Mahalingpur; ಅವೈಜ್ಞಾನಿಕ ರಸ್ತೆ: ಪುರಸಭೆ ಸದಸ್ಯರು, ಅಧಿಕಾರಿಗಳಿಂದ ಕಾಮಗಾರಿಗೆ ತಡೆ

ಡಿಸಿ ಆದೇಶವನ್ನು ಕಡೆಗಣಿಸಿದ ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಅಧಿಕಾರಿಗಳು!

Team Udayavani, Aug 16, 2024, 10:16 PM IST

1-ml

ಮಹಾಲಿಂಗಪುರ: ಪಟ್ಟಣದ ಬಸವ ವೃತ್ತದಿಂದ ಢವಳೇಶ್ವರ ರಸ್ತೆವರೆಗಿನ ಡಬಲ್ ರಸ್ತೆಯ ಕಾಮಗಾರಿಯು ಪ್ರಾರಂಭವಾಗಿ ಎರಡುವರೆ ವರ್ಷಗಳೇ ಕಳೆದಿದೆ. ಆದರೆ ಇಂದಿಗೂ ಕಾಮಗಾರಿಯು ಪೂರ್ತಿಯಾಗದೇ ಅರ್ಧಕ್ಕೆ ಉಳಿದು ಟ್ರಾಫಿಕ್ ಸಮಸ್ಯೆಯಿಂದ ಸಾರ್ವಜನಿಕರು, ಬೈಕ್ ಸವಾರರು ಪರದಾಡುವಂತಾಗಿದೆ.

ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಪುಟ್‌ಪಾತ್ ನಿರ್ಮಿಸದೇ ಡಾಂಬರೀಕರಣ ಪ್ರಾರಂಭಿಸಿರುವದನ್ನು ಖಂಡಿಸಿ, ಪುರಸಭೆಯ ಸದಸ್ಯರು ಮತ್ತು ಅಧಿಕಾರಿಗಳು ಡಾಂಬರೀಕರಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಘಟನೆಯು ಶುಕ್ರವಾರ(ಆ16) ಮಧ್ಯಾಹ್ನ ನಡೆಯಿತು.

ಪುರಸಭೆ ಸದಸ್ಯರಾದ ಪ್ರಲ್ಹಾದ ಸಣ್ಣಕ್ಕಿ, ರವಿ ಜವಳಗಿ ಮಾತನಾಡಿ ರಬಕವಿ-ಜಾಂಬೋಟಿ ರಾಜ್ಯಹೆದ್ದಾರಿಯಲ್ಲಿ ಬವಸವೃತ್ತದಿಂದ ಢವಳೇಶ್ವರ ರಸ್ತೆಯ ದ್ವಾರ ಬಾಗಿಲುವರೆಗಿನ ಕೇವಲ 775 ಮೀಟರ್‌ನಷ್ಟಿರುವ ಕಾಮಗಾರಿಗೆ ಒರೊಬ್ಬರಿ 6 ಕೋಟಿ 25 ಲಕ್ಷ ಖರ್ಚು ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ಆಮೆಗತಿಯಯಲ್ಲಿದ್ದ ಕಾಮಗಾರಿಯನ್ನು ಗುತ್ತಿಗೆದಾರರು ಮನಬಂದಂತೆ ಅವೈಜ್ಞಾನಿಕವಾಗಿ ಮಾಡಿದ್ದಾರೆ. ಕಳೆದ ತಿಂಗಳು ಪುರಸಭೆಯಿಂದ ರಸ್ತೆಯ ಪೂರ್ವಭಾಗದಲ್ಲಿನ ಅತಿಕ್ರಮಣ ಅಂಗಡಿಗಳನ್ನು ತೆರವುಗೊಳಿಸಿ ಚರಂಡಿ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಪಶ್ಚೀಮ ಭಾಗದಲ್ಲಿನ ಅಂಗಡಿಗಳನ್ನು ತೆರವುಗೊಳಿಸಿ, ಚರಂಡಿ ಪುಟಪಾತ್, ರಸ್ತೆಯ ಮಧ್ಯದಲ್ಲಿ ವಿಭಜಕ(ಡಿವೈಡರ್) ನಿರ್ಮಿಸಬೇಕು. ಅಲ್ಲಿಯವರೆಗೆ ಕಾಮಗಾರಿಯನ್ನು ನಿಲ್ಲಿಸಬೇಕು. ಇದು ಪಟ್ಟಣದ ಅಭಿವೃದ್ದಿ ಮತ್ತು ಭವಿಷ್ಯದ ಟ್ರಾಫೀಕ್ ಸಮಸ್ಯೆಯ ನಿವಾರಣೆಗಾಗಿ ಉಭಯ ಪಕ್ಷಗಳ ಸದಸ್ಯರ ಒಗ್ಗಟ್ಟಿನ ಆಗ್ರಹವಾಗಿದೆ ಎಂದು ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಮಾತನಾಡಿ ಪುರಸಭೆಯ ಎರಡು ಪಕ್ಷಗಳ ಸದಸ್ಯರು ಒಗ್ಗಟ್ಟಾಗಿ ರಸ್ತೆ ಅಗಲೀಕರಣವಾಗಲಿ ಎಂಬ ಉದ್ದೇಶದಿಂದ ಪೂರ್ವಭಾಗದಲ್ಲಿನ ಆಸ್ತಿಗಳನ್ನು ಅಳತೆ ಮಾಡಿ, ಅತಿಕ್ರಮಣ ಜಾಗೆಗಳನ್ನು ತೆರವುಗೊಳಿಸಲಾಗಿದೆ. ಅದರಂತೆ ಪಶ್ಚೀಮ ಭಾಗದಲ್ಲಿನ ಆಸ್ತಿಗಳನ್ನು ಸರ್ವೇ ಮಾಡಲು ನಗರ ಭೂಮಾಪನ ಅಧಿಕಾರಿಗಳಿಗೆ ತಿಳಿಸಲಾಗಿದೆ. ಎರಡು ಭಾಗದಲ್ಲಿ ಚರಂಡಿ ನಿರ್ಮಾಣ ಮತ್ತು ಪುಟ್‌ಪಾತ್ ನಿರ್ಮಿಸಿದ ನಂತರವೇ ಡಾಂಬರೀಕರಣ ಮಾಡಲು ಸದಸ್ಯರು ಹೇಳಿದ್ದರು ಸಹ, ಗುತ್ತಿಗೆದಾರರು ಕಾಮಗಾರಿಯನ್ನು ಪ್ರಾರಂಭಿಸಿದ ಕಾರಣ ಇಂದು ಸದಸ್ಯರೊಂದಿಗೆ ಬಂದು ಕಾಮಗಾರಿಯನ್ನು ನಿಲ್ಲಿಸಲು ತಿಳಿಸಿದ್ದೇವೆ ಎಂದರು.

