ತಾಯಂದಿರ ಮೇಲಿದೆ ಸಂಸ್ಕೃತಿ ಉಳಿಸುವ ಜವಾಬ್ದಾರಿ
ವಿರಕ್ತಮಠದಲ್ಲಿ ಉಡಿ ತುಂಬುವ ಕಾರ್ಯಕ್ರಮ; ಶಿವಲಿಂಗೇಶ್ವರರ ಪುಣ್ಯಾರಾಧನೆ ಮಹೋತ್ಸವ
Team Udayavani, Sep 18, 2022, 3:46 PM IST
ತೇರದಾಳ: ಅಲ್ಲಮಪ್ರಭು ತಮ್ಮ ವಚನವೊಂದರಲ್ಲಿ 160 ಲಕ್ಷ ವಚನಗಳನ್ನು ಬರೆದಿರುವುದಾಗಿ ಹೇಳಿದ್ದರೂ ಇಲ್ಲಿಯವರೆಗೆ ನಮಗೆ 22,500 ವಚನಗಳು ಮಾತ್ರ ದೊರೆತಿವೆ. ಕನ್ನಡದ ಈ ವಚನಗಳನ್ನು ಪ್ರಧಾನಿ ನರೇಂದ್ರ ಮೋದಿ 22 ವಿವಿಧ ಭಾಷೆಗಳಿಗೆ ಭಾಷಾಂತರಗೊಳಿಸಲು ಕ್ರಮ ಕೈಗೊಂಡಿರುವುದು ಕನ್ನಡಿಗರಾದ ನಮಗೆಲ್ಲ ಸಂತಸದ ಸಂಗತಿ ಎಂದು ಬೆಳಗಾವಿ ಜಿಲ್ಲೆ ಶೇಗುಣಸಿ ವಿರಕ್ತಮಠದ ಡಾ| ಮಹಾಂತ ಶ್ರೀಗಳು ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಶಿವಲಿಂಗೇಶ್ವರರ 20ನೇ ಪುಣ್ಯಾರಾಧನೆ ನಿಮಿತ್ತ ಹಮ್ಮಿಕೊಂಡ 501 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.
ನಮ್ಮ ನೆಲದ ಸಂಸ್ಕೃತಿ ಮುಂದಿನ ಪೀಳಿಗೆಗೆ ಅಚ್ಚುಕಟ್ಟಾಗಿ ಮುಂದುವರೆಸುವ ಗುರುತರ ಜವಾಬ್ದಾರಿ ತಾಯಂದಿರ ಮೇಲಿದೆ. ಹಾಗಾಗಿ ನಾವೆಲ್ಲ ಮಹಿಳೆಯರಿಗೆ ಪೂಜ್ಯನೀಯ ಸ್ಥಾನದಲ್ಲಿಟ್ಟಿದ್ದೇವೆ ಎಂದರು.
ಡಾ| ಮಹಾವೀರ ದಾನಿಗೊಂಡ ಮಾತನಾಡಿ, ಸಂಸ್ಕಾರ, ಶಿಕ್ಷಣ ಎರಡನ್ನು ಸಮನಾಗಿ ಈ ಸಮಾಜಕ್ಕೆ ಕೊಡುವಲ್ಲಿ ಮಠಮಾನ್ಯಗಳ ಪಾತ್ರ ದೊಡ್ಡದು. ಅದರಂತೆ ತಾಯಂದಿರು ಕೂಡ ಈ ನಿಟ್ಟಿನಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸುವ, ರೂಢಿಸುವ ಕೆಲಸ ಮಾಡಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಂದಿಗುಂದ-ಆಡಿಯ ಸಿದ್ದೇಶ್ವರ ಮಠದ ಶಿವಾನಂದ ಶ್ರೀಗಳು ಆಶೀರ್ವಚನ ನೀಡಿ, ಮಕ್ಕಳಿಗೆ ಸಂಸ್ಕಾರ ಕಲಿಸುವಲ್ಲಿ ಮನೆ ಹಾಗೂ ತಾಯಿಯ ಪಾತ್ರ ದೊಡ್ಡದು ಎಂದರು.
