ಆರ್‌ಎಂಎಸ್‌ಎ ಶಿಕ್ಷಕರಿಗಿಲ್ಲ ಯುಗಾದಿ ಸಂಭ್ರಮ!

Team Udayavani, Mar 17, 2018, 10:52 AM IST

rmsa.jpg

ಬಾಗಲಕೋಟೆ: ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಯ ಹಲವು ಶಿಕ್ಷಕರಿಗೆ ಈ ಬಾರಿಯ ಯುಗಾದಿ ಸಂಭ್ರಮ ಇಲ್ಲ!
ರಾಜ್ಯದ ಬಾಗಲಕೋಟೆ, ವಿಜಯಪುರ, ಬೀದರ, ಕಲಬುರಗಿ, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಉನ್ನತೀಕರಿಸಿದ ಪ್ರೌಢ ಶಾಲೆಗಳ ಮುಖ್ಯಾಧ್ಯಾಪಕರು, ಶಿಕ್ಷಕರಿಗೆ ಕಳೆದ ಅಕ್ಟೋಬರ್‌ ನಿಂದ ವೇತನವೇ ಕೊಟ್ಟಿಲ್ಲ. ವೇತನಕ್ಕಾಗಿ ಶಿಕ್ಷಕರು, ಹಲವು ಪ್ರಯತ್ನ ಮಾಡಿದರೂ, ಯುಗಾದಿಗೆ ಸಂಬಳ ಬಂದಿಲ್ಲ.

ಪ್ರಾಥಮಿಕ ಶಿಕ್ಷಣಕ್ಕೆ ಇದ್ದ ಸರ್ವ ಶಿಕ್ಷಣ ಅಭಿಯಾನದಂತೆ ಪ್ರೌಢ ಶಿಕ್ಷಣಕ್ಕೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಎಂಬುದು ಕೇಂದ್ರ ಸರ್ಕಾರದ ಯೋಜನೆ. ಈ ಯೋಜನೆಯಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ, ಅದರಲ್ಲಿ ಅಗತ್ಯ ಇರುವೆಡೆ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಲಾಗಿತ್ತು. ಬಳಿಕ ಆರ್‌ಎಂಎಸ್‌ಎ ಯೋಜನೆಯಡಿಯೇ ಪ್ರತ್ಯೇಕ ಶಿಕ್ಷಕರ ನೇಮಕ ಮಾಡಿ ಮಕ್ಕಳಿಗೆ ಶಿಕ್ಷಣ ಕೊಡಲಾಗುತ್ತಿದೆ. ಉಳಿದ ಶಿಕ್ಷಕರಂತೆ ಈ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ನೇರವಾಗಿ ಸಂಬಳ ಬರುವುದಿಲ್ಲ. ಆರ್‌ ಎಂಎಸ್‌ಎ ಶಿಕ್ಷಕರ ವೇತನಕ್ಕಾಗಿಯೇ (ಲೆಕ್ಕ ಶಿರ್ಷಿಕೆ :2201-00-102-0-69-001) ಎಂಬ ಶೀರ್ಷಿಕೆ ಇದೆ. ಇದರಡಿ ಈ ಶಿಕ್ಷಕರಿಗೆ ವೇತನ ಮಾಡಲಾಗುತ್ತದೆ. ಕಳೆದ ಅಕ್ಟೋಬರ್‌ನಲ್ಲಿ ಆರ್‌ ಎಂಎಸ್‌ಎ ಯೋಜನೆಯಡಿ ಕೆಲಸ ಮಾಡುವ ಶಿಕ್ಷಕರ ವರ್ಗಾವಣೆ, ಖಾಲಿ ಇದ್ದ ಹುದ್ದೆಗಳ ನೇಮಕಾತಿ ನಡೆದಿತ್ತು. ಹೀಗಾಗಿ ಹೊಸ ಹಣಕಾಸು ವರ್ಷದ ಬಳಿಕ ನಡೆದ ಈ ಪ್ರಕ್ರಿಯೆಯಿಂದ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರಲಿಲ್ಲ. ಇದರಿಂದ ಅಕ್ಟೋಬರ್‌ನಿಂದ ಈವರೆಗೆ (ಆರು ತಿಂಗಳಿಂದ) ವೇತನ ನೀಡಲಾಗಿಲ್ಲ ಎಂಬುದು ಹಿರಿಯ ಅಧಿಕಾರಿಗಳ ವಿವರಣೆ.

25 ಜಿಲ್ಲೆಯಲ್ಲೂ ಇದೇ ಸಮಸ್ಯೆ: ಬಾಗಲಕೋಟೆ ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ಈ ಸಮಸ್ಯೆ ಇದೆ. ಸರ್ಕಾರದ ಮಟ್ಟದಲ್ಲಿ ತೀವ್ರ ಒತ್ತಡದ ಬಳಿಕ ಮಾರ್ಚ್‌ವರೆಗೆ ಶಿಕ್ಷಕರ ವೇತನ ಪಾವತಿಗೆ ಪರ್ಯಾಯ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.  

ಆರ್‌ಎಂಎಸ್‌ಎ ಶಿಕ್ಷಕರ ವೇತನ ಆರು ತಿಂಗಳಿಂದ ಆಗಿಲ್ಲ. ನಾನು ನಿರಂತರವಾಗಿ ಒತ್ತಾಯ ಮಾಡುತ್ತಲೇ ಇದ್ದೇನೆ. ಈಚೆಗೆ ಶಿಕ್ಷಣ ಸಚಿವ ತನ್ವೀರ ಸೇಠ್ಠ… ಅವರನ್ನು ಭೇಟಿ ಮಾಡಿ ಮತ್ತೆ ಒತ್ತಾಯ ಮಾಡಿದ್ದೇನೆ. ಆ ಬಳಿಕ ಪರ್ಯಾಯ ವ್ಯವಸ್ಥೆಯಡಿ ವೇತನ ಪಾವತಿ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಸರ್ಕಾರದ ನಿರ್ಲಕ್ಷ್ಯದಿಂದ ಶಿಕ್ಷಕರು ವೇತನ ಇಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ. 
 ಅರುಣ ಶಹಾಪುರ, ವಿಧಾನ ಪರಿಷತ್‌ ಸದಸ್ಯ

ನಾನು ನವೆಂಬರ್‌ನಲ್ಲಿ ಜಿಲ್ಲೆಗೆ ಬಂದಿದ್ದು, ಆರ್‌ಎಂಎಸ್‌ಎ ಶಿಕ್ಷಕರ ವೇತನ ಆಗದೇ ಇರುವುದು ನನ್ನ ಗಮನಕ್ಕೆ ಬಂದಿತ್ತು. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿತ್ತು. ಇದಕ್ಕಾಗಿ ಪ್ರತ ವ್ಯವಹಾರವೂ ನಡೆಸಲಾಗಿದೆ. ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟರದ ಕಾರಣ ಸಮಸ್ಯೆಯಾಗಿತ್ತು. ಮುಂದಿನ ವರ್ಷದಿಂದ ಈ ರೀತಿ ಸಮಸ್ಯೆ ಆಗದಂತೆ ಈಗಲೇ ಎಚ್ಚರಿಕೆ ವಹಿಸಲಾಗಿದೆ. ಒಂದು ವಾರದಲ್ಲಿ ಪಾವತಿ ಮಾಡುತ್ತೇವೆ.
 ಎಂ.ಆರ್‌. ಕಾಮಾಕ್ಷಿ, ಉಪ ನಿರ್ದೇಶಕಿ, ಸಾರ್ವಜನಿಕ ಶಿಕ್ಷಣ ಇಲಾಖೆ

„ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.