70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Team Udayavani, Nov 22, 2024, 1:00 PM IST
ಉದಯವಾಣಿ ಸಮಾಚಾರ
ಮುಧೋಳ: ಬಯಲು ಶೌಚಮುಕ್ತ ಪರಿಸರ ನಿರ್ಮಾಣಕ್ಕೆ ಸರ್ಕಾರ ಹಲವಾರು ಕ್ರಮ ಕೈಗೊಂಡಿದ್ದರೂ ಸಹ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶಾಲಾ ಮಕ್ಕಳೆ ಮೂತ್ರ ವಿಸರ್ಜನೆಗೆ ಬಯಲು ಆಶ್ರಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ವೆಂಕಟೇಶ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದೇ ಮೂತ್ರಾಲಯವಿರುವ ಕಾರಣ ಶಾಲಾ ಮಕ್ಕಳು ಬಿಡುವಿನ ಸಮಯದಲ್ಲಿ ಶಾಲಾ ಕಟ್ಟಡದ ಗೋಡೆ ನೆರಳಿಗೆ ತೆರಳಿ ಮುಜುಗರದಿಂದ ಮೂತ್ರ ವಿಸರ್ಜನೆ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ.
70 ವಿದ್ಯಾರ್ಥಿಗಳಿಗೆ ಒಂದೇ ಮೂತ್ರಾಲಯ:
ಒಂದರಿಂದ ಐದನೇ ತರಗತಿವರೆಗೆ ವಿದ್ಯಾಭ್ಯಾಸ ನೀಡುವ ಈ ಶಾಲೆಯಲ್ಲಿ ಒಟ್ಟು 70 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಾರೆ. ಎಲ್ಲ ವಿದ್ಯಾರ್ಥಿಗಳಿಗೂ ಒಂದೇ ಮೂತ್ರಾಲಯವಿರುವ ಕಾರಣ ವಿದ್ಯಾರ್ಥಿಗಳು ಅನಿವಾರ್ಯವಾಗಿ ಬಯಲಲ್ಲೆ ಮೂತ್ರ ವಿಸರ್ಜನೆ ಮಾಡಬೇಕಾಗಿದೆ. ವಿದ್ಯಾರ್ಥಿಗಳಿಗೆ ಬಿಡುವು ನೀಡಿದಾಗ ಶಾಲೆ ಕಟ್ಟಡ ಮರೆಯಲ್ಲಿ, ಗಿಡಗಂಟಿ ಆಶ್ರಯಿಸಿಕೊಂಡು ಹೋಗುವುದು ಸರ್ವೆ ಸಾಮಾನ್ಯವಾಗಿದೆ.
ಇಕ್ಕಟ್ಟಾದ ಸ್ಥಳಾವಕಾಶ: 1997ರಲ್ಲಿ ನಿರ್ಮಾಣ ಗೊಂಡಿರುವ ಶಾಲಾ ಕಟ್ಟಡ ಇಕ್ಕಟ್ಟಿನಿಂದ ಕೂಡಿದೆ. ಶಾಲಾ ವಿದ್ಯಾರ್ಥಿಗಳ ಕೊಠಡಿ ಸಣ್ಣ ಪ್ರಮಾಣದಲ್ಲಿದ್ದು ಕಟ್ಟಡವನ್ನು ಪುನರ್ನಿಮಾಣಕ್ಕೆ ಪತ್ರ ಬರೆದಿರುವುದಾಗಿ ತಿಳಿಸುತ್ತಾರೆ ಇಲ್ಲಿನ ಶಿಕ್ಷಕರು. ನಗರ ಪ್ರದೇಶದಲ್ಲಿರುವ ಶಾಲೆಗೆ ನೂತನ ಕಾಯಕಲ್ಪ ಬೇಕಿದೆ. ಕಟ್ಟಡ ಮರುನಿರ್ಮಾಣ ಮಾಡಿ ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂಬುದು ಪೋಷಕರ ಆಗ್ರಹವಾಗಿದೆ.
ನಗರಕ್ಕೆ ಹೊಂದಿಕೊಂಡಿರುವ ಶಾಲೆ: ಹಳ್ಳಿಗಾಡಿನ ಪ್ರದೇಶದಲ್ಲಿನ ಶಾಲಾ ಕಟ್ಟಡಗಳು ನಿರ್ಲಕ್ಷ್ಯಕ್ಕೆ ಒಳಗಾಗುವುದು ಸರ್ವೆ ಸಾಮಾನ್ಯ. ಆದರೆ, ನಗರಕ್ಕೆ ಹೊಂದಿಕೊಂಡಿರುವ ಶಾಲೆಯಲ್ಲಿ ಹಲವಾರು ದಶಕದಿಂದ ಮೂತ್ರಾಲಯದ ಸಮಸ್ಯೆ ಇದ್ದರೂ ಸಹ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ.
ಕೂಡಲೇ ಮೂತ್ರಾಲಯ ನಿರ್ಮಿಸಲಿ: ಮೂಲಗಳ ಪ್ರಕಾರ ಶಾಲಾ ಕಟ್ಟಡವನ್ನು ಪುನರ್ನಿಮಾಣಕ್ಕೆ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಆದರೆ, ಅದಕ್ಕೆ ಇನ್ನು ಎಷ್ಟು ವರ್ಷಗಳ ಕಾಲಾವಕಾಶ ಹಿಡಿಯುತ್ತದೆ ಎಂಬುದು ದೇವರೆ ಬಲ್ಲ. ಅಲ್ಲಿಯವರೆಗೆ ಮಕ್ಕಳು ಬಯಲಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ತಪ್ಪಿಸಲು ಕೂಡಲೇ ಶಾಲೆಯ ಪಕ್ಕದಲ್ಲಿ ಮೂತ್ರಾಲಯ ನಿರ್ಮಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಸಿದ್ದಲಿಂಗೇಶ್ವರ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂತ್ರಾಲಯದ ಕೊರತೆ ಬಗ್ಗೆ ನನ್ನ ಗಮನಕ್ಕೆ
ಬಂದಿಲ್ಲ. ಶಾಲೆಯಲ್ಲಿನ ಸಮಸ್ಯೆ ಬಗ್ಗೆ ಮಾಹಿತಿ ತರಿಸಿಕೊಂಡು ಮುಂಬರುವ ಕ್ರಿಯಾಯೋಜನೆ ಹಾಕಿಕೊಂಡು ಮೂತ್ರಾಲಯ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಎಸ್.ಎಂ. ಮುಲ್ಲಾ ,
ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಧೋಳ
ವಾರ್ಡ್ ನಂ.5ರಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ದಶಕದಿಂದ ಮೂತ್ರಾಲಯದ ಸಮಸ್ಯೆ ಇದೆ.
ಅಧಿಕಾರಿಗಳು ಶಾಲೆಯಲ್ಲಿ ಮೂತ್ರಾಲಯ ನಿರ್ಮಾಣಕ್ಕೆ ಕೂಡಲೇ ಮುಂದಾಗಿ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು.
ಅಶೋಕ ಎನ್., ಮುಧೋಳ ನಿವಾಸಿ
*ಗೋವಿಂದಪ್ಪ ತಳವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.