ಪುರಸಭೆ ಸದಸ್ಯ ಬಸವರಾಜ ಚಮಕೇರಿ ಮಾತನಾಡಿ ಪಶ್ಚೀಮ ಭಾಗದಲ್ಲಿನ ಅತಿಕ್ರಮಣ ಅಂಗಡಿಗಳ ತೆರವು ನಂತರ ಚರಂಡಿ, ಪುಟ್‌ಪಾತ ನಿರ್ಮಿಸಿ, ಡಾಂಬರೀಕರಣ ಮಾಡಲು ಹೇಳಿ, ಗುರುವಾರವೇ ಲೋಕೋಪಯೋಗಿ ಅಧಿಕಾರಿಗಳಿಗೆ, ಡಿಸಿಯವರಿಗೆ ತಿಳಿಸಲಾಗಿದೆ. ಡಿಸಿ ಅವರು ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚಿಸಿ ಕಾಮಗಾರಿಯನ್ನು ನಿಲ್ಲಿಸಲು ತಿಳಿಸಿದ್ದಾರೆ. ಆದರೆ ಡಿಸಿ ಆದೇಶವನ್ನೇ ಗಾಳಿಗೆ ತೂರಿದ ಗುತ್ತಿಗೆದಾರರು, ಲೋಕೋಪಯೋಗಿ ಅಧಿಕಾರಿಗಳು ಶುಕ್ರವಾರವು ಡಾಂಬರೀಕರಣ ಪ್ರಾರಂಭಿಸಿದ್ದರಿಂದ ಪುರಸಭೆಯ ಸದಸ್ಯರು ಮತ್ತು ಅಧಿಕಾರಿಗಳು ಸೇರಿ ಕಾಮಗಾರಿಯನ್ನು ನಿಲ್ಲಿಸಿದ್ದೇವೆ ಎಂದರು.

ಪುರಸಭೆಯ ಸದಸ್ಯರಾದ ಶೇಖರ ಅಂಗಡಿ, ಬಸವರಾಜ ಹಿಟ್ಟಿನಮಠ, ಬಿಜೆಪಿ ಮುಖಂಡರಾದ ಶಿವಾನಂದ ಅಂಗಡಿ, ಪುಂಡಲೀಕ ಗಡೇಕಾರ, ಮಾಂತು ಮೇಟಿ, ಶಿವಾನಂದ ಹುಣಶ್ಯಾಳ, ಜೆಡಿಎಸ್ ಮುಖಂಡ ನಿಂಗಪ್ಪ ಬಾಳಿಕಾಯಿ, ಕಾಂಗ್ರೆಸ್ ಮುಖಂಡರಾದ ನಾನಾ ಜೋಷಿ, ವಿನೋದ ಸಿಂಪಿ, ಶ್ರೀಮಂತ ಹುಣಶ್ಯಾಳ, ಪುರಸಭೆಯ ಕಿರಿಯ ಅಭಿಯಂತರ ಎಸ್.ಎಂ.ಕಲಬುರ್ಗಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

7-rabakavi

Rabkavi Banhatti: ಮೊಬೈಲ್ ಕಳ್ಳತನ ಪತ್ತೆ: ವಾರಸುದಾರರಿಗೆ ಹಸ್ತಾಂತರ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

4

Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.