ಕಬ್ಬಿನ ಬಾಕಿ ಪಾವತಿಗೆ ಮಾಸಾಂತ್ಯದ ಗಡುವು
ಎಂಟು ಕಾರ್ಖಾನೆ; 309 ಕೋಟಿ ಬಾಕಿ
Team Udayavani, Jun 7, 2020, 5:58 AM IST
ಬಾಗಲಕೋಟೆ: ಕಳೆದ 2019-20ನೇ ಹಂಗಾಮಿನ ರೈತರಿಗೆ ನೀಡಬೇಕಾದ ಕಬ್ಬಿನ ಬಾಕಿ ಒಟ್ಟು 309.65 ಕೋಟಿ ರೂ. ಜೂನ್ ತಿಂಗಳ ಅಂತ್ಯಕ್ಕೆ ಸಂಪೂರ್ಣವಾಗಿ ಪಾವತಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಜರುಗಿದ ರೈತರ ಕಬ್ಬಿನ ಬಾಕಿ ಪಾವತಿ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. 2019-20ನೇ ಹಂಗಾಮಿನ ಬಾಕಿ ಪಾವತಿ ಜೊತೆಗೆ 2018-19ನೇ ಹಂಗಾಮಿನಲ್ಲಿ ಕಾರ್ಖಾನೆ ಮಾಲೀಕರು ಮತ್ತು ರೈತರ ನಡುವಿನ ಒಪ್ಪಂದದಂತೆ ಪ್ರತಿ ಕ್ವಿಂಟಲ್ ಕಬ್ಬಿಗೆ ನೀಡಬೇಕಾದ ಹೆಚ್ಚುವರಿ ಬಾಕಿ ಸಹ ತುರ್ತಾಗಿ ಪಾವತಿಸಬೇಕು. ಈ ಕುರಿತು 15 ದಿನಗಳ ನಂತರ ಮತ್ತೂಮ್ಮೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
2017-18ನೇ ಹಂಗಾಮಿಗೆ ಕಾರ್ಖಾನೆಯವರು ಘೋಷಿಸಿರುವ ಹೆಚ್ಚುವರಿ ದರ ಪಾವತಿಸಲು ಮುಧೋಳರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ 3.44 ಕೋಟಿ ರೂ. ಮತ್ತು ತೇರದಾಳದ ಸಾವರಿನ್ ಶುಗರ್ನವರು 56.88 ಲಕ್ಷ ರೂ. ಬಾಕಿ ಉಳಿಸಿಕೊಂಡಿವೆ. ಸಾವರಿನ್ ಶುಗರ್ನವರು 2018-19ನೇ ಹಂಗಾಮಿನ 20 ಕೋಟಿ ರೂ. ರೈತರಿಗೆ ಪಾವತಿಸಲು ಬಾಕಿ ಉಳಿಸಿಕೊಂಡಿದ್ದರಿಂದ ಸದರಿ ಕಾರ್ಖಾನೆಯನ್ನು ಕರ್ನಾಟಕ ಭೂ ಕಂದಾಯ ವಸೂಲಿ ಪ್ರಕ್ರಿಯೆ ಚಾಲ್ತಿಯಲ್ಲಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ವೇಳೆ ಕಾರ್ಖಾನೆಗಳ ಸಮಸ್ಯೆ ಆಲಿಸಿ, ಹೆಸ್ಕಾಂಗೆ ನೀಡಬೇಕಾದ ಸರ್ಕಾರದಿಂದ ಬರುವ ಬಾಕಿ ಸಬ್ಸಿಡಿ ಹಣದ ಬಗ್ಗೆ ಪ್ರಸ್ತಾವನೆ ನೀಡಿದಲ್ಲಿ ಸರ್ಕಾರದಿಂದ ಕೊಡಿಸುವ ಕೆಲಸ ಮಾಡಲಾಗುವುದು. ಸರ್ಕಾರದಿಂದ ಟ್ರಾನ್ಸ್‌ಪೋರ್ಟ್ ಸಬ್ಸಿಡಿ ಹಣ ಬರುವುದು ಬಾಕಿ ಇದ್ದರೆ ಅದರ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗುವುದು ಎಂದರು.
ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಯವರು ಸಿಎಸ್ ಆರ್ ಅನುದಾನದಲ್ಲಿ ಸ್ಯಾನಿಟೈಸರ್ ಉಚಿತವಾಗಿ ನೀಡಿದ ಎಲ್ಲ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಆಹಾರ ಇಲಾಖೆ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.