ಮೂರು ದಿನದಲ್ಲಿ ಉತ್ತಮ ಮುಂಗಾರು ಮಳೆ: ಮಹೇಶ
Team Udayavani, Jun 9, 2020, 10:05 AM IST
ಬಾಗಲಕೋಟೆ: ಪ್ರಸಕ್ತ ವರ್ಷದಲ್ಲಿ ಮುಂಗಾರು ಮಳೆಯು ವಾಡಿಕೆಯಂತೆ ಜೂ.1 ರಂದು ಕೇರಳ ರಾಜ್ಯವನ್ನು ಪ್ರವೇಶಿಸಿದ್ದು, ಮುಂಗಾರು ಈಗಾಗಲೇ ಕರ್ನಾಟಕದ ಕರಾವಳಿ ಪ್ರದೇಶದ ಕಾರವಾರವನ್ನು ಪ್ರವೇಶಿಸಿದೆ.
ಮುಂದಿನ ಜೂ.10, 11ರವರೆಗೆ ಕರ್ನಾಟಕದ ಉತ್ತರ ಒಣ ವಲಯದಲ್ಲಿ ಬರುವ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಹವಾಮಾನ ಘಟಕದ ವಿಷಯ ತಜ್ಞ ಮಹೇಶ ಹರೋಲಿ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಈ ವರ್ಷದ ಮುಂಗಾರಿನಲ್ಲಿ ವಾಡಿಕೆಯಷ್ಟು ಮಳೆಯಾಗಲಿದ್ದು, ರೈತರು ಆತಂಕ ಪಡಬೇಡಿ. ಪ್ರಸ್ತುತ ವರ್ಷದಲ್ಲಿ ಎಲ್ನಿನೊಸದರನ್ ಆಸಿಲೇಶನ್ ಪ್ರಕ್ರಿಯೆಯು ಹಾಗೂ ಇಂಡಿಯನ್ ಒಷಿಯನ್ ಡೈಪೋಲ್ ಪ್ರಕ್ರಿಯೆಯು ತಟಸ್ಥವಾಗಿರುವುದರ ಜತೆಗೆ ಹಿಂದೂ ಮಹಾಸಾಗರ ಹಾಗೂ ಫೆಸಿಪಿಕ್ ಮಹಾಸಾಗರದ ಮೇಲ್ಮೆ ಉಷ್ಣಾಂಶ ಪೂರಕವಾಗಿರುವುದರಿಂದ ಉತ್ತಮ ಮುಂಗಾರಿನ ನಿರೀಕ್ಷೆಯಿದೆ ಎಂದಿದ್ದಾರೆ.
ಕಳೆದ ನಾಲ್ಕೈದು ದಿನಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ಸೈಕ್ಲೋನ್ ನಿಸರ್ಗದ ಪ್ರಭಾವದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಇದನ್ನೇ ಅನೇಕರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಸೈಕ್ಲೋನ್ ನಿಂದಾಗಿ ಮುಂಗಾರು ವಿಸ್ತರಿಸಲು ಸ್ವಲ್ಪ ಹಿನ್ನಡೆ ಉಂಟಾಗಿದೆ. ಜಿಲ್ಲೆಯಲ್ಲಿ ಮುಂಗಾರಿಗೂ ಮುನ್ನ ಮಳೆಯಾಗಿರುವುದರಿಂದ ರೈತರು ತಡಮಾಡದೆ ಭೂಮಿ ಸಿದ್ದಪಡಿಸಿಕೊಂಡು ಬಿತ್ತನೆ ಕಾರ್ಯವನ್ನು ತ್ವರಿತವಾಗಿ ಮುಗಿಸಬೇಕು. ರೈತರು ಕೀಟ ಹಾಗೂ ರೋಗಗಳ ನಿರ್ವಹಣೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ರೈತರು ಹವಾಮಾನ ಮುನ್ಸೂಚನೆ ಆಧರಿಸಿ ಕೃಷಿ ಚಟುವಟಿಕೆ ಮಾಡುವುದು ಅವಶ್ಯವಾಗಿರುವುದರಿಂದ ಮೇಘಧೂತ ಮೊಬೈಲ್ ಆಪ್ ಸೇವೆ ಸದುಪಯೋಗ ಪಡಿಸಿಕೊಳ್ಳಬೇಕು. ಆಸಕ್ತ ರೈತರು ಕೃಷಿ ವಿಜ್ಞಾನ ಕೇಂದ್ರದ ಹವಾಮಾನ ಘಟಕಕ್ಕೆ ಭೇಟಿ ನೀಡಿ ತಮ್ಮ ಹೆಸರು ಮತ್ತು ಮೊಬೈಲ್ ನಂಬರ್ ನಮೂದಿಸಿದರೆ ವಾರಕ್ಕೆ ಎರಡು ಬಾರಿ (ಪ್ರತಿ ಮಂಗಳವಾರ ಮತ್ತು ಶುಕ್ರವಾರ) ಜಿಲ್ಲಾ ಕೃಷಿ ಹವಾಮಾನ ಘಟಕದಿಂದ ಭಾರತ ಹವಾಮಾನ ಇಲಾಖೆ ನೀಡುವ ಮುಂದಿನ 5 ದಿನಗಳ ಹವಾಮಾನ ಮುನ್ಸೂಚನೆ ರವಾನಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ: 08354-295543ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.