ನವನಗರ: ತಾಯಿ-ಮಗು ಕೋವಿಡ್ ಮುಕ್ತ


Team Udayavani, Jun 19, 2020, 1:30 PM IST

ನವನಗರ: ತಾಯಿ-ಮಗು ಕೋವಿಡ್ ಮುಕ್ತ

ಬಾಗಲಕೋಟೆ: ಜಿಲ್ಲೆಯಲ್ಲಿ ಮತ್ತೆ ಒಂದು ವರ್ಷದ ಮಗು ಸೇರಿದಂತೆ ಇಬ್ಬರು ಕೋವಿಡ್‌ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಮುಖರಾಗಿ, ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಈ ವರೆಗೆ 93 ಜನರು ಗುಣಮುಖರಾಗಿದ್ದು, ಸೋಂಕಿತರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ.

ನವನಗರದ ಸೆಕ್ಟರ್‌ ನಂ.10ರ ನಿವಾಸಿ, ಮಹಾರಾಷ್ಟ್ರದಿಂದ ಮರಳಿದ್ದ 26 ವರ್ಷದ ಮಹಿಳೆ ಪಿ-5967 ಮತ್ತು ಅವರ 1 ವರ್ಷದ ಹೆಣ್ಣು ಮಗು ಪಿ-5966 ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ಡಾ| ಚಂದ್ರಕಾಂತ ಜವಳಿ ಗುಣಮುಖರಾದವರಿಗೆ ಪ್ರಮಾಣ ಪತ್ರ ವಿತರಿಸಿದರೆ, ಆಸ್ಪತ್ರೆ ಸಿಬ್ಬಂದಿ ಕೈಗಳಿಗೆ ಸೀಲ್‌ ಹಾಕಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.

ಜಿಲ್ಲೆಯಿಂದ ಕಳುಹಿಸಲಾದ 187 ಸ್ಯಾಂಪಲ್‌ಗ‌ಳ ಪೈಕಿ 112 ನೆಗೆಟಿವ್‌ ಬಂದಿದ್ದು, 75 ವರದಿ ಬರಬೇಕಾಗಿದೆ. ಪ್ರತ್ಯೇಕವಾಗಿ 570 ಜನರ ಮೇಲೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 9864 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ 9629 ನೆಗೆಟಿವ್‌ ಬಂದಿವೆ. 112 ಜನರಿಗೆ ಸೋಂಕು ತಗುಲಿತ್ತು. ಅದರಲ್ಲಿ 93 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನೂ 18 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ಮಹಾರಾಷ್ಟ್ರ ಮತ್ತು ಆಂಧ್ರದಿಂದ ತಲಾ ಒಬ್ಬರು ಜಿಲ್ಲೆಗೆ ಬಂದಿದ್ದು, ಆಂಧ್ರದಿಂದ ಬಂದವರಿಗೆ ಹೋಂ ಕ್ವಾರಂಟೈನ್‌ ಹಾಗೂ ಮಹಾರಾಷ್ಟ್ರದಿಂದ ಬಂದ ವ್ಯಕ್ತಿಗೆ ಸರ್ಕಾರಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗೋವಾದಿಂದ ಬಂದ ವ್ಯಕ್ತಿಗೆ ಸೋಂಕು: ಗೋವಾದಿಂದ ಆಗಮಿಸಿದ್ದ ಬಾಗಲಕೋಟೆ ತಾಲೂಕಿನ ತಾಂಡಾದ 30 ವರ್ಷದ ಪುರುಷ ಪಿ-7823 (ಬಿಜಿಕೆ-112)ನಿಗೆ ಗುರುವಾರ ಸೋಂಕು ದೃಢಪಟ್ಟಿದೆ. ಈ ವ್ಯಕ್ತಿ ಗೋವಾದಿಂದ ಬಂದ ಬಳಿಕ ತಮ್ಮೂರಿಗೆ ತೆರಳದೇ ನೇರವಾಗಿ ಜಿಲ್ಲಾಸ್ಪತ್ರೆಗೆ ತೆರಳಿ, ತಾನು ಗೋವಾದಿಂದ ಬಂದಿದ್ದು, ಕೋವಿಡ್‌ ತಪಾಸಣೆ ಮಾಡಿ ಎಂದು ಕೇಳಿಕೊಂಡಿದ್ದರು. ಜಿಲ್ಲಾ ಕೋವಿಡ್‌-19 ಆಸ್ಪತ್ರೆಯ ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಿದಾಗ ಪಾಸಿಟಿವ್‌ ಬಂದಿತ್ತು. ಬಳಿಕ ಆತನ ಗಂಟಲು ದ್ರವ ಬೆಂಗಳೂರಿಗೆ ಕಳುಹಿಸಲಾಗಿತ್ತು. ಅಲ್ಲಿಯೂ ಪಾಜಿಟಿವ್‌ ಬಂದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.