ನೀಟ್ ಪರೀಕ್ಷೆ: ಪ್ರಥಮ ರ್ಯಾಂಕ್ ಗಳಿಸಿದ ರನ್ನಬೆಳಗಲಿಯ ಚಿದಾನಂದ ಕಲ್ಲಪ್ಪ
Team Udayavani, Feb 2, 2022, 10:47 AM IST
ಮಹಾಲಿಂಗಪುರ: ಸಮೀಪದ ರನ್ನಬೆಳಗಲಿ ಪಟ್ಟಣದ ಡಾ. ಚಿದಾನಂದ ಕಲ್ಲಪ್ಪ ಕುಂಬಾರ ಅವರು ಮೆಡಿಕಲ್ ವಿಭಾಗದ ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡು ರನ್ನಬೆಳಗಲಿ ಪಟ್ಟಣದ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿದ್ದಾರೆ.
ಚಿದಾನಂದ ಅವರು ರನ್ನಬೆಳಗಲಿ ಬಡಕುಟುಂಬದ ಕಲ್ಲಪ್ಪ ಮತ್ತು ಕಸ್ತೂರಿ ಕುಂಬಾರ ದಂಪತಿಗಳ ಎರಡನೇ ಮಗನಾಗಿ ಜನಿಸಿದರು. ಚಿಕ್ಕವಯಸ್ಸಿನಲ್ಲೇ (1998) ತಾಯಿಯನ್ನು ಕಳೆದುಕೊಂಡವರು. ಇವರ ತಂದೆ ಕಲ್ಲಪ್ಪ ಅವರು ನಿತ್ಯ ಕೂಲಿ ಕೆಲಸಕ್ಕೆ ಹೋಗಿ ಇವರಿಗೆ ಶಿಕ್ಷಣವನ್ನು ಕೊಡಿಸಿದ್ದಾರೆ. ಡಾ.ಚಿದಾನಂದ ಅವರ ತಂದೆ ಇಂದಿಗೂ ಕೂಲಿಕೆಲಸ ಮಾಡುತ್ತಾರೆ. ಹಿರಿಯ ಸಹೋದರ ಪರಮಾನಂದ ಮಹಾಲಿಂಗಪುರ ಪಟ್ಟಣದಲ್ಲಿ ಟೇಲರಿಂಗ್ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.
ಹುಬ್ಬಳ್ಳಿ ಕೆಎಮ್ ಸಿ ಯಲ್ಲಿ ಎಂಬಿಬಿಎಸ್ ಪದವಿಯನ್ನು ಪಡೆದರು. ಎಂಬಿಬಿಎಸ್ ನಲ್ಲಿ ಕರ್ನಾಟಕ ರಾಜ್ಯಕ್ಕೆ 806 ನೇ ಸ್ಥಾನವನ್ನು ಗಳಿಸಿದ್ದರು. ದೆಹಲಿಯ AIMS ನಲ್ಲಿ ವಿಧ್ಯಾಭ್ಯಾಸ ಮಾಡಿ ಎಂಡಿ (ಔಷಧ) ಪದವಿಯಲ್ಲಿ ದೇಶಕ್ಕೆ 300 ನೇ ರ್ಯಾಂಕ್ ಪಡೆದುಕೊಂಡಿದ್ದರು.
ಕಳೆದ ಎರಡು ವರ್ಷದಿಂದ ಹೈದರಾಬಾದ್ ನ ಗ್ಲೋಬಲ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಚಿದಾನಂದ ಅವರು 2021 ನೇ ಸಾಲಿನ ಸುಪರ್ ಸ್ಪೆಷಾಲಿಟಿ ನೀಟ್ ಪರೀಕ್ಷೆಯಲ್ಲಿ MD. Gastroenterology ಮತ್ತು MD. Hematology ಎರಡು ವಿಭಾಗದಲ್ಲಿ ಭಾರತ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದುಕೊಂಡು ಅವಿಸ್ಮರಣೀಯ ಸಾಧನೆ ಮಾಡಿದ್ದಾರೆ.
ಸಾಧಿಸುವ ಛಲ, ಸತತ ಅಧ್ಯಯನ, ಕಠಿಣ ಪರಿಶ್ರಮ ಪಡುವವರಿಗೆ ಬಡತನ ಎಂದಿಗೂ ಅಡ್ಡಿಯಾಗುವದಿಲ್ಲ ಎಂಬುವದಕ್ಕೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನಬೆಳಗಲಿ ಪಟ್ಟಣದ ಡಾ. ಚಿದಾನಂದ ಕಲ್ಲಪ್ಪ ಕುಂಬಾರ ಅವರು ಸಾಕ್ಷೀಯಾಗಿದ್ದಾರೆ. ಡಾ. ಚಿದಾನಂದ ಕುಂಬಾರ ಅವರ ವೈದ್ಯಕೀಯ ಕ್ಷೇತ್ರದ ಈ ಸಾಧನೆಗೆ ರನ್ನಬೆಳಗಲಿ ಪಟ್ಟಣದ ಹಿರಿಯರು, ಸಾರ್ವಜನಿಕರು, ಕುಂಬಾರ ಕುಟುಂಬದ ಸದಸ್ಯರು ಅಭಿನಂದನೆಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.