ರಾಜಕೀಯ ಧರ್ಮ ಮರೆತವರಿಗೆ ತಕ್ಕ ಉತ್ತರ ಕೊಡಿ: ಮಲ್ಲಿಕಾರ್ಜುನ ಚರಂತಿಮಠ

ಅಭಿವೃದ್ಧಿಯ ಜತೆಗೆ ಸಾಮಾಜಿಕ ಸಾಮರಸ್ಯವೂ ಮುಖ್ಯ ; ಸಂತ್ರಸ್ತರ ಗೌರವಿಸುವ ಕೆಲಸ ಆಗಿಲ್ಲ

Team Udayavani, May 5, 2023, 11:53 AM IST

ರಾಜಕೀಯ ಧರ್ಮ ಮರೆತವರಿಗೆ ತಕ್ಕ ಉತ್ತರ ಕೊಡಿ: ಮಲ್ಲಿಕಾರ್ಜುನ ಚರಂತಿಮಠ

ಬಾಗಲಕೋಟೆ: ರಾಜಕೀಯ ಮೂಲ ಚಿಂತನೆಗಳನ್ನೇ ಮರೆತು, ರಾಜಕೀಯ ಧರ್ಮ ಪಾಲಿಸದೇ ಆಡಳಿತ ನೀಡುತ್ತಿರುವ ನಾಯಕರಿಗೆ ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದ ಜನರು ತಕ್ಕ ಉತ್ತರ ನೀಡಲಿದ್ದಾರೆ. ಎಲ್ಲೆಡೆ ಆಟೋ ರಿಕ್ಷಾ ಚಿಹ್ನೆಗೆ ಬೆಂಬಲ ವ್ಯಕ್ತವಾಗುತ್ತಿದ್ದು, ಜನ ಆಶೀರ್ವದಿಸುವ ಮೂಲಕ 1983ರ ಇತಿಹಾಸ ಮರುಕಳಿಸಲಿದೆ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಹೇಳಿದರು.

ನಗರದ ಕೌಲಪೇಠ ಸೇರಿದಂತೆ ವಿವಿಧಓಣಿಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಈ ಕ್ಷೇತ್ರದಿಂದ ಹಲವು ಬಾರಿ ಆಯ್ಕೆಯಾದವರು, ಬಡವರ ಕಣ್ಣೀರು ಒರೆಸುವ ಕೆಲಸ ಮಾಡಿಲ್ಲ. ವಿದ್ಯಾವಂತರಿಗೆ
ಕೆಲಸ ಕೊಡಿಸುವ ಕಾರ್ಯವಾಗಿಲ್ಲ. ಇದರಿಂದ ಇಡೀ ಬಾಗಲಕೋಟೆ ನಗರ, ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ ಎಂದರು.

ಜನರ ಸ್ವಾವಲಂಬನೆಯ ಬದುಕಿಗೆ ಯಾವ ಆಸರೆಯೂ ಇಲ್ಲ. ಮನೆ-ಭೂಮಿ ಕಳೆದುಕೊಂಡ ಸಂತ್ರಸ್ತರನ್ನು, ಸ್ವಾತಂತ್ರ್ಯ ಯೋಧರಂತೆ ಕಾಣಬೇಕು ಎಂದು ಹಿರಿಯರು ಹೇಳುತ್ತಾರೆ. ಆದರೆ, ನಮ್ಮಲ್ಲಿ ಸಂತ್ರಸ್ತರನ್ನು ಕಡೆಯಾಗಿ ನೋಡಲಾಗುತ್ತಿದೆ. ಬಿಟಿಡಿಎ ಕಚೇರಿಗೆ ಹೋದರೆ, ಹಣ ಕೊಡದೇ ಯಾವ ಕೆಲಸವೂ ಆಗಲ್ಲ. ಇಂತಹ ಹಲವಾರು
ಸಮಸ್ಯೆಗಳ ಮಧ್ಯೆ ಈಗ ಚುನಾವಣೆ ಬಂದಿದೆ. ಜನರು, ನಿಮ್ಮ ಕೆಲಸಕ್ಕಾಗಿ ಕೈ ಕಟ್ಟಿಕೊಂಡು ನಿಲ್ಲುವ ಸಂಪ್ರದಾಯಕ್ಕೆ ಕೊನೆ ಹಾಡಬೇಕು. ಮತದಾರಿಗೆ ಈಗ ಬಹುದೊಡ್ಡ ಅವಕಾಶವಿದೆ. ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸಬೇಕು. ಯಾವುದೇ ಜಾತಿ, ಆಮಿಷಗಳಿಗೆ ಬಲಿಯಾಗಬೇಡಿ. ನಿರ್ಭಯದಿಂದ ಬದಲಾವಣೆಗೆ
ಮುಂದಾಗಿ ಎಂದು ಮನವಿ ಮಾಡಿದರು.

