200 ದಿನಗಳನ್ನು ಪೂರೈಸಿದ ಮಹಾಲಿಂಗಪುರ ತಾಲೂಕು ಹೋರಾಟ!

ತಾಲೂಕು ಆಗುವರೆಗೂ ಹೋರಾಟ ನಿರಂತರ : ತಾಲೂಕು ಘೋಷಣೆ ಯಾವಾಗ?

Team Udayavani, Oct 30, 2022, 5:24 PM IST

8

ಮಹಾಲಿಂಗಪುರ: ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿಸಬೇಕೆಂದು ಆಗ್ರಹಿಸಿ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಕಳೆದ ಏಪ್ರೀಲ್ 14 ರಂದು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ವೇದಿಕೆ ನಿರ್ಮಿಸಿ, ತಾಲೂಕು ಹೋರಾಟ ವೇದಿಕೆಯ ನೇತೃತ್ವದಲ್ಲಿ ಪ್ರಾರಂಭಿಸಿರುವ ಅನಿರ್ಧಿಷ್ಟಾವಧಿ ಹೋರಾಟವು ಅ.30ರ ರವಿವಾರ 200 ದಿನಗಳನ್ನು ಪೂರೈಸಿದೆ.

ಮೊದಲು ಮುಧೋಳ ತಾಲೂಕಿನಲ್ಲಿದ್ದ ಮಹಾಲಿಂಗಪುರ ಪಟ್ಟಣವನ್ನು 2018ರಲ್ಲಿ ಹಿಂದಿನ ಕಾಂಗ್ರೆಸ್ ಸರಕಾರ ನೂತನ ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆ ಮಾಡಿತ್ತು. ಇದರಿಂದ ಪಟ್ಟಣದ ಜನತೆಗೆ ಮುಧೋಳಕ್ಕಿಂತ ನೂತನ ರಬಕವಿ-ಬನಹಟ್ಟಿ ತಾಲೂಕು ಮತ್ತೇ 10 ಕೀ.ಮಿ ಸಮೀಪವಾಯಿತು.

30 ವರ್ಷಗಳ ಬೇಡಿಕೆ:     

ಪಟ್ಟಣವನ್ನು ತಾಲೂಕು ಕೇಂದ್ರ ಮಾಡಬೇಕೆಂಬುದು ಕಳೆದ 30 ವರ್ಷಗಳ ನಿರಂತರ ಬೇಡಿಕೆಯಾಗಿದೆ. ಈ ಹಿಂದೆ ತಾಲೂಕಿಗಾಗಿ 2003ರಲ್ಲಿ ಪಟ್ಟಣದ ಬಸವವೃತ್ತದಲ್ಲಿ ಒಂದು ತಿಂಗಳ ಕಾಲ ಪ್ರತಿಭಟನೆ ಮಾಡಲಾಗಿತ್ತು. ಅಂದು ನಡೆದ ತಾಲೂಕು ಹೋರಾಟದ ಫಲವಾಗಿ ಟಿ.ಎಂ.ಹುಂಡೆಕಾರ ವರದಿಯು ನಿಯೋಜಿತ ನಕ್ಷೆಯೊಂದನ್ನು ಸಿದ್ದಪಡಿಸಿ ಸರಕಾರಕ್ಕೆ ಶಿಪಾರಸ್ಸು ಮಾಡಿತ್ತು. ಅದರಂತೆ ಅಂದಿನ ಕಂದಾಯ ಸಚಿವ ಬಿ.ಎಂ.ಶ್ರೀಕಂಠಯ್ಯ ಅವರು ಏಪ್ರೀಲ್ 1ರಂದು ಮಹಾಲಿಂಗಪುರಕ್ಕೆ ಉಪತಹಶೀಲ್ದಾರ ಹುದ್ದೆಯ ಮಂಜೂರಿಯ ಆದೇಶ ಪತ್ರವನ್ನು ಕಳಿಸಿದ್ದರಿಂದ ಹೋರಾಟವನ್ನು ಮೊಟಕುಗೊಳಿಸಲಾಗಿತ್ತು. ಮುಂದೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಹೋರಾಟ ಮುಂದುವರೆಯಲಿಲ್ಲ, ತಾಲೂಕು ಆಗಲೇ ಇಲ್ಲ.

