ಆಸ್ತಿ ತೆರಿಗೆ ಹೆಚ್ಚಳಕ್ಕೆ ವಿರೋಧ
Team Udayavani, May 27, 2020, 1:33 PM IST
ಗುಳೇದಗುಡ್ಡ: ಕೋವಿಡ್ ವೈರಸ್‌ದಿಂದ ಜನರು ಆರ್ಥಿಕವಾಗಿ ತತ್ತರಿಸಿದ್ದಾರೆ. ಆದರೆ, ಪುರಸಭೆ ಅಧಿಕಾರಿಗಳು ಆಸ್ತಿ ತೆರಿಗೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದ್ದಾರೆ.ಮೇಲಧಿಕಾರಿಗಳು ಈ ಆಸ್ತಿ ತೆರಿಗೆ ಹಾಗೂ ನೀರಿನ ಕರ ಪುನರ್ ಪರಿಶೀಲಿಸಬೇಕು ಎಂದು ಹಿರಿಯ ನಾಗರಿಕ ಪ್ರಜಾ ಜಾಗೃತ ವೇದಿಕೆ ಆಗ್ರಹಿಸಿದೆ.
ಪಟ್ಟಣದಲ್ಲಿ ಕೆಲವು ಕಡೆಗಳಲ್ಲಿ ನೀರಿಗೆ ಮೀಟರ್ ಜೋಡಣೆ ಮಾಡಿದ್ದಾರೆ. ಇನ್ನೂ ಕೆಲವು ಭಾಗಗಳಲ್ಲಿ ಮೀಟರ್ ಜೋಡಣೆ ಮಾಡಿಲ್ಲ. ಪುರಸಭೆ ಮೀಟರ್ ಜೋಡಣೆ ಮಾಡಿದವರಿಂದ ಅವರು ನೀರು ಬಳಸಿದ ಪ್ರಮಾಣದ ಮೇಲೆ ಕರ ವಸೂಲಿ ಮಾಡುತ್ತಿದ್ದಾರೆ. ಆದರೆ, ಮೀಟರ್ ಅಳವಡಿಸದ ಭಾಗದಲ್ಲಿ ಅವರು ಎಷ್ಟೇ ನೀರು ಬಳಸಿದರೂ ಅವರಿಗೆ ನಿಗದಿತ ಕರ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಪುರಸಭೆ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬ ತಾರತಮ್ಯ ಮಾಡುತ್ತಿದೆ ಎಂದು ವೇದಿಕೆ ದೂರಿದೆ. ಪುರಸಭೆ ಪಟ್ಟಣದಲ್ಲಿ ಪೂರ್ಣ ಭಾಗವಾಗಿ ನಳದ ಮೀಟರ್ ಜೋಡಣೆ ಆಗುವವರೆಗೂ ಎಲ್ಲರಿಗೂ ಒಂದೇ ದರದಂತೆ ನೀರಿನ ಕರ ವಸೂಲಿ ಮಾಡಬೇಕು. ಪುರಸಭೆ ಆಸ್ತಿ ತೆರಿಗೆಯನ್ನು ಶೇ. 30 ಹೆಚ್ಚಳ ಮಾಡಿದ್ದು, ಇದರಿಂದ ಬಡ ನೇಕಾರರ ಊರಿಗೆ ಹೊರೆಯಾಗಿದೆ. ಮೇಲಧಿ ಕಾರಿಗಳು ಇದನ್ನು ಪುನರ್ ಪರಿಶೀಲಿಸಬೇಕು. ಇಲ್ಲದಿದ್ದರೆ ಸಾರ್ವಜನಿಕರೊಂದಿಗೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಹಿರಿಯ ನಾಗರಿಕ ಪ್ರಜಾಜಾಗೃತ ವೇದಿಕೆ ಅಧ್ಯಕ್ಷ ಯಂಕಣ್ಣ ಮ್ಯಾಗಿನಹಳ್ಳಿ, ನಾಗಪ್ಪ ಸಿದ್ದಮಲ್ಲ, ಗೌರೀಶಪ್ಪ ಭಾವಿ, ಶಿವರುದ್ರಪ್ಪ ಹೆಗಡೆ, ಶಿವಪುತ್ರಪ್ಪ ಹಟ್ಟಿ ಎಚ್ಚರಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.