ಬಾಗಲಕೋಟೆಯಲ್ಲಿ ಬಹುತೇಕರ ಜನರು ನೆಮ್ಮದಿಯಾಗಿ ಬದುಕುತ್ತಿಲ್ಲ. ಭಯದಲ್ಲೇ ಬದುಕುವ ಪರಿಸ್ಥಿತಿ ಇದೆ. ಇದಕ್ಕೆ ಕಡಿವಾಣ ಹಾಕಬೇಕು. ಎಲ್ಲವೂ ನನ್ನಿಂದಲೇ ಎನ್ನುವವರಿಗೆ ಮತದಾನದ ಮೂಲಕ ಬುದ್ದಿ ಕಲಿಸಬೇಕು.
ಕ್ಷೇತ್ರದ ಅಭಿವೃದ್ಧಿ ಎಷ್ಟು ಮುಖ್ಯವೋ, ಸಮಾಜದಲ್ಲಿ ಶಾಂತಿ-ನೆಮ್ಮದಿ ನೆಲೆಸುವುದೂ ಅಷ್ಟೇ ಮುಖ್ಯ ಎಂದು ಮಲ್ಲಿಕಾರ್ಜುನ ಚರಂತಿಮಠ ಹೇಳಿದರು.

ಮತದಾರರು ಕ್ಷೇತ್ರದ ಅಭಿವೃದ್ಧಿಗೆ, ಸಮಾಜ ಸೇವೆಯ ಮನಸ್ಸು ಹೊಂದಿರುವ, ಸೌಹಾರ್ದಯುತ ಕಾಪಾಡುವಂತಹ ನಾಯಕನನ್ನು ಆಯ್ಕೆ ಮಾಡಲು ಸಿದ್ಧರಾಗಿದ್ದಾರೆ. ಎಲ್ಲೆಡೆ ಆಟೋರಿಕ್ಷಾ ಚಿಹ್ನೆಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಮುಖಂಡರಾದ ಸಂತೋಷ ಹೊಕ್ರಾಣಿ, ಬಸವರಾಜ ಕಟಗೇರಿ, ರವಿ ಕುಮಟಗಿ, ಅಶೋಕ ಮುತ್ತಿನಮಠ, ಅಶೋಕ ಮಹೇಂದ್ರಕರ, ನಾಗರಾಜ ಕೆರೂರ, ಸಚಿನ್‌ ಮರಿಶೆಟ್ಟಿ, ಸಂಜೀವ ಡಿಗ್ಗಿ, ಶ್ರೀಶೈಲ ಅಂಗಡಿ, ರಾಜು ಗೌಳಿ, ಅರುಣ ಲೋಕಾಪುರ, ಶಂಕರ ಮಗಜಿ, ವಿಶಾಲ ಮಾಂಡಗಿ, ಮುತ್ತು ಸಜ್ಜನ, ಅಶೋಕ ಸಾಳಿಂಕೆ, ವಿಜಯ ಮನಗೂಳಿ, ಶಂಕ್ರಯ್ಯ ಹಂಚಿನಮಠ, ವೀರೇಶ ಹಿರೇಮಠ, ಚರಣ ಜಾಧವ, ವಿಠಲ ಕಾಳಬರ, ಈರಣ್ಣ ವಿಜಯಪುರ,
ಹನಮಂತ ಕರಾಡೆ, ನಾಗರಾಜ ಕಾಂಬಳೆ, ಶಾಂತಾಬಾಯಿ ಗೋಣಿ, ವಿಜಯಲಕ್ಷ್ಮೀ ಅಂಗಡಿ, ಗಂಗಮ್ಮ ರಜಪೂತ, ಉಮಾ ಗವಿಮಠ, ಸುಭದ್ರಾ ದಶಮನಿ, ಸಂಗಮ್ಮ ನಾಶಿ, ರೇಖಾ ಮುರಡಿ ಮುಂತಾದವರು ಪಾಲ್ಗೊಂಡಿದ್ದರು.

ಜನರ ಸ್ವಾವಲಂಬನೆಯ ಬದುಕಿಗೆ ಯಾವ ಆಸರೆಯೂ ಇಲ್ಲ. ಮನೆ-ಭೂಮಿ ಕಳೆದಕೊಂಡ ಸಂತರಸ್ತರನ್ನು, ಸ್ವಾತಂತ್ರ್ಯ ಯೋಧರಂತೆ ಕಾಣಬೇಕು ಎಂದು ಹಿರಿಯರು ಹೇಳುತ್ತಾರೆ. ಆದರೆ, ನಮ್ಮಲ್ಲಿ ಸಂತ್ರಸ್ತರನ್ನು ಅತ್ಯಂತ ಕಡೆಯಾಗಿ ನೋಡಲಾಗುತ್ತಿದೆ. ಬಿಟಿಡಿಎ ಕಚೇರಿಗೆ ಹೋದರೆ, ಹಣ ಕೊಡದೇ ಯಾವ ಕೆಲಸವೂ ಆಗಲ್ಲ. ಇಂತಹ ಹಲವಾರು ಸಮಸ್ಯೆಗಳ ಮಧ್ಯೆ ಈಗ ಚುನಾವಣೆ ಬಂದಿದೆ. ಜನರು, ನಿಮ್ಮ ಕೆಲಸಕ್ಕಾಗಿ ಕೈಕಟ್ಟಿಕೊಂಡು ನಿಲ್ಲುವ ಸಂಪ್ರದಾಯಕ್ಕೆ ಕೊನೆ ಹಾಡಬೇಕು.
-ಮಲ್ಲಿಕಾರ್ಜುನ ಚರಂತಿಮಠ,
ಪಕ್ಷೇತರ ಅಭ್ಯರ್ಥಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.