ಬೆಳೆ ವಿಮೆ ಕಂತು ಪಾವತಿಸಿ: ಡಿಸಿ ರಾಮಚಂದ್ರನ್
•ತೋಟಗಾರಿಕೆ ಬೆಳೆ ಬೆಳೆವಿಮೆಗೆ ಒಳಪಡಿಸಿ•ವಿಮೆ ಕಂತು ಪಾವತಿಸಲು 30 ಕೊನೆ ದಿನ•ಯೋಜನೆ ಸದುಪಯೋಗಕ್ಕೆ ಸಲಹೆ
Team Udayavani, Jun 21, 2019, 8:04 AM IST
ಬಾಗಲಕೋಟೆ: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ತೋಟಗಾರಿಕೆ ಬೆಳೆ ವಿಮಾ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದ್ದು, ವಿಮೆ ಕಂತು ಪಾವತಿಸಲು ಜೂ.30 ಕೊನೆಯ ದಿನವಾಗಿದೆ. ರೈತರು ತಪ್ಪದೇ ವಿಮೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹೇಳಿದರು.
ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನ ಕುರಿತು ಹಾಗೂ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ಟರ್ಮ್ಶೀಟ್‌ಗಳ ಅನುಮೋದನೆಗಾಗಿ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸತತವಾಗಿ ಬರಗಾಲ, ಅತಿವೃಷ್ಟಿ, ಅನಾವೃಷ್ಟಿ ಆವರಿಸುತ್ತಿದೆ. ರೈತರು ತೋಟಗಾರಿಕೆ ಬೆಳೆಗೆ ಬೆಳೆ ವಿಮೆಗೆ ಒಳಪಡಿಸುವಂತೆ ಮಾಡಬೇಕು. ರೈತರು ಪ್ರತಿಯೊಂದು ಬೆಳೆಯ ವಿಮಾ ಸರಿಯಾಗಿ ಭರಿಸಬೇಕು. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ತೋಟಗಾರಿಕೆ ಉಪ ನಿರ್ದೇಶಕ ಪ್ರಭುರಾಜ ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ದಾಳಿಂಬೆ ಬೆಳೆಗೆ 128 ಅಧಿಸೂಚಿತ ಗ್ರಾಮ ಪಂಚಾಯತಿಗಳಿದ್ದು, ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ.1,27,000 ಇದೆ. ಪ್ರತಿ ಹೆಕ್ಟೇರ್‌ಗೆ 6,350 ರೂ. ವಿಮಾ ಕಂತು ಪಾವತಿಸಬೇಕು ಎಂದು ಹೇಳಿದರು.
ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಈರುಳ್ಳಿ (ನೀರಾವರಿ, ಮಳೆ ಆಶ್ರಿತ), ಕೆಂಪು ಮೆಣಸಿನಕಾಯಿ (ನಿರಾವರಿ, ಮಳೆ ಆಶ್ರಿತ) ಹಾಗೂ ಅರಿಷಿಣ ವಿಮೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಈರುಳ್ಳಿ ಬೆಳೆಗೆ ವಿಮೆ ಕಂತು ಪಾವತಿಸುವ ಕೊನೆಯ ದಿನ ಆಗಸ್ಟ್ 14. ಕೆಂಪು ಮೆಣಸಿನಕಾಯಿ (ನೀರಾವರಿ) ಜುಲೈ31, ಕೆಂಪು ಮೆಣಸಿನಕಾಯಿ (ಮಳೆ ಆಶ್ರಿತ) ಆ. 14 ಹಾಗೂ ಅರಿಷಿಣ ಬೆಳೆಗೆ ಜುಲೈ 31 ಕೊನೆಯ ದಿನವಾಗಿದೆ ಎಂದು ತಿಳಿಸಿದರು.
ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಕಂತಿನ ಮೊತ್ತ ಒಂದೇ ಆಗಿದೆ. ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯ ಅನುಷ್ಠಾನಕ್ಕಾಗಿ ರೈತರು ಪಹಣಿ, ಆಧಾರ, ಬ್ಯಾಂಕ್ ಪಾಸ್‌ಬುಕ್ ನಕಲು ಪ್ರತಿ, ಸ್ವಯಂ ಘೋಷಿತ ಬೆಳೆ ವಿವರ ಹತ್ತಿರದ ಬ್ಯಾಂಕ್‌ಗಳಲ್ಲಿ ನೀಡಿ ಆನ್‌ಲೈನ್ ಮೂಲಕ ನೋಂದಾಯಿ ಸಿಕೊಳ್ಳಬಹುದಾಗಿದೆ ಎಂದರು.
ಜಿಲ್ಲೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮಾ ಯೋಜನೆಗೆ ಓರಿಯೆಂಟಲ್ ಇನ್ಸೂರನ್ಸ್ ಕಂಪನಿ ಹಾಗೂ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಗೆ ಫ್ಯೂಚರ್ ಜೆನೆರಾಲಿ ಇಂಡಿಯಾ ಇನ್ಸೂರನ್ಸ್ ಕಂಪನಿ ಅಧಿಸೂಚಿತ ವಿಮಾ ಕಂಪನಿಗಳಾಗಿವೆ ಎಂದು ತಿಳಿಸಿದರು.
ಸಭೆಯಲ್ಲಿ ತೋಟಗಾರಿಕಾ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿರ್ವಹಣೆಯೇ ಇಲ್ಲದ ಬಸ್ ನಿಲ್ದಾಣ! ರಾತ್ರಿ ವೇಳೆ ಬಸ್‌ಗಳ ಓಡಾಟ ತೀರಾ ಕಡಿಮೆ
Rabakavi-Banahatti: ಯಲ್ಲಟ್ಟಿ ಬಳಿ ಸಿಎನ್‌ಜಿ ಟ್ಯಾಂಕರ್ ಪಲ್ಟಿ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUST WATCH
ಹೊಸ ಸೇರ್ಪಡೆ
Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
Ranji Trophy: ಭಾರತ ಕ್ರಿಕೆಟ್ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?
Bigg Boss: ಟಾಸ್ಕ್ ಮೂಲಕ ನಡೆಯಿತು ಮಿಡ್ ವೀಕ್ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್
Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ
Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.