ಸಂತ್ರಸ್ತರಿಗೆ ಪರಿಹಾರವಿಲ್ಲದ್ದಕ್ಕೆ ಆಕ್ರೋಶ
Team Udayavani, Oct 27, 2019, 11:33 AM IST
ತೇರದಾಳ: ಪ್ರವಾಹದ ಸಂದರ್ಭದಲ್ಲಿ ಮುಳುಗಿಹೋದ ನಮ್ಮ ಬದುಕಿಗೆ ಪರಿಹಾರ ಬಂದಿಲ್ಲ. ಅದರಲ್ಲಿ ತಾರತಮ್ಯವಾಗಿದೆ ಎಂದು ಹಳಿಂಗಳಿ ಗ್ರಾಪಂ ಆವರಣದಲ್ಲಿ ನಡೆದ ಗ್ರಾಮಸಭೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಶೀಘ್ರ ಪರಿಹಾರ ಕೊಡಿಸಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದರು. ಸಭೆಯಲ್ಲಿ ಚರಂಡಿ, ಬೀದಿ ದೀಪ ಸೇರಿದಂತೆ ಅನೇಕ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಇದೆ ಸಂದರ್ಭದಲ್ಲಿ ಗ್ರಾಮದ ಪಶುವೈದ್ಯ ಜಿಡ್ಡಿ, ಸ್ಥಳಿಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಜನರು ಬರುತ್ತಿಲ್ಲ. ಅದರ ಬದಲಾಗಿ ಆರೋಗ್ಯ ಕೇಂದ್ರದ ಆವರಣದಲ್ಲಿ ಗಲೀಜು-ಹೊಲಸು ಮಾಡುವ ಪ್ರವೃತ್ತಿ ಕಂಡುಬರುತ್ತಿದೆ ಎಂಬ ಮಾತುಗಳು ಸಭೆಯಲ್ಲಿ ಕೇಳಿ ಬಂದವು.
ಇದೆ ವಿಷಯಕ್ಕೆ ಸಂಬಂಧಿಸಿದಂತೆ ಎಎನ್‌ಎಂ ಶ್ರೀದೇವಿ ಅವರು ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಗ್ರಾಪಂ ಅಧ್ಯಕ್ಷ ಪರಪ್ಪ ಹಿಪ್ಪರಗಿ ಮಾತನಾಡಿದರು. ಗ್ರಾಮದಲ್ಲಿ ಈಗಾಗಲೇ ರಸ್ತೆ, ಚರಂಡಿ, ನಿಸರ್ಗ ವಿಕೋಪಕ್ಕಾಗಿ ಫಲಾನುಭವಿಗಳ ಪಟ್ಟಿ ಸೇರಿದಂತೆ ಹಲವು ಕಾರ್ಯಗಳು ನಡೆದುಬಂದಿವೆ. ಆದರೂ ಕೆಲವು ಭಾಗಗಳಲ್ಲಿ ಸ್ಥಳಿಯರ ಸಹಕಾರವಿಲ್ಲದೇ ಇರುವುದರಿಂದ ರಸ್ತೆ ಇನ್ನಿತರ ಕಾಮಗಾರಿಗಳು ಸ್ಥಗಿತಗೊಂಡಿವೆ. ಅದಕ್ಕೆ ತಾವೆಲ್ಲರೂ ಸಹಕರಿಸಿದರೇ ಮಾತ್ರ ಅಭಿವೃದ್ಧಿ ಕಾರ್ಯಗಳು ಮುಂದುವರಿಯಲು ಸಾಧ್ಯ ಎಂದರು.
ಜಿಪಂ ಮಾಜಿ ಅಧ್ಯಕ್ಷ ಬಿ.ಎ. ದೇಸಾಯಿ, ಗ್ರಾಪಂ ಅಧ್ಯಕ್ಷ ಪರಪ್ಪ ಹಿಪ್ಪರಗಿ, ಸದಸ್ಯರು, ಪಿಡಿಒ ಎನ್.ಎಸ್. ಪತ್ರಿ, ಜೆ.ಬಿ. ರಂಗಪ್ಪಗೋಳ, ಗಂಗಪ್ಪ ಘೂಳ್ಳನ್ನವರ, ಪಶು, ಕೃಷಿ, ಆರೋಗ್ಯ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇತರರು ದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.