18ರಂದು ಪ್ರಚಾರಕ್ಕೆ ಬರ್ತಾರೆ ಮೋದಿ

Team Udayavani, Apr 11, 2019, 2:54 PM IST

bag-3
ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಜಯಪುರ ಹಾಗೂ ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಸಭೆಗಾಗಿ ಏ. 18 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ ಎಂದು ಶಾಸಕ, ಬಾಗಲಕೋಟೆ ಲೋಕಸಭೆ ಕ್ಷೇತ್ರದ ಚುನಾವಣೆ ಸಂಚಾಲಕ ಡಾ| ವೀರಣ್ಣ ಚರಂತಿಮಠ ತಿಳಿಸಿದರು.
ನಗರದ ರೋಟರಿ ಸರ್ಕಲ್‌ ಬಳಿ ಇರುವ ರೈತ ದೊಡ್ಡಮನಿ ಅವರ 20 ಎಕರೆ ಹೊಲದಲ್ಲಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆ, 3 ಹೆಲಿಪ್ಯಾಡ್‌ ಹಾಗೂ ಸುಮಾರು 15 ಎಕರೆ ಪ್ರದೇಶದಲ್ಲಿ ಪೆಂಡಾಲ್‌ (ಸಾರ್ವಜನಿಕರು ಕುಳಿತುಕೊಳ್ಳಲು) ಹಾಕಲಾಗುತ್ತಿದೆ ಎಂದರು.
ಪ್ರಧಾನಿ ಮೋದಿ ಅವರು ಏ. 18ರಂದು ಮಧ್ಯಾಹ್ನ 1ಕ್ಕೆ ಬಾಗಲಕೋಟೆಗೆ ಬರಲಿದ್ದಾರೆ. ಅಂದು ಒಟ್ಟು ಮೂರು ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಬೆಳಗ್ಗೆ ಮಹಾರಾಷ್ಟ್ರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು, ಬಾಗಲಕೋಟೆಗೆ ಮಧ್ಯಾಹ್ನ ಬರಲಿದ್ದಾರೆ. ಇಲ್ಲಿನ ಕಾರ್ಯಕ್ರಮದ ಬಳಿಕ ಚಿಕ್ಕೋಡಿಗೆ ತೆರಳುವರು ಎಂದು ತಿಳಿಸಿದರು.
ಒಟ್ಟು 20 ಎಕರೆ ಭೂಮಿಯಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ನಿರ್ದೇಶನದಂತೆ ಪ್ರತ್ಯೇಕ ವೇದಿಕೆ ನಿರ್ಮಿಸಲಾಗುತ್ತಿದೆ. ಮೂರು ಪ್ರತ್ಯೇಕ ಹೆಲಿಪ್ಯಾಡ್‌ ಕೂಡ ಮಾಡಲಾಗುತ್ತಿದೆ. ಬಿಸಿಲು ಹೆಚ್ಚಿರುವುದರಿಂದ ಸಾರ್ವಜನಿಕರು, ಕಾರ್ಯಕರ್ತರು ಕುಳಿತುಕೊಳ್ಳಲು ಪೆಂಡಾಲ್‌ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಹುಬ್ಬಳ್ಳಿಯ ಶ್ರೀನಿವಾಸ ಪೆಂಡಾಲ್‌ದವರಿಗೆ ವಹಿಸಲಾಗಿದೆ ಎಂದರು.
ವಿಜಯಪುರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ಹಾಗೂ ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯ 8 (ನರಗುಂದ ಕ್ಷೇತ್ರ ಸೇರಿ) ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯ ಒಟ್ಟು 2 ಲಕ್ಷ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಮಾಜಿ ಶಾಸಕ ನಾರಾಯಣಸಾ ಬಾಂಡಗೆ, ಬಸವೇಶ್ವರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಯಂಕಂಚಿ, ಮುಖಂಡರಾದ ಅಶೋಕ ಲಿಂಬಾವಳಿ, ಅಶೋಕ ಲಾಗಲೋಟಿ, ರಾಜು ರೇವಣಕರ, ಕೇಶವ ಭಜಂತ್ರಿ, ಜಿ.ಎನ್‌. ಪಾಟೀಲ, ಪ್ರಭುಸ್ವಾಮಿ ಸರಗಣಾಚಾರಿ, ಸವಿತಾ ಲೆಂಕೆನ್ನವರ, ಅನಿತಾ ಸರೋದೆ, ರೇವತಿ ಅಳಗವಾಡಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.