ಉದ್ಘಾಟನೆಗೆ ಮಾತ್ರ ಸೀಮಿತ ? : 

ತೇರದಾಳ ಮತಕ್ಷೇತ್ರದ ಅಂದಿನ ಶಾಸಕಿ, ಸಚಿವೆ ಉಮಾಶ್ರೀ ಅವರು 9-2-2018ರಂದು ಅಧಿಕೃತವಾಗಿ ರಬಕವಿ-ಬನಹಟ್ಟಿ ತಾಲೂಕಾ ಪ್ರಾರಂಭೋತ್ಸವ ಸಮಾರಂಭವನ್ನು ಮಾಡಿದ್ದರು. ಆದರೆ ನೂತನ ತಾಲೂಕು ಘೋಷಣೆಯಾಗಿ 4 ವರ್ಷ 8 ತಿಂಗಳು ಕಳೆದರು ಸಹ, ಇದುವರೆಗೆ ಎಲ್ಲಾ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಮನೆ-ಹೊಲ ಖರೀದಿಗಾಗಿ ಮುಧೋಳಕ್ಕೆ, ತಹಶೀಲ್ದಾರ ಕೆಲಸಗಳಿಗಾಗಿ ರಬಕವಿ-ಬನಹಟ್ಟಿಗೆ, ಮಾಶಾಸನ, ಜಾತಿ-ಆದಾಯ ಪತ್ರಗಳಿಗಾಗಿ ತೇರದಾಳಕ್ಕೆ ಸೇರಿದಂತೆ ಇಂದಿಗೂ ಮೂರು ಕಡೆಗೆ ಅಲೆದಾಡುವದು ತಪ್ಪಿಲ್ಲ.

2019ರಿಂದ ಮತ್ತೇ ಹೋರಾಟ ತೀವೃ:             ‌‌

ಮಾಜಿ ಸಿಎಂ ಕುಮಾರಸ್ವಾಮಿಯವರು 2018 ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ನಾನು ಸಿಎಂ ಆದರೆ ತೇರದಾಳ ತಾಲೂಕಾ ಕೇಂದ್ರ ಮಾಡುವುದಾಗಿ ಘೋಷಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ ಸಿಎಂ ಖುರ್ಚಿ ಅಲಂಕರಿಸಿದ ನಂತರ ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್‍ನಲ್ಲಿ ತೇರದಾಳನ್ನು ನೂತನ ತಾಲೂಕು ಘೋಷಿಸಿದರು.

ತೇರದಾಳ ತಾಲೂಕು ಘೋಷಣೆ ನಂತರ 2019ರಿಂದ ಮಹಾಲಿಂಗಪುರ ತಾಲೂಕು ಹೋರಾಟ ತೀವ್ರ ಸ್ಪರೂಪ ಪಡೆದುಕೊಂಡು, 2019ರಿಂದ 2021ರವರೆಗೆ ಹಲವು ಬಾರಿ ಬೆಂಗಳೂರು ನಿಯೋಗ ತೆರಳಿ ಮುಖ್ಯಮಂತ್ರಿ, ಕಂದಾಯ ಮಂತ್ರಿಗಳಿಗೆ ಮನವಿ ಸಲ್ಲಿಸಿ, ತಾಲೂಕು ಕೇಂದ್ರಕ್ಕಾಗಿ ಒತ್ತಾಯಿಸಲಾಗಿತ್ತು.

