Rabkavi Banhatti; ಹಿಪ್ಪರಗಿ ಬ್ಯಾರೇಜ್ ಗೆ ಸಚಿವ ಕೃಷ್ಣ ಭೈರೇಗೌಡ ಭೇಟಿ
Team Udayavani, Jul 30, 2024, 8:47 PM IST
ರಬಕವಿ-ಬನಹಟ್ಟಿ: ಕಂದಾಯ ಸಚಿವ ಕೃಷ್ಣ ಭೆ„ರೇಗೌಡ ಸಮೀಪದ ಹಿಪ್ಪರಗಿ ಬ್ಯಾರೇಜ್‌ಗೆ ಮಂಗಳವಾರ ಭೇಟಿ ನೀಡಿ ನೀರಿನಮಟ್ಟ ಪರಿಶೀಲಿಸಿದರು.
ಜತೆಗಿದ್ದ ತೇರದಾಳ ಶಾಸಕ ಸಿದ್ದು ಸವದಿ, ಅಥಣಿ ಶಾಸಕ ಲಕ್ಷಣ ಸವದಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರಿಂದ ಮಾಹಿತಿ ಪಡೆದರು.
ಇದಕ್ಕಿಂತ ಮೊದಲು ಹಿಪ್ಪರಗಿ ಗ್ರಾಮದ ನೀರಾವರಿ ಇಲಾಖೆ ಕಾರ್ಯಾಲಯದಲ್ಲಿ ಬಾಗಲಕೋಟೆ-ಬೆಳಗಾವಿ ಜಿಲ್ಲೆಯ ಜನಪ್ರತಿನಿ ಧಿಗಳು, ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಇದೇ ಸಂದರ್ಭದಲ್ಲಿ ಹಳಿಂಗಳಿ, ತಮದಡ್ಡಿ ಗ್ರಾಮಸ್ಥರು ಪುನರ್ವಸತಿಗಾಗಿ ಹಾಗೂ ತೇರದಾಳ ತಾಲ್ಲೂಕಿಗೆ ತಾಲ್ಲೂಕು ಕಾರ್ಯಾಲಯಗಳನ್ನು ನೀಡಬೇಕು ಎಂದು ಆಗ್ರಹಿಸಿ ತೇರದಾಳ ನಾಗರಿಕರು ನೀಡಿದ ಮನವಿಗಳನ್ನು ಸ್ವೀಕರಿಸಿದ ಸಚಿವರು ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ತೇರದಾಳ ಶಾಸಕ ಸಿದ್ದು ಸವದಿ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಅಥಣಿ ಶಾಸಕ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಕಾಂಗ್ರೆಸ್ ಮುಖಂಡರಾದ ಸುಶೀಲಕುಮಾರ ಬೆಳಗಲಿ, ಸಿದ್ದು ಕೊಣ್ಣೂರ ಸೇರಿದಂತೆ ಅನೇಕರು ಇದ್ದರು.
ಇದೇ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ಗಲಗಲಿ ಬ್ಯಾರೇಜ್ ದಿಂದಾಗಿ ಈ ಭಾಗದ ರೈತರ ಜಮೀನುಗಳಿಗೆ ತೊಂದರೆಯಾಗಿದೆ. ಆದ್ದರಿಂದ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಮಟ್ಟದಲ್ಲಿ ನೀರನ್ನು ಬಿಡಲು ಕ್ರಮ ತೆಗೆದುಕೊಳ್ಳಬೇಕು.
ಕ್ಷೇತ್ರದ ಗ್ರಾಮಗಳಾದ ಮುಳಗಡೆ ಗ್ರಾಮಗಳಾದ ಅಸ್ಕಿ, ತಮದಡ್ಡಿ, ಹಳಿಂಗಳಿ, ಕುಲಹಳ್ಳಿ ಮತ್ತು ಮದನಮಟ್ಟಿ ಗ್ರಾಮಗಳ ಪುನರ್ವಸತಿಗಾಗಿ ಆದಷ್ಟು ಬೇಗನೆ ಕ್ರಮ ತೆಗೆದುಕೊಳ್ಳುವಂತೆ ಸಚಿವರಿಗೆ ತಿಳಿಸಲಾಯಿತು ಎಂದರು.
ಈ ಕುರಿತು ಸಚಿವರು ಕೂಡಾ ಅಧಿಕಾರಿಗಳಿಗೆ ಆದಷ್ಟು ಬೇಗನೆ ಈ ಕಾರ್ಯದ ಕುರಿತು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.
ಪುನರ್ವಸತಿಯ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಈ ಭಾಗದ ಜನಪ್ರತಿನಿಧಿಗಳು, ಸಂತ್ರಸ್ತರ ಜೊತೆಗೂಡಿ ಸಭೆಯನ್ನು ಮಾಡುವಂತೆ ಸಚಿವರಿಗೆ ತಿಳಿಸಿದರು.
ಈಗಾಗಲೇ ಪುನರ್ವಸತಿಗಾಗಿ ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆಯನ್ನು ಮಾಡಲಾಗಿದ್ದು, ಈ ಕುರಿತು ಆದಷ್ಟು ಬೇಗನೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ ಎಂದು ಸವದಿ ತಿಳಿಸಿದರು.
ಘಟಪ್ರಭಾ ನದಿಯ ನೀರಿನ ಮಟ್ಟ ಕಡಿಮಯಾಗುತ್ತಿದ್ದು, ಕೃಷ್ಣಾ ನದಿಯ ನೀರಿನ ಮಟ್ಟ ಇನ್ನೂ ಒಂದು ವಾರಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಇರಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.