ನಿಪಾ ಸೋಂಕು ಜ್ವರ ಹರಡದಂತೆ ಕ್ರಮ: ರಾಮಚಂದ್ರನ್
6 ತಾಲೂಕು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ಘಟಕ ಸ್ಥಾಪನೆ ಜಿಲ್ಲಾದ್ಯಂತ ಅರಿವು ಕಾರ್ಯಕ್ರಮ-ಭಿತ್ತಿಪತ್ರ ಬಿಡುಗಡೆ
Team Udayavani, Jun 8, 2019, 1:16 PM IST
ಬಾಗಲಕೋಟೆ: ನಿಪಾ ವೈರಸ್ ಕುರಿತು ನಡೆದ ಜಿಲ್ಲಾಮಟ್ಟದ ಮುಂಜಾಗ್ರತ ಸಭೆಯಲ್ಲಿ ಜಿಲ್ಲಾಧಿಕಾರಿ ಏರ್.ರಾಮಚಂದ್ರನ್ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು.
ಬಾಗಲಕೋಟೆ: ಮಾರಣಾಂಕಿತ ನಿಪಾ ವೈರಸ್ ಸೋಂಕಿನ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಿಪಾ ವೈರಸ್ ಕುರಿತು ಜರುಗಿದ ಜಿಲ್ಲಾಮಟ್ಟದ ಮುಂಜಾಗ್ರತಾ ಸಭೆಯಲ್ಲಿ ಮಾತನಾಡಿದ ಅವರು, ಕೇರಳ ರಾಜ್ಯದಲ್ಲಿ ನಿಪಾ ವೈರಾಣು ಕಂಡುಬಂದಿರುವುದರಿಂದ ಜಿಲ್ಲೆಯಲ್ಲಿಯೂ ಸಹ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ನಿಪಾ ವೈರಾಣು ಜ್ವರದ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯ 6 ತಾಲೂಕು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ಸ್ಥಾಪಿಸಬೇಕು. ಸೋಂಕಿತ ಬಾವಲಿಗಳ ಮೂಲಕ ಹರಡುತ್ತಿರುವ ಈ ವೈರಾಣು ಜ್ವರಕ್ಕೆ ಸದ್ಯದ ಮಟ್ಟಿಗೆ ಯಾವುದೇ ರೀತಿಯ ಚಿಕಿತ್ಸೆ ಅಥವಾ ಔಷಧಿ ಲಭ್ಯವಿರುವದಿಲ್ಲ ಎಂದು ತಿಳಿದು ಬಂದಿದ್ದು, ನಿಫಾ ವೈರಾಣು ಸೋಂಕು ಹರಡದಂತೆ ಜಾಗೃತಿ ವಹಿಸಬೇಕಾಗಿದೆ. ಆದ್ದರಿಂದ ಸೋಂಕಿತ ಬಾವಲಿಗಳು ಕಚ್ಚಿದ ಹಣ್ಣುಗಳನ್ನು, ಗಿಡಗಳಿಂದ ಕೆಳಗೆ ಬಿದ್ದಿರುವ ಹಣ್ಣುಗಳನ್ನು ತಿನ್ನದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ನಿಫಾ ವೈರಾಣು ಸೋಂಕು ಜ್ವರವು ನೇರ ಸಂಪರ್ಕದಿಂದ ಹರಡುವುದರಿಂದ ಸೋಂಕಿತ ವ್ಯಕ್ತಿ ಮತ್ತು ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭಗಳಲ್ಲಿ ಕುರಿಗಳಿಂದ ದೂರವಿರುವುದು ಸೂಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಅನಂತ ದೇಸಾಯಿ ತಿಳಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ವಿಜಯ ಕಂಠಿ, ಗಿಡದಲ್ಲಿ ಪಕ್ಷಿ ಅಥವಾ ಬಾವಲಿಗಳು ತಿಂದು ಹೋದ ಹಾಗೂ ಮರದ ಕೆಳಗೆ ಬಿದ್ದ ಹಣ್ಣುಗಳನ್ನು ಸಾರ್ವಜನಿಕರು ತಿನ್ನಬಾರದು ಎಂದರು. ಡಾ| ಪ್ರಕಾಶ ಬಿರಾದಾರ, ಕುಟುಂಬ ಕಲ್ಯಾಣಾಧಿಕಾರಿ ಪಟ್ಟಣಶೇಟ್ಟಿ, ಆರೋಗ್ಯ ಶಿಕ್ಷಣಾಧಿಕಾರಿ ವಿ.ಸಿ.ಪವಾಡೆಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.