮೇಲೆ ಪುರಸಭೆಯ ಆಡಳಿತ ಮಂಡಳಿ ಮತ್ತು ಸ್ಥಾಯಿ ಸಮಿತಿ ಸದಸ್ಯರ ಪಟ್ಟಿಯನ್ನು ಬರೆಯಲಾಗಿದೆ. ಮಾರ್ಚ ಅಂತ್ಯದಲ್ಲಿ ಹಿಂದಿನ ಅಧ್ಯಕ್ಷರು ರಾಜೇನಾಮೆ ನೀಡಿದ ನಂತರ ಮೊದಲಿನ ಅಧ್ಯಕ್ಷರ ಹೆಸರಿನ ಮೇಲೆ ಬಿಳಿಕಾಗದ ಅಂಟಿಸಲಾಗಿತ್ತು.
ನಿರ್ಲಕ್ಷ್ಯಕ್ಕೆ ಕೈಗನ್ನಡಿ :
ಜುಲೈ 15ರಂದು ಪುರಸಭೆಯ ಅಧ್ಯಕ್ಷರ ಆಯ್ಕೆಯಾಗಿ ನ.1ಕ್ಕೆ 105 ದಿನಗಳು ಕಳೆದರೂ ಸಹ ಪುರಸಭೆಯ ಮುಖ್ಯಾಧಿಕಾರಿಗಳು ಮತ್ತು ಅಲ್ಲಿನ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಯು ಆಡಳಿತ ಮಂಡಳಿಯ ನಾಮಫಲಕದತ್ತ ಗಮನ ಹರಿಸದೇ ಇರುವದು ವಿಪರ್ಯಾಸದ ಸಂಗತಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ.
ಪಟ್ಟಣದ ಪ್ರಥಮ ಪ್ರಜೆ, ಪುರಸಭೆಯ ಅಧ್ಯಕ್ಷರ ಒಂದು ಹೆಸರನ್ನು ಬರೆಸಲು ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮೂರುವರೆ ತಿಂಗಳು ಸಮಯ ಬೇಕಾದರೆ, ಇನ್ನು ಸಾರ್ವಜನಿಕ ಕೆಲಸಗಳಿಗೆ ಎಷ್ಟು ತಿಂಗಳ ಸಮಯ ಬೇಕಾಗಬಹುದು ಎಂಬುದು ಪ್ರಜ್ಞಾವಂತ ನಾಗರೀಕರ ಪ್ರಶ್ನೆಯಾಗಿದೆ.
ಇದನ್ನೂ ಓದಿ : ಶಿವಮೊಗ್ಗ: ಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ಸಕ್ರೆಬೈಲಿನ ಸೂರ್ಯ ಆನೆ
ಮುಖ್ಯಾಧಿಕಾರಿಗಳ ನಿರ್ಲಕ್ಷ್ಯ :
ಪುರಸಭೆಯ ಮುಖ್ಯಾಧಿಕಾರಿ ಜೆ.ಎಸ್.ಈಟಿಯವರು ಪುರಸಭೆ ನೂತನ ಅಧ್ಯಕ್ಷ ಮತ್ತು ಕೆಲ ಸದಸ್ಯರ ಕೆಲಸ ಕಾರ್ಯಗಳಿಗೆ ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರೀತವಾಗಿ ಸ್ಪಂದಿಸಲು ಆಗುತ್ತಿಲ್ಲ. ಆಡಳಿತ ಮಂಡಳಿ ಮತ್ತು ಮುಖ್ಯಾಧಿಕಾರಿಗಳ ನಡುವಿನ ಹೊಂದಾಣಿಕೆ ಕೊರತೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಈಗಾಗಲೇ ಪಕ್ಷದ ಮುಖಂಡರು ಮತ್ತು ಶಾಸಕರ ಗಮನಕ್ಕೆ ತರಲಾಗಿದೆ.
– ಹೆಸರುಹೇಳಲಿಚ್ಚಿಸದ ಸದಸ್ಯರು. ಪುರಸಭೆ. ಮಹಾಲಿಂಗಪುರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.