ನಾಮಪತ್ರ ಸಲ್ಲಿಕೆಯಲ್ಲಿ ಗಮನ ಸೆಳೆದ ಅಭ್ಯರ್ಥಿಗಳು
Team Udayavani, Dec 13, 2020, 2:34 PM IST
ಮಹಾಲಿಂಗಪುರ: ಪ್ರತಿಯೊಂದು ಗ್ರಾಮಗಳಲ್ಲಿ\ ಗ್ರಾಪಂ ಚುನಾವಣೆಯ ಕದನ ಕುತೂಹಲವೇ ಜೋರಾಗಿದೆ. ಮೊದಲ ಹಂತದ ಚುನಾವಣೆಯ ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಸಂಗಾನಟ್ಟಿಯ ಗ್ರಾಮದ ಎರಡು ವಾರ್ಡ್‌ನ ಅಭ್ಯರ್ಥಿಗಳು ರೈತಮಿತ್ರ ಎತ್ತಿನ ಬಂಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಸುವ ಮೂಲಕ ಗಮನ ಸೆಳೆದರು.
ಸಂಗಾನಟ್ಟಿ ಗ್ರಾಮದ 6ನೇ ವಾರ್ಡಿನ ಸಾಮಾನ್ಯ ಕ್ಷೇತ್ರದಿಂದ ಸತ್ಯರಾಜು ಸೈದಾಪುರ, ಹಿಂದುಳಿದ ವರ್ಗ ಅ ಮಹಿಳೆ ಕ್ಷೇತ್ರದಿಂದ ಶಾಂತವ್ವ ಪೂಜಾರಿ, ಎಸ್ಟಿ ಮಹಿಳಾ ಕ್ಷೇತ್ರದಿಂದ ಮಾನವ್ವ ಗಾಡಿಕಾರ, ಸಂಗಾನಟ್ಟಿ ಗ್ರಾಮದ 5ನೇ ವಾರ್ಡಿನ ಸಾಮಾನ್ಯ ಕ್ಷೇತ್ರದಿಂದ ಮಾರುತಿ ಇಟ್ನಾಳ, ಹಿಂದೂಳಿದ ವರ್ಗ ಅ ಕ್ಷೇತ್ರದಿಂದ ದುಂಡಪ್ಪ ಮೇಟಿ, ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಯಲ್ಲವ್ವ ಮೇಟಿ ಎತ್ತಿನ ಬಂಡಿಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಸಂಗಾನಟ್ಟಿ ಗ್ರಾಮದಿಂದ ಮದಭಾಂವಿ ಗ್ರಾಮದ ಗ್ರಾಪಂ ಕಾರ್ಯಾಲಯದವರೆಗೆಅಭ್ಯರ್ಥಿಗಳು ಎತ್ತಿನ ಬಂಡಿಯಲ್ಲಿ ಮೆರವಣಿಗೆ ನಡೆಸಿದರು. ಬೆಂಬಲಿಗರು, ಅಭಿಮಾನಿಗಳು ಸಹ ಸುಮಾರು 38 ಎತ್ತಿನ ಬಂಡಿಗಳಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು.
ಮೂರು ಕಿ.ಮೀ. ಮೆರವಣಿಗೆ: ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಸೇರಿ ಸುಮಾರು 38 ಎತ್ತಿನ ಗಾಡಿಗಳನ್ನು ಮಾವಿನ ತೋರಣ, ಕಬ್ಬು ಕಟ್ಟಿ ಸಿಂಗರಿಸಿದ್ದರು. ಸಂಗಾನಟ್ಟಿಗ್ರಾಮದಿಂದ ಮದಭಾಂವಿ ಗ್ರಾಮದವರೆಗೆ ಸುಮಾರು 3 ಕಿ.ಮೀಟರನಷ್ಟು ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ಆಧುನಿಕ ಯಂತ್ರೋಪಕರಣಗಳಿಂದಾಗಿ ರೈತಮಿತ್ರ ಎತ್ತು ಮತ್ತು ಎತ್ತಿನ ಬಂಡಿಗಳ ಸಂಖ್ಯೆ ಇಂದು ಕಡಿಮೆಯಾಗಿದೆ. ಸಿಂಗರಿಸಿದ ಎತ್ತಿನ ಬಂಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದೇವೆ. ಈ ಚುನಾವಣೆಯಲ್ಲಿ ಗ್ರಾಮಸ್ಥರು ಅವರ ಸೇವೆಗಾಗಿ ನಮಗೆ ಅವಕಾಶ ನೀಡಿದರೆ, ಗ್ರಾಮದ -ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಸತ್ಯರಾಜು ಸೈದಾಪುರ. ಸಂಗಾನಟ್ಟಿ ಗ್ರಾಮದ 6ನೇ ವಾರ್ಡಿನ ಅಭ್ಯರ್ಥಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.