ಆಲಮಟ್ಟಿಗೆ ಒಳಹರಿವು ಹೆಚ್ಚಳ
Team Udayavani, Jul 10, 2020, 3:49 PM IST
ಆಲಮಟ್ಟಿ: ಕೃಷ್ಣೆಯ ಉಗಮಸ್ಥಾನ ಹಾಗೂ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.
ಆಲಮಟ್ಟಿಯ ಲಾಲ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ವಾಡಿಕೆಗಿಂತಲೂ ಮುಂಚಿತವಾಗಿ ಅಂದರೆ ಜೂನ್ ಮೊದಲ ವಾರದಲ್ಲಿಯೇ ಒಳಹರಿವು ಆರಂಭವಾಗಿ ನಂತರ ಇಳಿಕೆಯಾಗಿತ್ತು. ಈಗ ಮತ್ತೆ ಮಂಗಳವಾರದಿಂದ ಏರಿಕೆಯಾಗುತ್ತಿದೆ. ಕರ್ನಾಟಕ ವಿದ್ಯುತ್ ಉತ್ಪಾದನಾ ಕೇಂದ್ರದ ಆಲಮಟ್ಟಿಯ ಜಲವಿದ್ಯುದಾಗಾರದ ಮೂಲಕ ಕೃಷ್ಣಾ ಭಾಗ್ಯ ಜಲನಿಗಮದ ಅಧಿ ಕಾರಿಗಳು ಬುಧವಾರದಿಂದ 10 ಸಾವಿರ ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನಾ ಘಟಕದಿಂದ ಕೃಷ್ಣಾನದಿ ಪಾತ್ರಕ್ಕೆ ಬಿಡುತ್ತಿರುವುದರಿಂದ 55 ಮೆ.ವ್ಯಾ.ನ ಐದು ಘಟಕ ಹಾಗೂ 15 ಮೆ.ವ್ಯಾ. ಘಟಕಗಳಲ್ಲಿ 55 ಮೆ.ವ್ಯಾ.ನ ಎರಡು ಘಟಕಗಳಿಂದ ವಿದ್ಯುತ್ ಉತ್ಪಾದನೆ ಆರಂಭಗೊಂಡಿದೆ.
ಇನ್ನು ಆರಿದ್ರಾ ಹಾಗೂ ಪುನರ್ವಸು ಮಳೆಗಳು ಸುರಿದ ಪರಿಣಾಮ ರೈತರ ಜಮೀನಿಗೆ ನೀರಿನ ಬೇಡಿಕೆ ಕಡಿಮೆಯಾಗಿದೆ. ಈ ನಡುವೆ ಆಲಮಟ್ಟಿ ಲಾಲ ಬಹದ್ದೂರಶಾಸ್ತ್ರಿ ಜಲಾಶಯ ವ್ಯಾಪ್ತಿಯ ಆಲಮಟ್ಟಿ ಬಲದಂಡೆ ಶಾಖಾ ಕಾಲುವೆ, ಆಲಮಟ್ಟಿ ಎಡದಂಡೆ ಶಾಖಾ ಕಾಲುವೆ, ತಿಮ್ಮಾಪುರ ಏತನೀರಾವರಿ ಯೋಜನೆ, ಮುಳವಾಡ ಏತನೀರಾವರಿ ಯೋಜನೆ, ರೊಳ್ಳಿ-ಮನ್ನಿಕೇರಿ ಏತನೀರಾವರಿ ಯೋಜನೆ ಸೇರಿದಂತೆ ಜಲಾಶಯ ವ್ಯಾಪ್ತಿಯ ಎಲ್ಲ ಕಾಲುವೆಗಳಲ್ಲಿನ ಹೂಳು ಹಾಗೂ ಗಿಡಗಂಟಿ ತೆರವುಗೊಳಿಸುವ ಕಾಮಗಾರಿಗಳು ಶರವೇಗದಲ್ಲಿ ನಡೆದಿವೆ. ಕಾಲುವೆಗಳ ವಿಶೇಷ ದುರಸ್ತಿ ಕಾಮಗಾರಿಗಳು ಶರವೇಗದಲ್ಲಿ ನಡೆದಿರುವುದರಿಂದ ಸಕಾಲದಲ್ಲಿ ಕಾಲುವೆಗೆ ನೀರು ಹರಿಸಲು ಕೆಬಿಜೆನ್ನೆಲ್ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ ಎಂದು ಕೆಬಿಜೆನ್ನೆಲ್ ಮೂಲಗಳಿಂದ ತಿಳಿಸಿವೆ.
ಆತಂಕ: ಕೃಷ್ಣಾ ನದಿಯ ಎಡ ಹಾಗೂ ಬಲಬದಿಯಲ್ಲಿರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಜನರಿಗೆ ನೆರೆ ಹಾವಳಿ ಬಗ್ಗೆ ಆತಂಕ ಉಂಟಾಗಿದೆ. ಒಟ್ಟಾರೆ ಕೃಷ್ಣಾ ನದಿ ಪಕ್ಕದಲ್ಲಿರುವ ಗ್ರಾಮೀಣ ಪ್ರದೇಶ ಮತ್ತು ಕೃಷಿ ಜಮೀನಿನೊಳಗೆ ನೀರು ನುಗ್ಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ನದಿ ತೀರದ ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.