ಆಸರೆ ಮನೆಗಳಿಗೆ ಸ್ಥಳಾಂತರಗೊಳ್ಳಿ : ಉಸ್ತುವಾರಿ ಸಚಿವ ಉಮೇಶ್ ಕತ್ತಿ
Team Udayavani, Jul 24, 2021, 8:54 PM IST
ಮಹಾಲಿಂಗಪುರ : ಹಳೆ ನಂದಗಾಂವ ಗ್ರಾಮದಲ್ಲಿ ಉಳಿದುಕೊಂಡಿರುವ ಕುಟುಂಬಸ್ಥರು ಹೊಸ ನಂದಗಾಂವ ಗ್ರಾಮದಲ್ಲಿ ನಿರ್ಮಿಸಿರುವ ಆಸರೆ ಮನೆಗಳಿಗೆ ಸ್ಥಳಾಂತರಗಗೊಂಡು ಪ್ರವಾಹದಿಂದ ಶಾಸ್ವತ ಮುಕ್ತಿ ಹೊಂದಿರಿ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಹೇಳಿದರು.
ಶನಿವಾರ ಸಂಜೆ ಪ್ರವಾಹ ಪೀಡಿತ ನಂದಗಾಂವ ಮತ್ತು ಢವಳೇಶ್ವರ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಅವಲೋಕ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಘಟಪ್ರಭಾ ನದಿಗೆ ಸದ್ಯ ೧ ಲಕ್ಷ ೩೭ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನೀರು ಸುತ್ತುವರೆದ ಕಾರಣ ಹಳೆ ನಂದಗಾಂವ ಗ್ರಾಮದಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಜೊತೆಗೆ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಇರಲು ಅನುಕೂಲ ಇಲ್ಲದವರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಳ್ಳಲು ವಿನಂತಿಸಿದರು. ಆಸರೆ ಮನೆ ಹಂಚಿಕೆ ಸಮಸ್ಯೆಯನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸಲು ಜಮಖಂಡಿ ಎಸಿ ಸಿದ್ದು ಹುಲ್ಲೋಳ್ಳಿ ಅವರಿಗೆ ಸೂಚಿಸಿದರು.
ಆಲಮಟ್ಟಿ ಜಲಾಶಯದಿಂದ ಬಿಡುತ್ತಿರುವ ೩.೫೦ ಲಕ್ಷ ಕ್ಯೂಸೆಕ್ ನೀರನ್ನು ೪.೫೦ ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲು ಸೂಚಿಸಲಾಗಿದೆ. ಇನ್ನೂ ಎರಡು ತಿಂಗಳು ಮಳೆಗಾಲ ಇರುವ ಕಾರಣ ಎಲ್ಲಾ ಜಲಾಶಯಗಳನ್ನು ಭರ್ತಿಮಾಡಿಕೊಂಡು ಹೆಚ್ಚಿನ ಪ್ರವಾಹ ಉಂಟಾಗದಂತೆ ಹಿಂದೆ ನೀರು ಬರುವ ಪ್ರಮಾಣ ನೋಡಿಕೊಂಡು ಜಲಾಶಯದಿಂದ ನೀರನ್ನು ಹೊರಹಾಕಲು ಸೂಚಿಸಲಾಗಿದೆ ಎಂದರು.
ತೇರದಾಳ ಶಾಸಕ ಸಿದ್ದು ಸವದಿ, ಜಮಖಂಡಿ ಎಸಿ ಸಿದ್ದು ಹುಲ್ಲೋಳ್ಳಿ, ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ, ಜಿಪಂ ಮಾಜಿ ಸದಸ್ಯ ಮಹಾಂತೇಶ್ ಹಿಟ್ಟಿನಮಠ, ಬಿಜೆಪಿ ಮುಖಂಡರಾದ ಮನೋಹರ ಶಿರೋಳ, ಚನ್ನಪ್ಪ ಪಟ್ಟಣಶೆಟ್ಟಿ, ಸಂಜು ಬಾರಕೋಲ, ರಾಮಚಂದ್ರ ಜಾಧವ, ಮಲ್ಲಪ್ಪ ಗುರವ, ಶಿವಾನಂದ ಹುಣಶ್ಯಾಳ, ನೊಡೆಲ್ ಅಧಿಕಾರಿಗಳಾದ ಎಚ್.ಎಸ್.ಚಿತ್ತರಗಿ, ಡಿ.ಬಿ.ಪಠಾಣ, ಕಂದಾಯ ಅಧಿಕಾರಿ ಬಿ.ಆರ್.ತಾಳಿಕೋಟಿ, ಗ್ರಾಮಲೆಕ್ಕಾಧಿಕಾರಿ ತ್ರಿವೇಣಿ ದೇವರಮನಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.