ಬನಹಟ್ಟಿ ಹಿರೇಮಠದ ಶರಣಬಸವ ಶಿವಾಚಾರ್ಯ ಶ್ರೀಗಳು ಆಶೀರ್ವಚನ ನೀಡಿದರು. ಮಠದ ಶಿವಕುಮಾರ ಶ್ರೀಗಳು, ಕಮಿಟಿ ಅಧ್ಯಕ್ಷ ನಿಂಗಪ್ಪಣ್ಣ ಮಾಲಗಾಂವಿ, ಉಪಾಧ್ಯಕ್ಷ ಮಗಯ್ಯ ತೆಳಗಿನಮನಿ ವೇದಿಕೆಯಲ್ಲಿದ್ದರು.
ಮಲ್ಲಪ್ಪ ಜಮಖಂಡಿ, ಯಮನಪ್ಪ ಮುಕುಂದ, ಈರಪ್ಪ ಮದಲಮಟ್ಟಿ, ಜಗದೀಶ ಮುಕುಂದ, ನಿಂಗಪ್ಪ ಮಲಾಬದಿ, ಗುರುಬಸು ಹುಕ್ಕೇರಿ, ಶಿವಲಿಂಗ ಭದ್ರಶೆಟ್ಟಿ, ಬಸಪ್ಪ ಮುಕುಂದ, ರಮೇಶ ಅವರಾದಿ ಸೇರಿದಂತೆ ಹಿರಿಯರು, ಪುರಸಭೆ ಸದಸ್ಯರು, ಶಿವಾನುಭವ ತಂಡ, ಅಕ್ಕನ ಬಳಗ, ಪ್ರಭುಲಿಂಗೇಶ್ವರ ಅನ್ನಪ್ರಸಾದ ಸಮಿತಿಯವರು ಇದ್ದರು.
501 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಾವಿರಕ್ಕೂ ಅಧಿಕ ಸುಮಂಗಲೆಯರು ಆಗಮಿಸಿದ್ದರಿಂದ ಎಲ್ಲರಿಗೂ ಉಡಿ ತುಂಬಲಾಯಿತು. ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಎಲ್ಲ ಸದಸ್ಯರು ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದರು.
ಸೆ. 19ರವರೆಗೆ ಕಾರ್ಯಕ್ರಮ: ವಿರಕ್ತಮಠದಲ್ಲಿ ಶಿವಲಿಂಗೇಶ್ವರರ 20ನೇ ಪುಣ್ಯಾರಾಧನೆ ನಿಮಿತ್ತ ಸೆ. 9ರಿಂದ ಪ್ರತಿದಿನ ಸಂಜೆ ಬೇವಿನಹಾಳದ ಶ್ರವಣಕುಮಾರ ಶಾಸ್ತ್ರಿಗಳಿಂದ ಪ್ರವಚನ ಕಾರ್ಯಕ್ರಮ ನಡೆದಿದ್ದು, ಸೆ. 19ರವರೆಗೆ ಸಾಗಲಿದೆ. ಈ ಕಾರ್ಯಕ್ರಮದ ನಿಮಿತ್ತ ಸೆ. 14ರಂದು ನಿವೃತ್ತ ಸೈನಿಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಭಾನುವಾರದಂದು ಪೂಜ್ಯರಿಗೆ ಹಾಗೂ ಹಿರಿಯ ಚೇತನಗಳಿಗೆ ಸನ್ಮಾನ ಸಮಾರಂಭ ಜರುಗಲಿದೆ. ಸೋಮವಾರ ಧರ್ಮಸಭೆ ಹಾಗೂ ಪ್ರವಚನ ಮಹಾಮಂಗಲ ಕಾರ್ಯಕ್ರಮ ಜರುಗಲಿದೆ. ಪ್ರತಿದಿನ ಜರುಗುವ ಪ್ರವಚನ ಕಾರ್ಯಕ್ರಮಕ್ಕೆ ಸರದಿಯಂತೆ ಭಕ್ತರು ಪ್ರಸಾದ ವ್ಯವಸ್ಥೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.