ನಿರುದ್ಯೋಗ ತೊಲಗಿಸಿ ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ: ಮಲ್ಲಿಕಾರ್ಜುನ ಚರಂತಿಮಠ

ಪರಿಹಾರ ಕೊಟ್ಟು ಮನೆಗೆ ಜೆಸಿಬಿ ಹಚ್ಚುವ ಕೆಲಸ ನಡೆಯಲ್ಲ

Team Udayavani, May 6, 2023, 9:59 AM IST

ನಿರುದ್ಯೋಗ ತೊಲಗಿಸಿ ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ: ಮಲ್ಲಿಕಾರ್ಜುನ ಚರಂತಿಮಠ

ಬಾಗಲಕೋಟೆ: ನಮ್ಮ ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ. ವಿದ್ಯಾವಂತರು, ದುಡಿಯಲು ಬೇರೆಡೆ
ಹೋಗಬೇಕು. ಇಲ್ಲದಿದ್ದರೆ ಕೆಲಸವಿಲ್ಲದೇ ಇಲ್ಲಿಯೇ ಇರಬೇಕು. ಇಂತಹ ಪರಿಸ್ಥಿತಿ ತೊಲಗಿಸಿ, ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಹೇಳಿದರು.

ನಗರದ ಹಳೆಯ ಐಬಿ ಹತ್ತಿರದ ಕೊಪ್ಪ ವಕೀಲರ ಮನೆಯಿಂದ ಪ್ರಚಾರ ಆರಂಭಿಸಿ ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿಯ ಪಣ ತೊಟ್ಟಿರುವ ಸ್ವಾಭಿಮಾನಿ ಕಾರ್ಯಕರ್ತರ ಆಟೋ ಚಿನ್ಹೆಗೆ ಮತದಾರರು ತಮ್ಮ ಮತ ನೀಡುವ ಮೂಲಕ ಹೊಸ ಬದಲಾವಣೆಗೆ ಅವಕಾಶ ನೀಡಬೇಕು. ಸಾಮಾನ್ಯ ಜನರ ಬದುಕು ಸದೃಢಗೊಂಡಾಗ ಮಾತ್ರ, ಆ ಕ್ಷೇತ್ರ ಸಮಗ್ರ ಅಭಿವೃದ್ಧಿ ಹೊಂದಿದೆ ಎನ್ನಬಹುದು. ಆದರೆ, ಸಂತ್ರಸ್ತರ ಕ್ಷೇತ್ರದಲ್ಲಿ ಸಾವಿರಾರು ಸಮಸ್ಯೆಗಳೊಂದಿಗೆ ಇಲ್ಲಿನ ಜನರು ಬದುಕುವಂತಾಗಿದೆ ಎಂದರು.

ಪ್ರತಿದಿನ ಸಾರ್ವಜನಿಕ ಕ್ಷೇತ್ರದಲ್ಲಿ ಇರುವಂತಹ ವ್ಯಕ್ತಿಗೆ ನಾನೇ ಎಲ್ಲ, ನಾನಿಲ್ಲದೇ ಏನು ಇಲ್ಲ ಎನ್ನುವ ದುರಹಂಕಾರ ಇರಬಾರದು. ಕಾರ್ಯಕರ್ತರು, ಜನ ಸಾಮಾನ್ಯರನ್ನು ಪ್ರೀತಿ-ಗೌರವದಿಂದ ಕಾಣಬೇಕು. ಈ ಬಾರಿ ಜನರು ಮತವೆಂಬ ಅಸ್ತದಿಂದ ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿದರು.

ಸ್ವಾಭಿಮಾನಿ ಕಾರ್ಯಕರ್ತರು ಕ್ಷೇತ್ರ ಅಭಿವೃದ್ಧಿಯ ಚಿಂತನೆ ಇಟ್ಟುಕೊಂಡಿದೆ. ದೊಡ್ಡ ದೊಡ್ಡ ಕೈಗಾರಿಕೆಗಳನ್ನು ಕ್ಷೇತ್ರಕ್ಕೆ ತರುವ ಮೂಲಕ ಉದ್ಯೋಗ ಕಲ್ಪಿಸುವ ಮೂಲಕ ಯುವಕ-ಯುವತಿಯರಿಗೆ ಉದ್ಯೋಗ ಒದಗಿಸುಕೊಡುವ ನಿರ್ಧಾರ ಕೈಗೊಂಡಿದ್ದೇವೆ. ಇದಕ್ಕೆ ಕ್ಷೇತ್ರದ ಜನರ ಆಶೀರ್ವಾದ ಅಗತ್ಯ ಎಂದರು.

