ಶೀಘ್ರದಲ್ಲಿಯೇ ಅಕ್ರಮ ಮನೆಗಳಿಗೆ ಸಕ್ರಮ ಹಕ್ಕು ಪತ್ರಗಳ ವಿತರಣೆ – ಸವದಿ


Team Udayavani, Feb 19, 2022, 7:18 PM IST

ಶೀಘ್ರದಲ್ಲಿಯೇ ಅಕ್ರಮ ಮನೆಗಳಿಗೆ ಸಕ್ರಮ ಹಕ್ಕು ಪತ್ರಗಳ ವಿತರಣೆ – ಸವದಿ

ರಬಕವಿ-ಬನಹಟ್ಟಿ: 94-ಸಿ ಮತ್ತು 94 ಸಿಸಿ ಅಡಿಯಲ್ಲಿ ಸರ್ಕಾರಿ ಜಾಗೆಯಲ್ಲಿ ಅಕ್ರಮವಾಗಿ ವಾಸವಾಗಿರುವವರಿಗೆ ಜಾಗೆಯನ್ನು ಸಕ್ರಮ ಮಾಡಿ ಹಕ್ಕು ಪತ್ರಗಳ ವಿತರಣೆಯ ಕಾರ್ಯವನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಶನಿವಾರ ರಬಕವಿ-ಬನಹಟ್ಟಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ 94-ಸಿ ಮತ್ತು 94-ಸಿ ಸಿಸಿ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ರಬಕವಿ ಬನಹಟ್ಟಿ ತಾಲ್ಲೂಕಿನ ನಾವಲಗಿ, ಚಿಮ್ಮಡ, ಆಸಂಗಿ, ಮದಭಾವಿ, ಹಿಪ್ಪರಗಿ, ಹಳಿಂಗಳಿ ಹಾಗೂ ಕೆಸರಗೊಪ್ಪ ಗ್ರಾಮಗಳಲ್ಲಿ ಆಕ್ರಮವಾಗಿ ಮನೆ ಕಟ್ಟಿಕೊಂಡ 2340 ಫಲಾನುಭವಿಗಳಿದ್ದಾರೆ. ಈಗಾಗಲೇ 532 ಫಲಾನುಭವಿಗಳ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲಾಗಿದೆ. ಇನ್ನೂ ಉಳಿದ ಅರ್ಜಿಗಳನ್ನು ಕೂಡಲೇ ಸಲ್ಲಿಸಲಾಗುವುದು. ತೇರದಾಳದಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಲಾಗುತ್ತಿತ್ತು. ಈಗ ಕೇತ್ರದಲ್ಲಿ ಆನ್ಲೈನ್ ಅರ್ಜಿಗಳನ್ನು ರಬಕವಿ ಬನಹಟ್ಟಿ, ಮಹಾಲಿಂಗಪುರ ಮತ್ತು ತೇರದಾಳದಲ್ಲಿ ಸಲ್ಲಿಸುವ ಕಾರ್ಯ ನಡೆದಿದೆ.

ಇನ್ನೂ ರಬಕವಿ ಬನಹಟ್ಟಿ, ತೇರದಾಳ ಹಾಗೂ ಆರು ಗ್ರಾಮ ಪಂಚಾಯ್ತಿಗಳಲ್ಲಿ ಕೂಡಾ ಅರಣ್ಯ ಇಲಾಖೆಯ ಜಾಗೆಯನ್ನು ಅತಿಕ್ರಮಣ ಮಾಡಿಕೊಂಡು ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅದಕ್ಕೂ ಕೂಡಾ ಚಾಲನೆ ನೀಡಲಾಗಿದೆ. ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸುವ ನಿಮಿತ್ತವಾಗಿ ಅರಣ್ಯ ಇಲಾಖೆಯ ಅಧಿಕಾರಿಯನ್ನು ಇಲ್ಲಿಯೇ ನೇಮಿಸಲಾಗಿದೆ. ೧೩೦ ಎಕರೆ ಭೂ ಪ್ರದೇಶ ಡಿಸ್ ಫಾರೆಸ್ಟ್ ಆಗಿದೆ. ಈ ಪ್ರದೇಶದಲ್ಲಿಯೂ ಆಕ್ರಮವಾಗಿ ವಾಸಿಸುವವರೆಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗುವುದು. ಅದೇ ರೀತಿಯಾಗಿ ಕಂದಾಯ ಮತ್ತು ಅರಣ್ಯ ಇಲಾಖೆಯ ಸ್ಥಳಗಳಲ್ಲಿ ಆಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಒಟ್ಟು ಎಲ್ಲರಿಗೂ ನಾಲ್ಕಾರು ತಿಂಗಳುಗಳಲ್ಲಿ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗುವುದು. ಅದೇ ರೀತಿಯಾಗಿ ರಬಕವಿ ಬನಹಟ್ಟಿ ನಗರ ಸಭೆಯ ವ್ಯಾಪ್ತಿಯ ಸರ್ವೆ ನಂ. 45 ರಲ್ಲಿಯ ಸ್ಲಮ್ ಪ್ರದೇಶದಲ್ಲಿ ಆಕ್ರಮವಾಗಿ ಮನೆ ಕಟ್ಟಿಕೊಂಡ 83 ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಈಗಾಗಲೇ ವಿತರಣೆ ಮಾಡಲಾಗಿದೆ. ಆದಷ್ಟು ಬೇಗನೆ ಬಡವರಿಗೆ ಶೀಘ್ರದಲ್ಲಿ ಮನೆಗಳನ್ನು ಕಟ್ಟಿಕೊಳ್ಳುವ ಕಾರ್ಯವನ್ನು ಕೈಗೊಳ್ಳಲಾಗುವುದು. ಆಕ್ರಮ ಸಕ್ರಮ ನಿಮಿತ್ತವಾಗಿ ಪ್ರತಿ ಶನಿವಾರ ಅಧಿಕಾರಿಗಳ ಸಭೆಯನ್ನು ಕರೆಯಲಾಗುತ್ತಿದೆ. ಈ ಕಾರ್ಯವನ್ನು ಅದಷ್ಟು ಬೇಗನೆ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಮಾಡುತ್ತಿದ್ದಾರೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ತೇರದಾಳದ ಆಧಾರ ಕಾರ್ಡ್ ತಿದ್ದುಪಡೆ ಕಾರ್ಯ ಸ್ಥಗಿತಗೊಂಡಿತ್ತು. ಅದು ಕೂಡಾ ಶುಕ್ರವಾರದಿಂದ ಅರಂಭವಾಗಿದೆ ಎಂದು ಸವದಿ ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಎಸ್.ಬಿ.ಇಂಗಳೆ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ಪೌರಾಯುಕ್ತ ಶ್ರೀನಿವಾಸ ಜಾಧವ, ವಲಯ ಅರಣ್ಯಾಧಿಕಾರಿ ವಿಜಯಕುಮಾರ ಕಾಳಪ್ಪನವರ, ತೇರದಾಳ ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಮಹಾಲಿಂಗಪುರ ಪುರಸಭೆಯ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಉಪತಹಶೀಲ್ದಾರ ಬಸವರಾಜ ಬಿಜ್ಜರಗಿ, ಸುರೇಶ ನೀಲನೂರ, ಮಲ್ಲು ನಾವಿ, ಎಂ.ಎಸ್.ರೂಗಿ, ಮಲ್ಲಿಕಾರ್ಜುನ ಖವಟಕೊಪ್ಪ, ರಾಜಶೇಖರ ಗುದಗೇನವರ, ಮಂಜುನಾಥ ನೀಲನ್ನವರ ಇದ್ದರು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.