ಘಟಪ್ರಭಾ ಬಲದಂಡೆ ಕಾಲುವೆ ಸ್ವಚ್ಛತೆಗೆ ಸೂಚನೆ

Team Udayavani, Apr 21, 2019, 2:23 PM IST

bag-3

ಬಾಗಲಕೋಟೆ: ಜಿಆರ್‌ಬಿಸಿ ಕಾಲುವೆ ತುಂಬ ಜಾಲಿ, ಗಿಡಕಂಟಿಗಳು ಅಪಾರ ಪ್ರಮಾಣದಲ್ಲಿ ಬೆಳೆದ ನಿಂತು ನೀರು ಸರಾಗವಾಗಿ ಹೋಗದಂತೆ ಅಡ್ಡಿಯಾಗಿದ್ದು, ಇದರ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತ ತುಷಾರ ಗಿರಿನಾಥ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಆರ್‌ಬಿಸಿ ಕಾಲುವೆಗೆ ನೀರು ಹರಿಸಲಾಗುತ್ತಿದ್ದರೂ ಈವರೆಗೆ ನಿರೀಕ್ಷಿತ ಮಟ್ಟದಲ್ಲಿ ಡಿಸ್ಟಿಬುಟರ್‌ ಚಾಲನ್‌ಗಳಲ್ಲಿ ಹರಿಯುತ್ತಿಲ್ಲ. ಇಲ್ಲಿ ಬೆಳೆದು ನಿಂತ ಜಾಲಿಕಂಠಿ, ನೀರು ಸರಾಗವಾಗಿ ಹರಿಯಲು ತಡೆಗಟ್ಟಿದ್ದು, ತಕ್ಷಣವೇ ಜಾಲಿಯನ್ನು ತೆಗೆಯಬೇಕು ಎಂದು ತಿಳಿಸಿದರು.

ಡಿಸಿ ಆರ್‌.ರಾಮಚಂದ್ರನ್‌ ಮಾತನಾಡಿ, ಈ ಕುರಿತು ತಾವು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೂ ತಿಳಿಸಲಾಗುವುದು. ಬೇಸಿಗೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಗಳಿಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ಕ್ರಮ ಕೈಗೊಳ್ಳಬೇಕು. ಎಲ್ಲ ಕುಡಿಯುವ ನೀರಿನ ಯೋಜನೆಗಳನ್ನು ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುದ್ದಿಕರಣಗೊಳಿಸಲು ಕ್ರಮ ಕೈಗೊಳ್ಳಲು ತಿಳಿಸಿದರು. ಕೆರೂರ ಪಟ್ಟಣದಲ್ಲಿ ಒಂದು ಟ್ಯಾಂಕರ್‌ ಹಾಗೂ ಖಾಸಗಿ ಬೋರವೆಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, 36 ಬೋರ್‌ವೆಲ್ಗಳು ಚಾಲ್ತಿಯಲ್ಲಿವೆ ಎಂದು ಸಭೆಗೆ ತಿಳಿಸಿದರು. ಪ್ರತಿ ತಾಲೂಕು ಟಾಸ್ಕ್ಪೋರ್ಸ್‌ಗಳಿಗೆ ಟಿಟಿಎಪ್‌ ಅಡಿ 1.5 ಕೋಟಿಯಂತೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. 122 ಬೋರವೆಲ್ಗಳನ್ನು ಸಹ ಕೊರೆಯಲಾಗಿದೆ. ಟಿಟಿಎಫ್‌-1, ಟಿಟಿಎಫ್‌-2, ಟಿಟಿಎಪ್‌-3 ಹಾಗೂ 4 ನಲ್ಲಿ ಕುಡಿಯುವ ನೀರಿಗೆ ಯಾವುದೇ ಅನುದಾನದ ಕೊರತೆಯಿಲ್ಲ. ಆದರು ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದೇ ಇರುವುದನ್ನು ಜಿಪಂ ಕುಡಿಯು ನೀರಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು. ಸ್ವೀಪ್‌ ಯೋಜನೆಯಡಿ ಮತದಾನ ಜಾಗೃತಿಗಾಗಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಹಾಗೂ ಮತಗಟ್ಟೆಗಳಲ್ಲಿ ಪಿಡಬ್ಲೂಡಿ ಓಟರ್ಗಳಿಗೆ ಮತಗಟ್ಟೆಗೆ ಬರಲು ವಾಹನ ವ್ಯವಸ್ಥೆ, ರ್‍ಯಾಂಪ್‌ ವ್ಯವಸ್ಥೆ, ವ್ಹೀಲ್ ಚೇರ್‌ ವ್ಯವಸ್ಥೆ ಸೌಲಭ್ಯಗಳ ಬಗ್ಗೆ ಚರ್ಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ ಖರೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಇಕ್ರಮ, ಬಾಗಲಕೋಟೆ ಉಪವಿಭಾಗಾಧಿಕಾರಿಎಚ್.ಜಯಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.