ನಾಲ್ಕು ತಿಂಗಳಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ

ಹುಟ್ಟಿದ ಮಗುವಿಗೆ ನಂಜು, ಕಾಮಾಲೆ ಇರುವ ಶಿಶುವಿಗೆ ಇನ್ನು ಮುಂದೆ ಚಿಕಿತ್ಸೆ ಲಭಿಸಲಿದೆ.

Team Udayavani, Jan 19, 2022, 2:05 PM IST

ನಾಲ್ಕು ತಿಂಗಳಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ

ಜಮಖಂಡಿ: ತಾಲೂಕಿಗೆ 24 ಗಂಟೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೇವೆ ಸಲ್ಲಿಸುವ ಜಮಖಂಡಿ ಸರಕಾರಿ ಆಸ್ಪತ್ರೆಗೆ ಹೊಸದಾಗಿ ಇನ್ನೊಂದು ಆಂಬ್ಯುಲೆನ್ಸ್‌ ನೀಡಲಾಗಿದ್ದು, ಇಂದಿನಿಂದ ಆರೋಗ್ಯ ಸೇವೆ ಆರಂಭಿಸಲಿದೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ನಗರದ ಉಪವಿಭಾಗ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕ ಸೇವೆಗೆ ನೂತನ ಆಂಬ್ಯುಲೆನ್ಸ್‌ಗೆ ಪೂಜೆ ಸಲ್ಲಿಸಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಾಲ್ಕು ತಿಂಗಳಲ್ಲಿ ಹೊಸದಾಗಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಇದರಿಂದ ಈ ಭಾಗದ ಜನತೆಗೆ ಎಲ್ಲ ತರಹದ ಸರಕಾರಿ ಸೌಲಭ್ಯಗಳು ಲಭಿಸಿದಂತಾಗುತ್ತದೆ ಎಂದರು.

ತಾಲೂಕಿನ ಯಾವುದೇ ಭಾಗದಿಂದ ರೋಗಿಗಳು ಆರೋಗ್ಯ ತಪಾಸಣೆಗೆ ಬಂದರೆ ಅಂತಹವರಿಗೆ ಈ ಆಸ್ಪತ್ರೆಯಲ್ಲಿ ಎಲ್ಲ ಸೌಲಭ್ಯ ಸಿಗುವಂತೆ ಮಾಡಲಾಗಿದೆ. ರಕ್ತ ಭಂಡಾರ, ಡಯಾಲಾಸಿಸ್‌ ಮತ್ತು ನವಜಾತ ಶಿಶುಸ್ಥಿರಿಕರಣ ಘಟಕ ಕೂಡಾ ನಾಗರಿಕರಿಗೆ ಅನುಕೂಲವಾಗಲಿದ್ದು, ಹುಟ್ಟಿದ ಮಗುವಿಗೆ ನಂಜು, ಕಾಮಾಲೆ ಇರುವ ಶಿಶುವಿಗೆ ಇನ್ನು ಮುಂದೆ ಚಿಕಿತ್ಸೆ ಲಭಿಸಲಿದೆ. ಸುಸಜ್ಜಿತ ಶಸ್ತ್ರಚಿಕಿತ್ಸೆಗೆ ಬಿಪಿ, ಇಸಿಜಿ, ಸ್ತ್ರೀರೋಗಕ್ಕೆ ಸಂಬಂಧಿಸಿದ ಎಲ್ಲ ಉಪಕರಣಗಳು ಲಭ್ಯತೆ ಇರುವ ಮೂರು ಆಂಬ್ಯುಲೆನ್ಸ್‌ಗಳ ವ್ಯವಸ್ಥೆ ಮಾಡಿದೆ. ಇದರಿಂದ ಕ್ಷೇತ್ರದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈಗಾಗಲೇ ಬಾಗಲಕೋಟೆಯಲ್ಲಿ ಪ್ರತಿ ನಿಮಿಷಕ್ಕೆ ಒಂದು ಸಾವಿರ ಲೀಟರ್‌ ಆಕ್ಸಿಜನ್‌ ತಯಾರಿಸುವ ಪ್ಲಾಂಟೇಶನ್‌ ಇದ್ದು, ಜಮಖಂಡಿ ಕ್ಷೇತ್ರದಲ್ಲಿ ಪ್ರತಿ ನಿಮಿಷಕ್ಕೆ 500 ಲೀಟರ್‌ ಆಕ್ಸಿಜನ್‌ ಪ್ಲಾಂಟೇಶನ್‌ ಸಿದ್ಧವಾಗಿದೆ. ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿದ್ದು, ಅದನ್ನು ತಡೆಗಟ್ಟಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಕ್ತ ಭಂಡಾರ ಮತ್ತೆ ಪ್ರಾರಂಭಿಸಿ ಸೋಮವಾರದಿಂದ ಸಾರ್ವಜನಿಕರಿಗೆ ರಕ್ತ ಸಿಗುವ ಹಾಗೆ ವ್ಯವಸ್ಥೆ ಮಾಡಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್‌, ಐಸಿಯು ಹೀಗೆ ಎಲ್ಲ ರೀತಿಯ ಸೌಲಭ್ಯಗಳಿವೆ. ಜಮಖಂಡಿ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲ ತರಹದ ವ್ಯವಸ್ಥೆಗಳಿದ್ದು, ಉತ್ತಮ ಚಿಕಿತ್ಸೆ ನೀಡಿ ಶ್ರೇಷ್ಠ ಗುಣಮಟ್ಟದ ಆಸ್ಪತ್ರೆಯನ್ನಾಗಿಸಬೇಕೆಂದು ಸಲಹೆ ನೀಡಿದರು.

ತಾಲೂಕು ವೈದ್ಯಾಧಿ ಕಾರಿ ಡಾ| ಜಿ.ಎಸ್‌.ಗಲಗಲಿ, ಸರಕಾರಿ ಆಸ್ಪತ್ರೆ ಮುಖ್ಯವೈದ್ಯಾಧಿ ಕಾರಿ ಡಾ| ಟಿ.ಎಂ. ವೆಂಕಟರಾಜು, ಸ್ತ್ರೀ ರೋಗತಜ್ಞ ಡಾ| ಎಸ್‌.ಜಿ. ಜಮಖಂಡಿ ಇದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.