Mudhol: ತಾಯಿ-ಮಗು ಆಸ್ಪತ್ರೆ ಅನುಷ್ಠಾನಕ್ಕೆ ಕ್ರಮ: ಸಚಿವ ದಿನೇಶ್ ಗುಂಡೂರಾವ್
Team Udayavani, Jun 27, 2024, 4:29 PM IST
ಮುಧೋಳ : ಮುಧೋಳ ತಾಲೂಕಿಗೆ ತಾಯಿ-ಮಗು ಆಸ್ಪತ್ರೆ ಮಂಜೂರಾಗಿದ್ದು, ಆಸ್ಪತ್ರೆ ಕಾರ್ಯಾರಂಭಕ್ಕೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಟಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆಯುತ್ತಿರುವ ಮುಧೋಳ ನಗರಕ್ಕೆ ಅಗತ್ಯವಿರುವ ತಾಯಿ-ಮಗು ಆಸ್ಪತ್ರೆಗೆ ಆರಂಭಕ್ಕೆ ಹೆಚ್ಚಿನ ಒತ್ತಡವಿತ್ತು, ಇದೀಗ ಆಸ್ಪತ್ರೆ ಮಂಜೂರಾಗಿದ್ದು ಕೆಲವೇ ದಿನಗಳಲ್ಲಿ ಆಸ್ಪತ್ರೆ ಕಾರ್ಯಾರಂಭಗೊಳ್ಳಲಿದೆ ಎಂದರು.
ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿದ್ದು ಮುಂಬರುವ ದಿನಗಳಲ್ಲಿ ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆಸ್ಪತ್ರೆಯಲ್ಲಿ ಸುಸಜ್ಜಿತ ಆಕ್ಸಿಜನ್ ಘಟಕವಿದ್ದು ಅಗತ್ಯ ತಜ್ಞರ ತಂಡವಿರದ ಕಾರಣ ಹಾಳಾಗುತ್ತಿದೆ. ಮುಂದಿನ ದಿನಗಳಲ್ಲಿ ಅಗತ್ಯ ತಜ್ಞರ ತಂಡವನ್ನು ನೇಮಿಸಿ ಆಕ್ಸಿಜನ್ ಬಳಕೆಗೆ ಕ್ರಮವಹಿಸಲಾಗುವುದು. ಇದರಿಂದ ಹೊರಗಡೆಯಿಂದ ಆಕ್ಸಿಜನ್ ಖರೀದಿಸುವ ಆರ್ಥಿಕ ಹೊರೆ ತಗ್ಗಿಸಲಾಗುವುದು ಎಂದರು.
ಆಸ್ಪತ್ರೆಯಲ್ಲಿನ ಸ್ವಚ್ಛತೆ ಕಂಡು ಪ್ರಶಂಸೆ ವ್ಯಕ್ತಪಡಿಸಿದ ಸಚಿವರು ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಯನ್ನು ಒದಗಿಸುವಂತೆ ಸಿಬ್ಬಂದಿಗೆ ಸೂಚಿಸಿದರು.
ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಪ್ರಧಾನಕಾರ್ಯದರ್ಶಿ ಹರ್ಷಾಗುಪ್ತಾ, ಡಾ. ಜಿ.ಎನ್.ಶ್ರೀನಿವಾಸ, ಡಾ. ಅನಂತ ದೇಸಾಯಿ, ಡಿಎಚ್ಒ ಜಯಶ್ರೀ ಎಮ್ಮಿ, ಡಾ. ರಾಜಕುಮಾರ ಯರಗಲ್ಲ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಟಿಎಚ್ಒ ವೆಂಕಟೇಶ ಮಲಘಾಣ, ಡಾ.ಎ.ಎ.ಸೈರ್ಯವಂಶಿ, ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ: NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.