Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Team Udayavani, Jan 11, 2025, 1:33 PM IST

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

ಮುಧೋಳ: ಪ್ರಯಾಣಿಕರ ಅನುಕೂಲಕ್ಕಾಗಬೇಕಾಗಿದ್ದ ಬಸ್ ನಿಲ್ದಾಣ ಊರವರ ಮಧ್ಯಾಹ್ನದ ಶಯನಗೃಹವಾಗಿ ಬದಲಾದ ಪರಿಣಾಮ ಸಾರಿಗೆ ಬಸ್ ಗಾಗಿ ಕಾಯುವ ಪ್ರಯಾಣಿಕರು ಹೆದ್ದಾರಿ ಪಕ್ಕದಲ್ಲಿ ನಿಂತು ಹೈರಾಣಾಗುವ ಪರಿಸ್ಥಿತಿ ಸಮೀಪದ ಚಿಂಚಖಂಡಿ ಕೆ.ಡಿ. ಗ್ರಾಮದಲ್ಲಿ ಹಲವಾರು ವರ್ಷಗಳಿಂದ ನಿರ್ಮಾಣವಾಗಿದೆ.

ರಸ್ತೆ ಪಕ್ಕ ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಬಸ್ ನಿಲ್ದಾಣದ ಮುಂಭಾಗದಲ್ಲಿ ಅಂಗಡಿ, ಮುಂಗಟ್ಟುಗಳು ತಲೆಯೆತ್ತಿರುವ ಪರಿಣಾಮ ಪ್ರಯಾಣಿಕರಿಗೆ ಕಣ್ಣೆದುರಿಗೆ ಇರುವ ತಂಗುದಾಣವನ್ನು ಹುಡುಕುವುದು ಕಷ್ಟಕರವಾಗಿದೆ.

ರಾಜ್ಯ ಹೆದ್ದಾರಿ ಮೇಲೆ ನಿಲ್ಲುವ ಸ್ಥಿತಿ: ಚಿಂಚಖಂಡಿ ಕೆ.ಡಿ. ಗ್ರಾಮ ಜಮಖಂಡಿ-ಬೆಳಗಾವಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದೆ. ನಿತ್ಯ ಈ ಮಾರ್ಗದಲ್ಲಿ ಸಾವಿರಾರು ವಾಹನಗಳ ಓಡಾಟ ಸರ್ವೇ ಸಾಮಾನ್ಯ. ಅದೂ ಅಲ್ಲದೆ ಕಬ್ಬು ಹಂಗಾಮು ಆರಂಭವಾಗಿರುವುದರಿಂದ ಕಬ್ಬು ತುಂಬಿದ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿಯೇ ಓಡಾಡುತ್ತಿರುತ್ತವೆ. ಆದರೆ ರಸ್ತೆ ಪಕ್ಕದಲ್ಲಿಯೇ ಸಾರ್ವಜನಿಕರೂ ಬಸ್ ಗಾಗಿ ಕಾದು ನಿಲ್ಲುವುದರಿಂದ ಅಪಘಾತಗಳು ಸಂಭವಿಸುವ ಸನ್ನಿವೇಶ ದಟ್ಟವಾಗಿರುತ್ತವೆ. ಕುಳಿತುಕೊಳ್ಳಲು ಸೂಕ್ತ ನಿಲ್ದಾಣವಿಲ್ಲದ ಪರಿಣಾಮ ಅನಿವಾರ್ಯವಾಗಿ ಸಾರ್ವಜನಿಕರು ರಸ್ತೆ ಪಕ್ಕದಲ್ಲಿಯೇ ನಿಂತು ಬಸ್ ಗಾಗಿ ಕಾಯುವಂತಾಗಿದೆ. ರಸ್ತೆ ಪಕ್ಕದಲ್ಲಿ ಕುಳಿತುಕೊಳ್ಳಲು ಜಾಗವಿಲ್ಲದ ಪರಿಣಾಮ ಪ್ರಯಾಣಿಕರು ಬಿಸಿಲು ಬೆರಳೆನ್ನದೆ ರಸ್ತೆ ಪಕ್ಕದಲ್ಲಿಯೇ ನಿಂತುಕೊಳ್ಳಬೇಕಾಗಿದೆ.