ಮನೆಗೆ ಜೆಸಿಬಿ ಪ್ರವೃತ್ತಿ ಬೇಡ: ಸಂತ್ರಸ್ತರಿಗೆ ಪರಿಹಾರ ಕೊಟ್ಟ ತಕ್ಷಣ ಅವರು ಬೇರೆ ಮನೆ ಕಟ್ಟಿಕೊಳ್ಳಲು ಆಗಲ್ಲ. ಆದರೆ, ಬಾಗಲಕೋಟೆಯಲ್ಲಿ ಪರಿಹಾರ ಕೊಟ್ಟ ತಕ್ಷಣ ಮನೆ ಕೆಡವಿ ಹಾಕುವ ಕೆಟ್ಟ ಪದ್ಧತಿ ಇದೆ. ಬಡವರ ಬಗ್ಗೆ ಮಾನವೀಯತೆಯೇ ಇಲ್ಲದಂತೆ ವರ್ತಿಸಲಾಗುತ್ತಿದೆ. ಇಂತಹ ವ್ಯಕ್ತಿಗಳನ್ನು ದೂರವಿಡಿ. ಈ ಬಾರಿ ಬಾಗಲಕೋಟೆಯ ಜನರು ಮತ ಹಾಕುವಲ್ಲಿ ಸ್ವಾಭಿಮಾನ ಹಾಗೂ ಪ್ರಜ್ಞಾವಂತಿಕೆ ತೋರಬೇಕು. ಇಲ್ಲದಿದ್ದರೆ ಇಲ್ಲಿ ಸಂತ್ರಸ್ತರು ಸಹಿತ
ಬಹುತೇಕರು ಐದು ವರ್ಷ ನೆಮ್ಮದಿಯಿಂದ ಬದುಕಲು ಸಾಧ್ಯವಾಗಲ್ಲ ಎಂದು ಹೇಳಿದರು.

ಹವೇಲಿಯಲ್ಲಿ ಬಿರುಸಿನ ಪ್ರಚಾರ: ಸ್ವಾಭಿಮಾನಿ ಬಳಗದ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಅವರು ನಗರದ ಹವೇಲಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹವೇಲಿಯ ಜನರು ನಿತ್ಯವೂ ದುಡಿದು ಬದುಕುವ
ಸ್ವಾಭಿಮಾನ ಜನ. ಈ ಜನರೊಂದಿಗೆ ನಾನು ಸದಾ ಇರುವೆ. ಕೊರೊನಾ ಸಂದರ್ಭದಲ್ಲಿ ಇಲ್ಲಿನ ಜನರ ಕಷ್ಟಕ್ಕೆ ಸ್ಪಂದಿಸುವ ಪ್ರಯತ್ನ ಮಾಡಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳನ್ನು ತಿರಸ್ಕರಿಸಿ, ನಿಮ್ಮ ಕಷ್ಟಕ್ಕೆ ಸ್ಪಂದಿಸುವ, ಗೌರವಯುತವಾಗಿ ನಡೆದುಕೊಳ್ಳುವ ವ್ಯಕ್ತಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಹಿರಿಯ ವಕೀಲರಾದ ಎ.ಜಿ. ಕೊಪ್ಪ, ಮುಖಂಡರಾದ ಸಂತೋಷ ಹೊಕ್ರಾಣಿ, ಬಸವರಾಜ ಕಟಗೇರಿ, ರವಿ ಕುಮಟಗಿ, ಅಶೋಕ ಮುತ್ತಿನಮಠ, ಅಶೋಕ ಮಹೇಂದ್ರಕರ, ನಾಗರಾಜ ಕೆರೂರ, ಸಚಿನ ಮರಿಶೆಟ್ಟಿ, ಸಂಜೀವ ಡಿಗ್ಗಿ, ಶ್ರೀಶೈಲ ಅಂಗಡಿ, ರಾಜು ಗೌಳಿ, ಅರುಣ ಲೋಕಾಪುರ, ಶಂಕರ ಮಗಜಿ, ವಿಶಾಲ ಮಾಂಡಗಿ, ಮುತ್ತು ಸಜ್ಜನ, ಅಶೋಕ ಸಾಳಿಂಕೆ, ವಿಜಯ ಮನಗೂಳಿ, ಶಂಕ್ರಯ್ಯಹಂಚಿನಮಠ, ವಿರೇಶ ಹಿರೇಮಠ, ಚರಣ ಜಾಧವ, ವಿಠಲ ಕಾಳಬರ,
ಈರಣ್ಣ ವಿಜಯಪುರ, ಹನಮಂತ ಕರಾಡೆ, ನಾಗರಾಜ ಕಾಂಬಳೆ, ಶಾಂತಾಬಾಯಿ ಗೋಣಿ, ವಿಜಯಲಕ್ಷ್ಮೀ
ಅಂಗಡಿ, ಗಂಗಮ್ಮ ರಜಪೂತ, ಉಮಾ ಗವಿಮಠ, ಸುಭದ್ರಾ ದಶಮನಿ, ಸಂಗಮ್ಮ ನಾಶಿ, ರೇಖಾ ಮುರಡಿ ಹಾಜರಿದ್ದರು.

ಟಾಪ್ ನ್ಯೂಸ್

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

11-

Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ  

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.