ಸೋಂಕಿತರಲ್ಲಿ ಆನಂದ ತರುವ ಸಂಕಲ್ಪ

ಶಾಸಕರಿಂದ ನಿತ್ಯ ಊಟ-ಎರಡು ಆಂಬ್ಯುಲೆನ್ಸ್‌ | ಶಿಕ್ಷಕರ ಬಳದಿಂದ 250 ರೋಗಿಗಳಿಗೆ ಉಪಾಹಾರ

Team Udayavani, May 24, 2021, 5:22 PM IST

23 bgk-1b

ಮಲ್ಲೇಶ ರಾ. ಆಳಗಿ

ಜಮಖಂಡಿ: ಕೊರೊನಾ ಎರಡನೇ ಅಲೆಯಿಂದ ಸಂಕಷ್ಟಕ್ಕೊಳಗಾದ ಜಮಖಂಡಿ ಕ್ಷೇತ್ರ ವ್ಯಾಪ್ತಿಯ ಜನರಿಗೆ ಇಲ್ಲಿನ ಶಾಸಕ ಆನಂದ ನ್ಯಾಮಗೌಡ ಹಾಗೂ ವಿವಿಧ ಸಂಘ-ಸಂಸ್ಥೆಗಳು ಹಲವು ರೀತಿಯ ನೆರವು ನೀಡುತ್ತಿದ್ದು, ಜನರಿಂದ ಶ್ಲಾಘನೆಗೆ ಒಳಗಾಗಿದೆ.

ಶಾಸಕ ಆನಂದ ಸಿದ್ದು ನ್ಯಾಮಗೌಡ, ಸ್ವಂತ ಖರ್ಚಿನಲ್ಲಿ ನಗರದ ವಿಠÛಲಸಾಹೇಬ ಮಂದಿರ ಆವರಣದಲ್ಲಿ ಪ್ರತಿನಿತ್ಯ ಖಾಸಗಿ ಆಸ್ಪತ್ರೆಯ ಸುಮಾರು 200ಕ್ಕೂ ಹೆಚ್ಚು ಕೊರೊನಾ ಸೋಂಕಿತರಿಗೆ ಉಪಹಾರ ಮತ್ತು ಎರಡು ಹೊತ್ತು ಊಟದ ವ್ಯವಸ್ಥೆ ಮಾಡುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಕಳೆದ ಒಂದು ವಾರದಿಂದ ಆರಂಭಗೊಂಡ ಈ ಅನ್ನದಾಸೋಹ ಕಾಯಕದಲ್ಲಿ ಯಾವುದೇ ಪ್ರತಿಫಲ ಬಯಸದೇ ಅಂದಾಜು 60ಕ್ಕೂ ಜನರು, ಶಾಸಕರ ಆಶಯದಂತೆ ಕೆಲಸ ಮಾಡುತ್ತಿದ್ದಾರೆ. ಅಡಿಗೆ ತಯಾರಿಕೆಯಿಂದ ಹಿಡಿದು ರೋಗಿಗಳಿಗೆ ಆಹಾರ ಕಿಟ್‌ ತಲುಪಿಸುವರೆಗೆ ಎಲ್ಲ ರೀತಿ ಸುರಕ್ಷತಾ ಕ್ರಮ ಅಳವಡಿಸಿದ್ದಾರೆ.

ಲಾಕ್‌ಡೌನ್‌ ಮುಕ್ತಾಯಗೊಳಿಸುವರೆಗೆ ಪ್ರತಿನಿತ್ಯ 200 ಜನರಿಗೆ ಬೆಳಗ್ಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಉಪಾಹಾರದಲ್ಲಿ ಇಡ್ಲಿ, ದೋಸೆ, ಪಡ್ಡು, ಉಪ್ಪಿಟ್ಟು, ಅವಲಕ್ಕಿ ಮಧ್ಯಾಹ್ನ ಮತ್ತು ರಾತ್ರಿ ಎರಡು ಹೊತ್ತಿನ ಊಟದಲ್ಲಿ ಎರಡು ತರಹದ ಪಲ್ಲೆ, ಚಪಾತಿ, ಅನ್ನ, ಸಾರು, ಜತೆಗೆ ಒಂದು ಕಾಳು, ಇನ್ನೊಂದು ದಿನ ಹಣ್ಣು ನೀಡಲಾಗುತ್ತಿದೆ.

