ರಸ್ತೆಗಿಲ್ಲ ರಕ್ಷಣಾ ಬ್ಯಾರಿಕೇಡ್‌: ಸಂಚಾರ ದುಸ್ತರ

Team Udayavani, Sep 7, 2020, 3:21 PM IST

ರಸ್ತೆಗಿಲ್ಲ ರಕ್ಷಣಾ ಬ್ಯಾರಿಕೇಡ್‌: ಸಂಚಾರ ದುಸ್ತರ

ಕಲಾದಗಿ: ಮೂರು ತಾಲೂಕಿನ ಮೂವತ್ತು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ರಸ್ತೆಗೆ ರಕ್ಷಣಾ ಬ್ಯಾರಿಕೇಡ್‌ ಅಳವಡಿಸದೇ ಇರುವುದರಿಂದ ವಾಹನ ಸವಾರರು ನಿತ್ಯವೂ ಪ್ರಾಣ ಭಯದಲ್ಲೇ ಸಂಚರಿಸುವಂತಾಗಿದೆ.

ಬಾಗಲಕೋಟೆ, ಬೀಳಗಿ, ಮುಧೋಳ ತಾಲೂಕಿನ ಹಲವು ಹಳ್ಳಿಗಳಿಗೆ ಸನಿಹ ಸಂಪರ್ಕ ರಸ್ತೆ ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ರಸ್ತೆ ರೈತರಿಗೆ ವ್ಯಾಪಾರಸ್ಥರಿಗೆ ಉಪಯೋಗಿ ಸಂಚಾರ ರಸ್ತೆಯಾಗಿದೆ. ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಬ್ಯಾರೇಜ್‌ ಬಳಿಯ ಬಾಗಲಕೋಟೆ ತಾಲೂಕಿನ ಭಾಗದ ಮಣ್ಣು ಏರು ರಸ್ತೆಗೆ ಎರಡೂ ಕಡೆ ರಕ್ಷಣಾ ಬ್ಯಾರಿಕೇಡ್‌ ಇಲ್ಲ.

ಸವಾರರ ಆಕ್ರೋಶ: ಕಳೆದ ಆಗಸ್ಟ್‌ ಮೊದಲ ವಾರದಲ್ಲಿ ಉಂಟಾದ ನದಿಯ ಮಹಾಪ್ರವಾಹಕ್ಕೆ ಬ್ಯಾರೇಜ್‌ ಬಳಿಯ 200 ಮೀಟರ್‌ ರಸ್ತೆ ಸಮೇತ ಹಿಂದೆ ಅಳವಡಿಸಿದ್ದ ಕ್ರಾಸ್‌ ಬೇರಿಯರ್‌ ಕಿತ್ತು ಹೋಗಿದ್ದವು. ಪ್ರವಾಹ ಅಬ್ಬರ ಕಡಿಮೆಯಾದ ನಂತರ ತುರ್ತು ಕಾಮಗಾರಿಯಲ್ಲಿ ರಸ್ತೆಯನ್ನು ದುರಸ್ತಿ ಮಾಡಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು, ಸಂಚಾರ ರಸ್ತೆ ನಿರ್ಮಿಸಿ ವರ್ಷ ಕಳೆದರೂ ಇನ್ನೂ ಏರು ರಸ್ತೆಗೆ ಡಾಂಬರೀಕರಣ ಮಾಡಿಲ್ಲ,ಜೊತೆಗೆ ಸುರಕ್ಷತಾ ದೃಷ್ಟಿಯಿಂದ ಕ್ರಾಸ್‌ ಬ್ಯಾರಿಯರ್‌ ಜೋಡಣೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

15 ಅಡಿ ಆಳ: ಬ್ಯಾರೇಜ್‌ ಬಳಿ ಮಣ್ಣು ಏರು ರಸ್ತೆಯಲ್ಲಿ ನಿರ್ಮಿಸಲಾಗಿದೆ, ಎರಡೂ ಕಡೆ ಹದಿನೈದು ಅಡಿಯಿಂದ ಇಪ್ಪತ್ತು ಅಡಿ ಆಳ ಹೊಂದಿದೆ. ವಾಹನ ಸವಾರರು ಎಚ್ಚರ ತಪ್ಪಿದರೆ ಅನಾಹುತ ಖಚಿತ ಎಂಬಂತಾಗಿದೆ. ಹಳ್ಳಿಗಳ ಸನಿಹ ಸಂಪರ್ಕಕ್ಕೆ ಪ್ರಮುಖ ರಸ್ತೆಯಾಗಿರುವ ಈ ರಸ್ತೆ ಕೂಡಲೇ ಡಾಂಬರೀಕರಣ ಮತ್ತು ರಸ್ತೆ ಎರಡು ಬದಿ ಕ್ರಾಸ್‌ ಬ್ಯಾರಿಯರ್‌ ಜೋಡಣೆ ಮಾಡಬೇಕೆಂದು ವಾಹನ ಸವಾರರು, ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬ್ಯಾರೇಜ್‌ ಬಳಿ ರಸ್ತೆಯ ಎರಡೂ ಬದಿ 20 ಅಡಿ ಆಳದ ತೆಗ್ಗುಗಳಿವೆ. ಸುರಕ್ಷತಾ ದೃಷ್ಟಿಯಿಂದ ಕ್ರಾಸ್‌ ಬ್ಯಾರಿಯರ್‌ ಅಳವಡಿಸಲಿ ಹಾಗೂ ರಸ್ತೆಗೆ ಡಾಂಬರೀಕರಣ ಮಾಡಬೇಕು. – ಬಸವರಾಜ ಬಿಲಕೇರಿ, ಅಂಕಲಗಿ ಗ್ರಾಮಸ್ಥ

ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ಬಳಿಯ ರಸ್ತೆಗೆ ಸೈಡ್‌ ಕ್ರಾಸ್‌ ಬೇರಿಯರ್‌, ಪಿಚ್ಚಂಗಿ ಹಚ್ಚಿಕೊಳ್ಳುವಿಕೆ, ಡಾಂಬರೀಕರಣ ಕಾಮಗಾರಿಗೆ ಹಣಕಾಸು ಇಲಾಖೆಯ ಅನುಮೋದನೆ ದೊರೆಯದೆ ಇರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ. – ರವೀಂದ ಕುಂಬಾರ, ಎಇಇ, ಸಣ್ಣ ನೀರಾವರಿ ಇಲಾಖೆ ಬಾಗಲಕೋಟೆ.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.