ಸುತ್ತಳ್ಳಿಗಳಿಗೆ ಕೇಂದ್ರ ಬಿಂದು: ಚಿಂಚಖಂಡಿ ಗ್ರಾಮ ಮುಧೋಳದಿಂದ 8 ಕಿ.ಮೀ ಅಂತರದಲ್ಲಿದ್ದರೂ ತನ್ನ ಸುತ್ತಲಿನ ಗ್ರಾಮಗಳಾಗಿರುವ ಜಂಬಗಿ ಕೆ.ಡಿ., ಗುಲಗಾಲ ಜಂಬಗಿ, ಕಸಬಾ ಜಂಬಗಿಗೆ ಕೇಂದ್ರಬಿಂದುವಾಗಿದೆ. ಜಿಲ್ಲಾ ಕೇಂದ್ರಗಳಿಗೆ ತೆರಳಬೇಕಾದರೆ ಚಿಂಚಖಂಡಿಯಿಂದಲೆ ಬಸ್ ಹತ್ತುವ ಅನಿವಾರ್ಯತೆ ಇರುವುದರಿಂದ ಚಿಂಚಖಂಡಿ ಗ್ರಾಮವೂ ನಿತ್ಯ ಜನಸಂದಣಿಯಿಂದ ಕೂಡಿರುತ್ತದೆ. ಶಾಲಾ ವಿದ್ಯಾರ್ಥಿಗಳು ನಿತ್ಯ ಶಾಲೆ ಕಾಲೇಜುಗಳಿಗೆ ತೆರಳಲು ರಸ್ತೆ ಪಕ್ಕದಲ್ಲಿಯೇ ನಿಂತು ಬಸ್ ಗಾಗಿ ಕಾಯುವಂತಾಗಿದೆ.

ಮಲಗಲು ಹೇಳಿ ಮಾಡಿಸಿರುವ ಜಾಗ: ಚಿಂಚಖಂಡಿ ಗ್ರಾಮದ ಹೆದ್ದಾರಿ ಪಕ್ಕದಲ್ಲಿರುವ ಬಸ್ ನಿಲ್ದಾಣ ಮಲಗಲು ಹೇಳಿ ಮಾಡಿಸಿದಂತಾಗಿದೆ. ಊರಿನ ಯುವಕರು, ವೃದ್ದರು ಮಧ್ಯಾಹ್ನದ ಸಮಯದಲ್ಲಿ ಬಸ್ ನಿಲ್ದಾಣದಲ್ಲಿ ನಿದ್ರೆಗೆ ಜಾರುವುದರಿಂದ ಸಾರ್ವಜನಿಕರು ಅತ್ತ ಸುಳಿಯುವುದಿಲ್ಲ. ಬಸ್ ನಿಲ್ದಾಣದ ಸುತ್ತ ಗಿಡಮರಗಳು ಬೆಳೆದಿರುವುದರಿಂದ ತಂಪಾದ ವಾತಾವರಣ ಮನೆಮಾಡಿರುತ್ತದೆ. ಗ್ರಾಮಸ್ಥರು ನೆರಳಿನ ಆಶ್ರಯಕ್ಕಾಗಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಯೇ ಮಲಗಿ ನಿದ್ದೆ ಮಾಡುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ. ಅದೂ ಅಲ್ಲದೆ ಪಾನ್ ಶಾಪ್ ಗಳು ಬಸ್ ನಿಲ್ದಾಣದ ಮುಂಬಾಗದಲ್ಲಿ ತಲೆಯೆತ್ತಿರುವುದರಿಂದ ಜನರಿಗೆ ಸರಾಗವಾಗಿ ತೆರಳುವುದು ಕಷ್ಟಸಾಧ್ಯವಾಗಿದೆ.

ಬೇಕಿದೆ ನೂತನ ಬಸ್ ನಿಲ್ದಾಣ ಕಟ್ಟಡ : ಚಿಂಚಖಂಡಿ ಗ್ರಾಮದಲ್ಲಿನ ಬಸ್ ನಿಲ್ದಾಣ ಸದ್ಯ ಶಿಥಿಲಾವಸ್ಥೆಯಲ್ಲುದ್ದು ನೂತನ ಕಟ್ಟಡದ ಅನಿವಾರ್ಯತೆ ಇದೆ. ಹಳೆಯ ಕಟ್ಟಡ ಶಿಥಿಲಗೊಂಡಿದ್ದು ಅದನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಿ ಪ್ರಯಾಣಿಕರ ಉಪಯೋಗಕ್ಕೆ ಬರುವಂತೆ ಕ್ರಮ ವಹಿಸಬೇಕು ಎಂಬುದು ಇಲ್ಲಿನ ಜನರ ಆಗ್ರಹವಾಗಿದೆ.
**
ಚಿಂಚಖಂಡಿ ಕೆ.ಡಿ. ಗ್ರಾಮದದಲ್ಲಿನ ಬಸ್ ನಿಲ್ದಾಣ ಇದ್ದೂ ಇಲ್ಲದಂತಾಗಿದೆ. ಬೇರೆ ಊರಿನಿಂದ ಬರುವ ಸಾರ್ವಜನಿಕರಿಗೆ ಬಸ್ ನಿಲ್ದಾಣ ಕಾಣಿಸದಷ್ಟು ಅಂಗಡಿ‌ ಮುಂಗಟ್ಟುಗಳು ತಲೆಯೆತ್ತಿವೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು.
– ಅಶೋಕ‌ ಸಾಲಾಪುರ ಪ್ರಯಾಣಿಕ

ಇದನ್ನೂ ಓದಿ: Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

ಟಾಪ್ ನ್ಯೂಸ್

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

20-uv-fusion

UV Fusion: ಪ್ರತೀ ಕ್ಷಣವೂ ಜೀವಿಸುವುದನ್ನು ಕಲಿ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.