ಬಸವೇಶ್ವರ ಸಹಕಾರಿ ಬ್ಯಾಂಕ್‌ಗೆ ರಾಷ್ಟ್ರೀಯ ಪ್ರಶಸ್ತಿ
ದೆಹಲಿಯಲ್ಲಿ ಕೇಂದ್ರದಿಂದ ಪ್ರಶಸ್ತಿ ಪ್ರದಾನ ; 100 ವರ್ಷ ಪೂರೈಸಿದ ಅತ್ಯುತ್ತಮ ಸಹಕಾರಿ ಬ್ಯಾಂಕ್
Team Udayavani, Jul 5, 2022, 3:47 PM IST
ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರತಿಷ್ಠಿತ ಹಾಗೂ ಶತಮಾನ ಪೂರೈಸಿದ ಇಲ್ಲಿನ ಬಸವೇಶ್ವರ ಸಹಕಾರಿ ಬ್ಯಾಂಕ್‌ಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ನವದೆಹಲಿಯ ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕ್‌ಗಳ ಮಹಾ ಮಂಡಳದಿಂದ ದೇಶದ ವಿವಿಧ ರಾಜ್ಯಗಳಲ್ಲಿ 100 ವರ್ಷ ಪೂರೈಸಿದ ಅತ್ಯುತ್ತಮ ಸಹಕಾರಿ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಸಚಿವರಾದ ಬಿ.ಎಲ್. ಶರ್ಮಾ ಮತ್ತು ಕೇಂದ್ರ ಸರ್ಕಾರದ ಸಹಕಾರ ರಾಜ್ಯ ಸಚಿವ ಭಾಗವತ ಕರಡ ಅವರು, ಬ್ಯಾಂಕ್‌ನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ನಿರ್ದೇಶಕ ವೀರಪ್ಪ ಶಿರಗಣ್ಣನವರ, ರವಿ ಪಟ್ಟಣದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಳೆದ 1917ರಲ್ಲಿ ಆರಂಭಗೊಂಡ, ರಾಜ್ಯದ ಪ್ರತಿಷ್ಠಿತ ಬಸವೇಶ್ವರ ಸಹಕಾರ ಬ್ಯಾಂಕ್, 2017ರಲ್ಲಿ ಯಶಸ್ವಿ 100 ವರ್ಷ ಪೂರೈಸಿದೆ. ಅತ್ಯಂತ ಯಶಸ್ವಿಯಾಗಿ ಶತಮಾನೋತ್ಸವ ಕಾರ್ಯಕ್ರಮ ನಡೆಸಿದ್ದು, ಈ ಶತಮಾನೋತ್ಸವದ ಅಂಗವಾಗಿ ಸ್ಮರಣ ಸಂಚಿಕೆ, ಬಸವ ಕಲಾ ಭವನ ನಿರ್ಮಾಣ, ಸಾಮೂಹಿಕ ವಿವಾಹ, ಸರ್ವಧರ್ಮ ಸಭೆ ಹೀಗೆ 100ಕ್ಕೂ ಹೆಚ್ಚು ವಿವಿಧ ಸಾಮಾಜಿಕ ಕಾರ್ಯಕ್ರಮ ನಡೆಸಲಾಗಿದೆ. ಈ ಕಾರ್ಯಕ್ರಮಗಳ ಜನರ ಮನಸ್ಸಿನಲ್ಲಿ ಇಂದಿಗೂ ಹಸಿರಾಗಿದ್ದು, ಶತಮಾನೋತ್ಸವ ಹಾಗೂ ಬ್ಯಾಂಕ್‌ನ ಪ್ರಧಾನ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ನನ್ನ ಅವಧಿಯಲ್ಲಿ ಜರುಗಿರುವುದು ಬಹಳ ಸಂತೋಷ ತಂದಿದೆ ಎಂದು ಅಧ್ಯಕ್ಷ ಪ್ರಕಾಶ ತಪಶೆಟ್ಟಿ ತಿಳಿಸಿದ್ದಾರೆ.
ಬ್ಯಾಂಕ್ ಯಶಸ್ವಿ 100 ವರ್ಷ ಪೂರೈಸಿದ್ದಲ್ಲದೇ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆಯಲು ಬ್ಯಾಂಕ್‌ನ ಎಲ್ಲ ಅಧಿಕಾರಿ-ಸಿಬ್ಬಂದಿ, ನಿರ್ದೇಶಕರು, ಗ್ರಾಹಕರು, ಠೇವಣಿದಾರರ ಸಹಕಾರವೂ ಮುಖ್ಯವಾಗಿದೆ. ಅವರೆಲ್ಲರಿಗೂ ವಿಶೇಷ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಬ್ಯಾಂಕ್ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಸಿ. ಕೇವಾಳಿ, ಆಡಳಿತಾಧಿಕಾರಿ ಬಿ.ಎಸ್. ನಾವಲಗಿ, ಅಧಿಕಾರಿ ಎಸ್.ಬಿ. ಬಾದಾಮಿ, ಪಿ.ಎನ್. ಹಳ್ಳಿಕೇರಿ, ಎಂ.ಎಸ್. ಗುಡಗುಂಟಿ, ವಿ.ಎಂ. ಹಿರೇಮಠ ಹಾಗೂ ಎಲ್ಲ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು ಅಧ್ಯಕ್ಷ ತಪಶೆಟ್ಟಿ ಅವರಿಗೆ ಅಭಿನಂದಿಸಿದ್ದಾರೆ.
ಕಳೆದ 1917ರಲ್ಲಿ ಕೇವಲ ಒಂದು ಶಾಖೆಯಿಂದ ಆರಂಭಗೊಂಡ ಪ್ರತಿಷ್ಠಿತ ಬಸವೇಶ್ವರ ಸಹಕಾರಿ ಬ್ಯಾಂಕ್, ಇಂದು ಇಡೀ ರಾಜ್ಯದ ಹಲವು ಜಿಲ್ಲೆಗಳಿಗೆ ವಿಸ್ತರಿಸಿಕೊಂಡಿದೆ. ಯಶಸ್ವಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ರಾಷ್ಟ್ರೀಯ ಪ್ರಶಸ್ತಿ ನೀಡಿರುವುದು, ಬ್ಯಾಂಕ್‌ನ ವಿಶ್ವಾಸಾರ್ಹತೆಗೆ ಸಾಕ್ಷಿಯಾಗಿದೆ. ನನ್ನ ಅವಧಿಯಲ್ಲಿ ಬ್ಯಾಂಕ್ ಹಲವು ರೀತಿಯ ಸಾಧನೆ ಮಾಡಿರುವುದು ಖುಷಿ ತಂದಿದೆ. -ಪ್ರಕಾಶ ತಪಶೆಟ್ಟಿ, ಅಧ್ಯಕ್ಷ, ಬಸವೇಶ್ವರ ಸಹಕಾರಿ ಬ್ಯಾಂಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.