ಹಾಳು ಬಿದ್ದ ಕಟ್ಟಡ ತೆರವಿಗೆ ಶಾಸಕರ ಸೂಚನೆ
Team Udayavani, Jul 3, 2019, 12:35 PM IST
ತೇರದಾಳ: ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಹಾಳು ಬಿದ್ದಿರುವ ಲೋಕೋಪಯೋಗಿ ಇಲಾಖೆಯ ಕಟ್ಟಡವನ್ನು ಶಾಸಕ ಸಿದ್ದು ಸವದಿ ಪರಿಶೀಲಿಸಿದರು.
ತೇರದಾಳ: ನಗರದ ಅಂಚೆ ಕಚೇರಿ ಎದುರಿಗಿನ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಾಳು ಬಿದ್ದಿರುವ ಲೋಕೋಪಯೋಗಿ ಇಲಾಖೆಯ ಕಟ್ಟಡ ತೆರವುಗೊಳಿಸಿ, ಶಾಲೆಯ ಮಕ್ಕಳಿಗೆ ಆಟದ ಮೈದಾನ ನಿರ್ಮಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಸಿದ್ದು ಸವದಿ ಹೇಳಿದರು.
ಹಾಳು ಬಿದ್ದಿರುವ ಕಟ್ಟಡ ಪರಿಶೀಲಿಸಿದ ಅವರು, ನಗರದಲ್ಲಿ ಹಾಳು ಬಿದ್ದಿರುವ ಕಟ್ಟಡಗಳ ಬಗ್ಗೆ ಮಾಹಿತಿ ನೀಡಿ, ಸಂಬಂಧಿಸಿದ ಇಲಾಖೆ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು.
ಪಾಳು ಬಿದ್ದಿರುವ ಕಟ್ಟಡದಲ್ಲಿ ಮೊದಲು ಆರೋಗ್ಯ ಕೇಂದ್ರವಿತ್ತು. ಬಿಎಸ್‌ಎನ್‌ಎಲ್ ಕಚೇರಿ, ಬಳಿಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಗ್ರಂಥಾಲಯಕ್ಕಾಗಿ ಬಳಸಲಾಗುತ್ತಿತ್ತು. ಕಟ್ಟಡದ ಒಂದು ಕಡೆಯಲ್ಲಿ ಅಂಗನವಾಡಿ ಕೇಂದ್ರಕ್ಕಾಗಿ ಕೂಡ ಬಳಸಲಾಗುತ್ತಿತ್ತು. ಆದರೆ ಕೊಠಡಿಗಳ ಬಾಗಿಲು ಮುರಿದಿದ್ದರಿಂದ ಕಳ್ಳತನ ಕೂಡ ಆಗಿತ್ತು. ನಂತರ ಅಂಗನವಾಡಿ ಕೇಂದ್ರವನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದರು. ಗಂಗಾಧರ ದೇವರು, ಮುಖಂಡರಾದ ಮಹಾವೀರ ಕೊಟಕನೂರ, ಶಂಕರ ಕುಂಬಾರ, ಅಲ್ಲಪ್ಪ ಬಾಬಗೊಂಡ, ಕೇದಾರಿ ಪಾಟೀಲ, ಸುರೇಶ ಪರೀಟ, ಧಶರಥ ಅಕ್ಕೆನ್ನವರ, ಸಂತೋಷ ಜಮಖಂಡಿ, ಕುಮಾರ ಸರಿಕರ, ಸದಾಶಿವ ಹೊಸಮನಿ, ಸಚಿನ ಕೊಡತೆ, ಕಾಶಿನಾಥ ರಾಠೊಡ, ಸಂಗಮೇಶ ಕಾಲತಿಪ್ಪಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.