ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ಹರಿಸಿ
ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 808ನೇ ಸ್ಥಾನ ಪಡೆದುಕೊಂಡಿದ್ದರು.
Team Udayavani, Nov 22, 2021, 2:35 PM IST
ರಬಕವಿ-ಬನಹಟ್ಟಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಹೆಚ್ಚು ಗಮನ ನೀಡಬೇಕು. ಸತತ ಅಧ್ಯಯನ, ದೃಢ ಸಂಕಲ್ಪಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಹೆಚ್ಚಿಸುತ್ತವೆ ಎಂದು ಬೆಂಗಳೂರಿನ ಕಸ್ಟಮ್ ವಿಭಾಗದ ಡೆಪ್ಯೂಟಿ ಕಮೀಶನರ್ ಆಗಿ ಪದೋನ್ನತಿ ಹೊಂದಿದ ಸ್ಥಳೀಯ ಡಾ| ಕಿಶೋರ ಭಟ್ಟಡ ಹೇಳಿದರು.
ಸ್ಥಳೀಯ ಗೆಳೆಯರ ಬಳಗದವರು ಪದೋನ್ನತಿ ಹೊಂದಿದ ನಿಮಿತ್ತ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಯಲ್ಲಟ್ಟಿಯ ಕೊಣ್ಣೂರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ| ಬಸವರಾಜ ಕೊಣ್ಣೂರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಅವರಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಡಾ| ಕಿಶೋರ ಭಟ್ಟಡ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 808ನೇ ಸ್ಥಾನ ಪಡೆದುಕೊಂಡಿದ್ದರು.
ಪಿಯುಸಿ ದ್ವಿತೀಯ ವರ್ಷದ ಸಿಇಟಿ ಪರೀಕ್ಷೆಯಲ್ಲೂ ಕೂಡಾ ರಾಜ್ಯಕ್ಕೆ 6ನೇ ಸ್ಥಾನ ಪಡೆದುಕೊಂಡು ವಿಶೇಷ ಸಾಧನೆ ಮಾಡಿದ್ದರು. ಅವರು ಈ ಭಾಗದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮುಂಬೈಯ ಠಾಣೆಯ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾ ಧೀಶ ಅಭಯ ಮಂತ್ರಿ, ಪ್ರಕಾಶ ಹೋಳಗಿ, ವಿನಾಯಕ ತಾಂಬಟ, ಕಿರಣ ಆಳಗಿ, ಡಾ| ಸಾಗರ, ವಿಶ್ವಜ ಕಾಡದೇವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.