ಬಾಗಲಕೋಟೆಯಲ್ಲಿ ತಾಯಿ-ಮಗಳಿಗೆ ಸೋಂಕು ದೃಢ
Team Udayavani, Apr 27, 2020, 4:49 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಪತ್ತೆಯಾಗದ ಕೋವಿಡ್-19 ಸೋಂಕು, ಸೋಮವಾರ ತಾಯಿ ಮಗಳಿಗೆ ಕಾಣಿಸಿಕೊಂಡಿದೆ.
ಜಮಖಂಡಿ ನಗರದ 42 ವರ್ಷದ ಮಹಿಳೆ ಪಿ 508 ಮತ್ತು 21 ವರ್ಷದ ಪಿ 509 ಅವರಿಗೆ ಕೋವಿಡ್19 ಸೋಂಕು ದೃಢಪಟ್ಟಿದ್ದು, ಅವರಿಗೆ ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇವರಿಬ್ಬರು ತಾಯಿ ಮಗಳಾಗಿದ್ದು, ತೀವ್ರ ಜ್ವರ, ಕೆಮ್ಮು, ನೆಗಡಿ ಹಾಗೂ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ 47 ವರ್ಷದ ಖಾಸಗಿ ವಾಹನ ಚಾಲಕನಿಗೆ ಏ. 24ರಂದು ಕೋವಿಡ್ ವೈರಸ್ ಖಚಿತವಾಗಿತ್ತು. ಆತನ ಪತ್ನಿ ಹಾಗೂ ಪುತ್ರಿಗೂ ಈಗ ಸೋಂಕು ತಗುಲಿದೆ.
ಚಾಲಕ ಪಿ 456 ವ್ಯಕ್ತಿ ಮನೆಯಲ್ಲಿ ಒಟ್ಟು ಐವರು ವಾಸಿಸುತ್ತಿದ್ದು, ಅವರಲ್ಲಿ ಮೂವರಿಗೆ ಈಗ ಸೋಂಕು ದೃಢವಾಗಿದೆ. ಉಳಿದವರಿಗೆ ಪ್ರತ್ಯೇಕವಾಗಿ ನಿಗಾ ವಹಿಸಲಾಗಿದೆ.
26ಕ್ಕೇರಿದ ಸೋಂಕಿತರ ಸಂಖ್ಯೆ :
ಜಿಲ್ಲೆಯಲ್ಲಿ ಏ. 2ರಂದು 76 ವರ್ಷದ ವೃದ್ಧನಿಗೆ ಮೊದಲ ಬಾರಿಗೆ ಸೋಂಕು ಪತ್ತೆಯಾಗಿದ್ದು, ಆತ ಮೃತಪಟ್ಟಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಒಟ್ಟು 26 ಜನರಿಗೆ ಸೋಂಕು ಖಚಿತವಾಗಿದೆ. ಅದರಲ್ಲಿ ಮುಧೋಳದ ಒಬ್ಬರು, ಬಾಗಲಕೋಟೆಯ ಐವರು ಸೇರಿ ಒಟ್ಟು 6 ಜನ ಕೋವಿಡ್-19 ವೈರಸ್‌ನಿಂದ ಗುಣಮುಖರಾಗಿ ಆಸ್ಪತ್ರೆಂದ ಬಿಡುಗಡೆಗೊಂಡಿದ್ದಾರೆ. ಉಳಿದ 19 ಜನರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.