ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ
Team Udayavani, May 20, 2019, 11:49 AM IST
ತೇರದಾಳ: ಅನೇಕ ವಾರ್ಡ್‌ಗಳಲ್ಲಿ ಕೊಳವೆಬಾವಿ ಕೊರೆಸುವುದು, ಬೀದಿದೀಪ ಅಳವಡಿಕೆ, ಪಟ್ಟಣ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಆಗ್ರಹಿಸಿ ತೇರದಾಳ ತಾಲೂಕು ಹೋರಾಟ ಸಮಿತಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪುರಸಭೆ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಕಾರ್ಯದರ್ಶಿ ಬಸವರಾಜ ಬಾಳಿಕಾಯಿ ಮಾತನಾಡಿ, ಮೂಲಭೂತ ಸೌಲಭ್ಯಗಳ ಪೂರೈಕೆಗೆ ಪುರಸಭೆ ಕ್ರಮ ಕೈಗೊಳ್ಳಬೇಕೆಂದು ಹೋರಾಟ ಸಮಿತಿ ಪರವಾಗಿ ಲಿಖೀತವಾಗಿ ಮನವರಿಕೆ ಮಾಡಲಾಗಿತ್ತು. ಆದರೆ, ಪುರಸಭೆ ಗಮನ ಹರಿಸಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ದೇವರಾಜ ನಗರದ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆ ತೀವ್ರತರವಾಗಿದೆ. ಕೊಳವೆ ಬಾವಿ ಕೊರೆಯಿಸಿ ನೀರಿನ ಸಮಸ್ಯೆ ದೂರ ಮಾಡಬೇಕು. ಗಾಂಧಿ ಕ್ರೀಡಾಂಗಣ, ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಬಾಟಲಿ ಒಡೆಯುವುದು ಸೇರಿದಂತೆ ಅನೈತಿಕ ಚಟುವಟಿಕೆ ನಡೆಯುತ್ತಿವೆ. ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕ್ರಮ ಜರುಗಿಸಬೇಕಾಗಿದೆ. ಬೀದಿ ದೀಪಗಳಿಲ್ಲದೆ ಅನೇಕ ಕಡೆಗಳಲ್ಲಿ ತೊಂದರೆಯಾಗುತ್ತಿದೆ. ನೀರು, ಬೀದಿ ದೀಪ, ಚರಂಡಿ ಸೇರಿದಂತೆ ಶುಚಿತ್ವಕ್ಕೆ ಮಹತ್ವ ನೀಡಬೇಕೆಂದು ಆಗ್ರಹಿಸಿದರು.
ಬಳಿಕ ಮುಖ್ಯಾಧಿಕಾರಿ ಮಹಾವೀರ ಬೋರನ್ನವರ ಮಾತನಾಡಿ, ಅನೇಕ ಕೊಳವೆ ಬಾವಿ ದುರಸ್ತಿ ಮಾಡಿ, ಅಲ್ಲಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಹೊಸ ಕೊಳವೆ ಬಾವಿ ಕೊರೆಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಬೀದಿದೀಪಗಳ ಕುರಿತು ಕೂಡಲೆ ವ್ಯವಸ್ಥೆ ಮಾಡಲಾಗುವುದು. ಕಡಿಮೆ ಸಿಬ್ಬಂದಿ ಇದ್ದರೂ ಸಹ ನಗರದ ಸ್ವಚ್ಛತೆಗೆ ಆದ್ಯತೆ ಕೊಡಲಾಗುತ್ತಿದೆ ಎಂದು ಹೇಳಿದರು.
ಹೋರಾಟ ಸಮಿತಿ ಅಧ್ಯಕ್ಷ ಭುಜಬಲಿ ಕೆಂಗಾಲಿ, ಪುರಸಭೆ ಸದಸ್ಯರಾದ ಸುರೇಶ ಕಬಾಡಗಿ, ಫಜಲ್ ಅತಾರಾವುತ್, ರುಸ್ತುಂ ನಿಪ್ಪಾಣಿ, ಮುಖಂಡರಾದ ಪ್ರಭು ಗಸ್ತಿ, ರಾಜೇಸಾಬ ನಗಾರ್ಜಿ, ಕಲ್ಲಪ್ಪ ಕಬಾಡಗಿ, ಮುರಿಗೆಪ್ಪ ಹನಗಂಡಿ, ಸುಲೇಮಾನ್ ಮುಕ್ಕೇರಿ, ಪ್ರಭು ಹೂಗಾರ, ಸಿದ್ಧಪ್ಪ ಉಳಗೊಂಡ, ಚಿಕ್ಕಪ್ಪ ಲೋಹಾರ್, ಇಕ್ಬಾಲ್ ಥರಥರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.