ಅಂತಿಮವಾಗಿ ಅನಿರ್ಧಿಷ್ಟಾವಧಿ ಹೋರಾಟ : 

ಮೂರು ತಾಲೂಕಿಗೆ ಅಲೆದಾಡುವ ತ್ರಿಶಂಕು ಸ್ಥಿತಿಯಲ್ಲಿ ಸಿಕ್ಕಿ ಒದ್ದಾಡುವಂತಿರುವಾಗಲೇ ಈ ಮೊದಲು ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆಯಾಗಿದ್ದ ಮಹಾಲಿಂಗಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ನೂತನ ತೇರದಾಳ ತಾಲೂಕಿಗೆ ಸೇರ್ಪಡೆ ಮಾಡಿದ್ದ 2022ರ ಏಪ್ರೀಲ್‍ನಲ್ಲಿ ತಾಲೂಕು ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿ, ತೇರದಾಳ ತಾಲೂಕಿಗೆ ಸೇರಿಸಿದ್ದನ್ನು ವಿರೋಧಿಸಿ ರಬಕವಿ-ಬನಹಟ್ಟಿ ತಾಲೂಕಿನಲ್ಲಿಯೇ ಉಳಿಸಿಕೊಂಡು ಮಹಾಲಿಂಗಪುರ ತಾಲೂಕಿಗಾಗಿ ಅನಿರ್ಧಿಷ್ಟಾವಧಿ ಹೋರಾಟ ಆರಂಭಿಸಲಾಯಿತು.

ಅಭೂತಪೂರ್ವ ಬೆಂಬಲ :

ಕಳೆದ ಏಪ್ರೀಲ್ 14ರಂದು ಪ್ರಾರಂಭವಾದ ತಾಲೂಕು ಹೋರಾಟಕ್ಕೆ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 14 ಗ್ರಾಮಗಳ ಜನತೆಯು ಪಕ್ಷಾತೀತ ಮತ್ತು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲಾ ಪಕ್ಷಗಳ ಹಾಲಿ, ಮಾಜಿ ಶಾಸಕರು, ಸಚಿವರು, ಪಕ್ಷದ ಮುಖಂಡರು ಹೋರಾಟ ವೇದಿಕೆಗೆ ಆಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಕಳೆದ ಸೆಪ್ಟೆಂಬರ್ 15ರಂದು ತಾಲೂಕು ಹಾರಾಟ ವೇದಿಕೆ ಹಾಗೂ ಸರ್ವಪಕ್ಷಗಳ ನಿಯೋಗದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲೇ ಸಿಹಿಸುದ್ದಿ ನೀಡುವ ಭರವಸೆ ಕೊಟ್ಟಿರುವ ಕಾರಣ, ಮಹಾಲಿಂಗಪುರ ತಾಲೂಕು ಹೋರಾಟವು 200 ದಿನಗಳ ನಂತರವು ಮುಂದುವರೆಯಲಿದೆ.‌ ‌‌‌‌‌‌‌

ಜನಪ್ರತಿನಿಧಿಗಳ ಮೇಲೆ ಹೆಚ್ಚಿದ ಒತ್ತಡ :    ‌        ‌‌‌‌‌‌‌‌‌‌       ‌‌‌‌‌‌‌‌

ಈಗಾಗಲೇ ತಾಲೂಕು ಹೋರಾಟ 200 ದಿನಗಳನ್ನು ಪೂರೈಸಿದ್ದು ಮತ್ತು ಇನ್ನು 5-6 ತಿಂಗಳಲ್ಲೇ ವಿಧಾನಸಭಾ ಚುನಾವಣೆಯು ಸಮೀಪಿಸುತ್ತಿರುವ ಕಾರಣ, ಅಂತಿಮವಾಗಿ 2023ರ ಫೆಬ್ರುವರಿ ತಿಂಗಳಲ್ಲಿ ನಡೆಯಬಹುದಾದ ಚುನಾವನೆಯ ಬಜೆಟ್ ಅಧಿವೇಶನದಲ್ಲಿಯಾದರೂ, ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಮಹಾಲಿಂಗಪುರ ಪಟ್ಟಣವನ್ನು ಶತಾಯಗತಾಯ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕಾದ ಬಹುದೊಡ್ಡ ಜವಾಬ್ದಾರಿ, ಒತ್ತಡ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ, ಮುಧೋಳ ಶಾಸಕರು, ಸಚಿವರಾದ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ ಅವರ ಹೆಗಲ ಮೇಲಿದೆ.

-ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.