ಪುರಸಭೆಯ ಜಾಗದಲ್ಲಿ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸಿ
Team Udayavani, Dec 12, 2019, 1:11 PM IST
ಮಹಾಲಿಂಗಪುರ: ಪಟ್ಟಣದಲ್ಲಿ ನೂತವಾಗಿ ನಿರ್ಮಿಸುತ್ತಿರುವ ಬಸ್ ನಿಲ್ದಾಣದ ಕಾಮಗಾರಿಯ ಕಾರಣ ಬಸ್ ನಿಲುಗಡೆಗೆ ತೊಂದರೆಯಾಗುತ್ತಿದೆ. ಕಾರಣ ಕಾಮಗಾರಿಯ ಮುಕ್ತಾಯಗೊಳ್ಳುವರೆಗೂ ಬಸ್ ನಿಲ್ದಾಣದ ಪಕ್ಕದಲ್ಲಿರುವ ಪುರಸಭೆಯ ಖಾಲಿ ಜಾಗೆಯಲ್ಲಿ ತಾತ್ಕಾಲಿಕವಾಗಿ ಬಸ್ ನಿಲುಗಡೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಶ್ರೀರಾಮ ಸೇನೆ ಸಂಘಟನೆಯ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾ ಅಧ್ಯಕ್ಷ ನಾಗರಾಜ ಭಜಂತ್ರಿ ಮಾತನಾಡಿ, ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಬಸ್‌ಗಳು ಹೆದ್ದಾರಿ ಮೇಲೆಯೇ ಬಸ್‌ಗಳು ನಿಲುಗಡೆಯಾಗುತ್ತಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ನಿಲ್ದಾಣದ ಎದುರು ಸಂಚಾರ ದಟ್ಟಣೆ ಸಮಸ್ಯೆಯಿಂದಾಗಿ ಸಕಾಲಕ್ಕೆ ಶಾಲಾ ಹಾಜರಾಗಲು ವಿದ್ಯಾರ್ಥಿಗಳಿಗೆ, ರೋಗಿಗಳಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಅದಕ್ಕಾಗಿ ಮುಖ್ಯಾಧಿ ಕಾರಿಗಳು ಹೊಸ ಬಸ್ ನಿಲ್ದಾಣ ಕಾಮಗಾರಿ ಮುಗಿಯುವರೆಗೂ ವಾಹನ ಜನದಟ್ಟಣೆ ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ಪುರಸಭೆಯ ಖಾಲಿ ಜಾಗೆಯಲ್ಲಿ ಬಸ್ ನಿಲುಗಡೆಗೆ ಅವಕಾಶ ನೀಡಿ ಸಹಕರಿಸಬೇಕು ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಪುರಸಭೆ ಮುಖ್ಯಾಧಿಕಾರಿ ಬಾಬುರಾವ್ ಕಮತಗಿ ಮಾತನಾಡಿ, ಶೀಘ್ರದಲ್ಲೆ ಖಾಲಿ ಜಾಗ ಸ್ವಚ್ಛತೆ ಮತ್ತು ನೆಲಸಮತಟ್ಟುಗೊಳಿಸಿ ಬಸ್ ನಿಲುಗಡೆಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಂಘಟನೆಯ ಸಂಜು ಘೋರ್ಪಡೆ, ವಿನು ಟಿರ್ಕಿ, ಮಹಾಲಿಂಗ ಅಮ್ಮಲಜೇರಿ, ರಾಹುಲ ಅಂಬಿ, ದಶರಥ ಕಬಾಡಿ, ಅಭಿಷೇಕ ಹಾಸೀಲಕರ, ಬಸವರಾಜ ಮಂಡಿ, ಬಸು ಹುನ್ನೂರ, ರಾಜು ಗೌಂಡಿ, ಅಕ್ಷಯ ಹಾಸೀಲಕರ, ಚಂದ್ರು ಭಜಂತ್ರಿ, ಗುರುರಾಜ ಹಿಟ್ಟಿನಮಠ, ಕಾರ್ತಿಕ ಹಟ್ಟಿ, ಮಹಾಲಿಂಗ ನಾವಿ, ಅಖೀಲೇಶ ಅಂಗಡಿ, ಪ್ರಭು ಮಾಂಗ, ತಮ್ಮಣ್ಣ ಆದೆಪ್ಪನವರ, ಗಣೇಶ ಗಾಡಿವಡ್ಡರ, ಶಂಕರ ಬೆಳಗಾಂವಕರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.