ಜನರ ವಿಶ್ವಾಸ ಕಳೆದುಕೊಂಡ ಸವದಿ; ಧರೆಪ್ಪ ಸಾಂಗ್ಲೀಕರ

ಸರ್ಕಾರ ಮಟ್ಟದಲ್ಲಿ ಹೆಚ್ಚಿನ ಪ್ರಭಾವ ಬೀರಿ ತಾಲೂಕು ಘೋಷಣೆ ಮಾಡಲಿಲ್ಲ

Team Udayavani, Apr 5, 2023, 4:20 PM IST

ಜನರ ವಿಶ್ವಾಸ ಕಳೆದುಕೊಂಡ ಸವದಿ; ಧರೆಪ್ಪ ಸಾಂಗ್ಲೀಕರ

ಮಹಾಲಿಂಗಪುರ: ಮಹಾಲಿಂಗಪೂರ ತಾಲೂಕು ರಚನೆ ವಿಷಯದಲ್ಲಿ ಶಾಸಕ ಸಿದ್ದು ಸವದಿಯವರು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆಯ ವಿಶ್ವಾಸ ಕಳೆದುಕೊಂಡಿದ್ದಾರೆಂದು ತಾಲೂಕು ಹೋರಾಟ ವೇದಿಕೆ ಕಾರ್ಯಾಧ್ಯಕ್ಷ ಧರೆಪ್ಪ ಸಾಂಗ್ಲೀಕರ ಕಿಡಿಕಾರಿದರು.

ತಾಲೂಕು ಹೋರಾಟ ವೇದಿಕೆಯಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ತಾಲೂಕು ಘೋಷಣೆ ಮಾಡದೇ, ಈಗ ಚುನಾವಣೆ ಆಯೋಗದ ಪರವಾನಗಿ ಕೇಳಿ ಘೋಷಿಸುತ್ತೇವೆ, ಪತ್ರ ನೀಡುತ್ತೇವೆಂಬ ಸುಳ್ಳು ಹೇಳಿಕೆ ಮೂಲಕ ಹೋರಾಟಗಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ಮುಂದಿನ ಸರ್ಕಾರ ರಚನೆಯಾಗಿ ತಾಲೂಕು ಆಗುವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು. ಹೋರಾಟ ವೇದಿಕೆ ಮುಖಂಡ ಮಹಾಲಿಂಗಪ್ಪ ಕೋಳಿಗುಡ್ಡ ಮಾತನಾಡಿ, ಹೋರಾಟ ಆರಂಭಿಸುವಾಗ ಶಾಸಕ ಸಿದ್ದು ಸವದಿಯವರಿಗೆ ಹೋರಾಟ ಕುರಿತು ತಿಳಿಸಿದಾಗ, ತಾಲೂಕು ಆಗದಿದ್ದರೆ ನಾನು ವೇದಿಕೆಗೆ ಬಂದು ನಿಮ್ಮೊಂದಿಗೆ ಹೋರಾಟಕ್ಕೆ ಕುಳಿತುಕೊಳ್ಳುತ್ತೇನೆ ಎಂದಿದ್ದರು. ಆದರೆ ಒಂದು ದಿನವೂ ಬಂದು ಕುಳಿತುಕೊಳ್ಳಲಿಲ್ಲ.

ನೆರೆಯ ಮೂಡಲಗಿ ತಾಲೂಕಿನ ಹೋರಾಟ ಸಮಯದಲ್ಲಿ ಬಾಲಚಂದ್ರ ಜಾರಕಿಹೊಳಿ ಕೇವಲ 38 ದಿನಗಳಲ್ಲಿ ತಾಲೂಕು ಆದೇಶ ಮಾಡಿಸಿಕೊಂಡು ಬಂದಿದ್ದರು. ಅವರಂತೆ ಇವರು ಸರ್ಕಾರ ಮಟ್ಟದಲ್ಲಿ ಹೆಚ್ಚಿನ ಪ್ರಭಾವ ಬೀರಿ ತಾಲೂಕು ಘೋಷಣೆ ಮಾಡಲಿಲ್ಲ ಎಂದು ಆರೋಪಿಸಿದರು.

ತಾಲೂಕು ಹೋರಾಟ ವೇದಿಕೆ ಅಧ್ಯಕ್ಷ ಸಂಗಪ್ಪ ಹಲ್ಲಿ ಮಾತನಾಡಿ, ಪ್ರತಿ ಬಾರಿಯೂ ಸಿಎಂ ಅವರನ್ನು ಭೇಟಿ ಮಾಡಿದಾಗ ಶೀಘ್ರದಲ್ಲೇ ಸಿಹಿಸುದ್ದಿ ನೀಡುತ್ತೇವೆಂಬ ಸುಳ್ಳು ಭರವಸೆ ನೀಡುತ್ತ ಕಾಲಹರಣ ಮಾಡಿದರು ಎಂದರು.

ಹೋರಾಟ ವೇದಿಕೆ ಖಜಾಂಚಿ ನಿಂಗಪ್ಪ ಬಾಳಿಕಾಯಿ ಮಾತನಾಡಿ, ಮಹಾಲಿಂಗಪುರ ತಾಲೂಕು ವಿಷಯದಲ್ಲಿ ಬಿಜೆಪಿ ಸರ್ಕಾರ ಮತ್ತು ತೇರದಾಳ ಶಾಸಕ ಸಿದ್ದು ಸವದಿ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು. ವಿರೇಶ ಆಸಂಗಿ, ಪರಪ್ಪ ಬ್ಯಾಕೂಡ, ಯಲ್ಲನಗೌಡ ಪಾಟೀಲ, ಎಸ್‌. ಎಂ.ಪಾಟೀಲ, ಅಲ್ಲಪ್ಪ ದಡ್ಡಿಮನಿ, ಸಿದ್ದು ಶಿರೋಳ, ಹಣಮಂತ ಜಮಾದಾರ, ನ್ಯಾಯವಾದಿಗಳಾದ ಎಂ.ಎಸ್‌. ಮನ್ನಯ್ಯನವರಮಠ, ಎಂ.ಕೆ.ಸಂಗನ್ನವರ, ಶಿವಲಿಂಗ ಟಿರ್ಕಿ, ಸುರೇಶ ಜೋಗನ್ನವರ, ರಾಜೇಂದ್ರ ಮಿರ್ಜಿ, ರಫಿಕ್‌ ಮಾಲದಾರ, ಶಿವಾನಂದ ಸೋರಗಾಂವಿ, ಮಲ್ಲಪ್ಪ ಮಿರ್ಜಿ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.