ಸರಕಾರಿ ಆಸ್ಪತ್ರೆಗಳಲ್ಲಿ, ಕೊರೊನಾ ಕೇರ್‌ ಸೆಂಟರ್‌ದಲ್ಲಿ ಉಪಾಹಾರ-ಊಟದ ಕಿಟ್‌ ಗಳನ್ನು ನೀಡುತ್ತಿಲ್ಲ. ಏಕೆಂದರೆ ಸರಕಾರ ಕೊರೊನಾ ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಆಹಾರ ಕಿಟ್‌ ನೀಡುತ್ತಿಲ್ಲ. ಸರಕಾರಿ ಆಸ್ಪತ್ರೆ ಮತ್ತು ಕೊರೊನಾ ಕೇರ್‌ ಸೆಂಟರ್‌ ಹೊರತು ಪಡಿಸಿ ಉಳಿದ ಎಲ್ಲ ಕೊರೊನಾ ಆಸ್ಪತ್ರೆಗಳಲ್ಲಿರುವ ಅಂದಾಜು 250 ರೋಗಿಗಳಿಗೆ ಉಪಾಹಾರ, ಊಟದ ಕಿಟ್‌ ನೀಡಲಾಗುತ್ತಿದೆ.

ನಗರದ ಓಮಿಸಾ ಕೊರೊನಾ ಆಸ್ಪತ್ರೆ, ಕೆಎಲ್‌ಇ ಕೊರೊನಾ ಆಸ್ಪತ್ರೆ, ಧನ್ವಂತರಿ ಮಲ್ಟಿಸ್ಪೇಷಾಲಿಟಿ ಕೊರೊನಾ ಆಸ್ಪತ್ರೆ, ಎಸ್‌.ಎಸ್‌.ಪಾಟೀಲ ಕೊರೊನಾ ಆಸ್ಪತ್ರೆಯಲ್ಲಿರುವ ಸೋಂಕು ರೋಗಿಳಿಗೆ ಉಪಾಹಾರ, ಊಟದ ಪೊಟ್ಟಣ ಪೂರೈಸಲಾಗುತ್ತಿದೆ. ಉಚಿತ ಆಂಬ್ಯುಲೆನ್ಸ್‌: ಶಾಸಕ ಆನಂದ ನ್ಯಾಮಗೌಡ, ಗ್ರಾಮೀಣ ಜನತೆಗೆ ದೂರದ ಆಸ್ಪತ್ರೆಗಳಿಗೆ ತೆರಳಲು ಆಗುವ ತೊಂದರೆ ಗಮನಿಸಿ ಗ್ರಾಮೀಣ ಭಾಗಕ್ಕೆ ಹೊಸದಾಗಿ ಆಂಬ್ಯುಲೆನ್ಸ್‌ ಸೇವೆ ಆರಂಭಸಿದ್ದಾರೆ.

ರೋಗಿಗಳು ಮನೆಯಲ್ಲಿ ಕುಳಿತು ಹೆಲ್ಪ್ಲೈನ್‌ ಕಾಲ್‌ ಮಾಡಿದರೆ ಮನೆ ಬಾಗಿಲಕ್ಕೆ ಆಂಬ್ಯುಲೆನ್ಸ್‌ ಸೇವೆ ನೀಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಸರಕಾರಿ ಪಿ.ಬಿ.ಹೈಸ್ಕೂಲ್‌ದಲ್ಲಿರುವ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ, ಜನರಲ್ಲಿ ಲಸಿಕೆ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ತುರ್ತು ನಿಗಾದಲ್ಲಿರುವ ರೋಗಿಗಳ ಕುಟುಂಬಗಳ ಜತೆಗಿದ್ದು, ಆತ್ಮಸ್ಥೆರ್ಯ ತುಂಬುವ ಕೆಲಸದಲ್ಲಿ ತೊಡಗಿದ್ದಾರೆ. ಕೊರೊನಾ ಸಂಕಷ್ಟದಲ್ಲಿರುವ ಜನರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.