ನಡುಗಡ್ಡೆ ಪ್ರದೇಶ ಕಟ್ಟಡಗಳ ಸ್ವಾಧೀನಕ್ಕೆ ಮಾಲೀಕರ ಒತ್ತಾಯ
Team Udayavani, Aug 25, 2019, 10:17 AM IST
ಬಾಗಲಕೋಟೆ: ನಡುಗಡ್ಡೆ ಪ್ರದೇಶ ಕಟ್ಟಡ ಸ್ವಾಧೀನಪಡಿಸಿಕೊಳ್ಳುವಂತೆ ಒತ್ತಾಯಿಸಿ ಶಾಸಕ ಡಾ| ವೀರಣ್ಣ ಚರಂತಿಮಠರಿಗೆ ಮನವಿ ಸಲ್ಲಿಸಲಾಯಿತು.
ಬಾಗಲಕೋಟೆ: ನಗರದ ವಾರ್ಡ್ ನಂ 1,2,3,4,6 ಹಾಗೂ 9ಗಳು ನಡುಗಡ್ಡೆ ಪ್ರದೇಶವೆಂದು ಘೋಷಿಸಲ್ಪಟ್ಟ 855 ಕಟ್ಟಡಗಳನ್ನು ಕೂಡಲೇ ಸ್ವಾಧೀನ ಪಡಿಸಿಕೊಳ್ಳುವಂತೆ ನಡುಗಡ್ಡೆ ಪ್ರದೇಶದ ಕಟ್ಟಡಗಳ ಮಾಲೀಕರು ಒತ್ತಾಯಿಸಿದ್ದಾರೆ.
ಚರಂತಿಮಠದ ಶ್ರೀ ಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಶಾಸಕ ಡಾ|ವೀರಣ್ಣ ಚರಂತಿಮಠ ಅವರಿಗೆ ಮನವಿ ಸಲ್ಲಿಸಿದರು.
ಆಲಮಟ್ಟಿ ಜಲಾಶಯವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿದಾಗ ನಗರದ ಕಿಲ್ಲಾ ಭಾಗದ ಆರು ವಾರ್ಡಗಳು ನಡುಗಡ್ಡೆ ಪ್ರದೇಶಗಳಾಗಲಿವೆ. ಇಲ್ಲಿನ ಜನರಿಗೆ ಆಗುವ ತೊಂದರೆಗಳ ಕುರಿತು ಶಾಸಕರ ಗಮನಕ್ಕೆ ತಂದರು.
ಈಗಾಗಲೇ ಈ ಪ್ರದೇಶದ ಕಟ್ಟಡಗಳು ಸ್ವಾಧೀನ ಪ್ರಕ್ರಿಯೆ ಬಗ್ಗೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಮುಖ್ಯ ಅಭಿಯಂತರರು ಮೇಲಧಿಕಾರಿಗಳಿಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದ್ದಾರೆ. ಆದ್ದರಿಂದ ಸ್ವಾಧೀನ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಬೇಕು ಎಂದು ಆಗ್ರಹಿಸಿದರು.
513-100ಮೀ ಕೌಂಟರಿನಲ್ಲಿ ಬರುವ ಬಾಡಿಗೆದಾರರಿಗೆ ಈವರೆಗೆ ನಿವೇಶನ ಹಂಚಿಕೆ ಮಾಡಿಲ್ಲ. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಬಾಡಿಗೆದಾರರು ಬಹುವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ದು, ನಿವೇಶನ ಹಂಚಿಕೆ ಮಾಡಲು ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಶಾಸಕ ಡಾ| ವೀರಣ್ಣ ಚರಂತಿಮಠ ಶೀಘ್ರವೇ ಈ ಕಾರ್ಯಕ್ಕೆ ಸೂಚನೆ ನೀಡಲಾಗುತ್ತದೆ. ಆರು ನಡುಗಡ್ಡೆ ಪ್ರದೇಶಗಳ 855 ಕಟ್ಟಡಗಳು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಈ ಕಾರ್ಯಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಪ್ರಮುಖರಾದ ಎ.ಎ. ದಂಡಿಯಾ, ಈಶ್ವರ ಸುಗಂಧಿ, ಅರವಿಂದ ಮುಚಖಂಡಿ, ದೀಪಕ ಹಂಚಾಟೆ, ನಿವೃತ್ತ ಶಿಕ್ಷಕ ವಿ.ಕೆ. ಕಾವೇರಿ, ಜಿ.ಎಂ. ಟಂಕಸಾಲಿ, ಈರಣ್ಣ ನಾವಲಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.