ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ: ಕೋಟಿ ಸಹಿ ಸಂಗ್ರಹ
ದೊಡ್ಡ ಸಂಖ್ಯೆ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ
Team Udayavani, May 2, 2022, 5:46 PM IST
ಬಾಗಲಕೋಟೆ: ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಎಐಡಿಎಸ್‌ಒ ಸಂಘಟನೆಯಿಂದ ಜಿಲ್ಲೆಯಾದ್ಯಂತ ಸಹಿ ಸಂಗ್ರಹ ಅಭಿಯಾನದ ಹೋರಾಟ ಆರಂಭಿಸಲಾಗಿದೆ.
ನಗರದಲ್ಲೂ ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಸಹಿ ಸಂಗ್ರಹಕ್ಕೆ ಚಾಲನೆ ನೀಡಿ, ಎಐಡಿಎಸ್‌ಒನ ಜಿಲ್ಲಾ ಸಹ ಸಂಚಾಲಕಿ ಸುರೇಖಾ ಮಾತನಾಡಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.
ಸಾರ್ವಜನಿಕ ಶಿಕ್ಷಣ ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣಗೊಳಿಸುವ ಉದ್ದೇಶದಿಂದಲೇ ಎನ್‌ಇಪಿ ಅನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆರಂಭದಿಂದಲೂ ಈ ಕರಾಳ ನೀತಿಯನ್ನು ನಮ್ಮ ಸಂಘಟನೆ ವಿರೋಧಿ ಸುತ್ತಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ.
ಎನ್‌ಇಪಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷ ಜಾರಿ ಮಾಡಿದೆ. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದ್ದು, ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ. ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದ ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆ ಸೃಷ್ಟಿಸಿದೆ. ದೊಡ್ಡ ಸಂಖ್ಯೆ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ ಎಂದು ಹೇಳಿದರು.
ಎನ್‌ಇಪಿಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆ ನೀಡಿದೆ. ಉದಾಹರಣೆಗೆ ಶಾಲೆಗಳ ವಿಲೀನ’ದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್‌ಇಪಿ ನೀತಿಯಲ್ಲಿದೆ. ಹಲವು ಪ್ರಸ್ತಾವನೆಗಳ ಮೂಲಕ ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಇಂತಹ ಕರಾಳ ನೀತಿಗಳನ್ನು ವಿರೋಧಿಸಿ ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು. ಪ್ರತಿಯೊಬ್ಬರೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಎಐಡಿಎಸ್‌ಒ ಸಂಘಟನೆಯ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರ ಹೇರಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ, ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತಿದೆ. ಅದಕ್ಕೆ ಪೂರಕವಾದ ಪ್ರಸ್ತಾವನೆ ನೀಡಿದೆ. ಉದಾಹರಣೆಗೆ ಶಾಲೆಗಳ ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್‌ಇಪಿ ನೀತಿಯಲ್ಲಿದೆ. ಹಲವು ಪ್ರಸ್ತಾವನೆಗಳ ಮೂಲಕ ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ.
ಸುರೇಖಾ, ಜಿಲ್ಲಾ ಸಹ ಸಂಚಾಲಕಿ, ಎಐಡಿಎಸ್‌ಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.