ಕೋವಿಡ್ : 619 ಜನರ ವರದಿ ನೆಗೆಟಿವ್-1033 ಬಾಕಿ
Team Udayavani, May 30, 2020, 9:58 AM IST
ಬಾಗಲಕೋಟೆ: ಜಿಲ್ಲೆಯಿಂದ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದ್ದ ಒಟ್ಟು 1225 ಸ್ಯಾಂಪಲ್‌ಗಳ ಪೈಕಿ 619 ಸ್ಯಾಂಪಲ್‌ಗಳ ವರದಿ ನೆಗೆಟಿವ್ ಬಂದಿದ್ದು, ಶುಕ್ರವಾರ ಕಳುಹಿಸಿದ 333 ಸ್ಯಾಂಪಲ್ ಸಹಿತ ಒಟ್ಟು 1033 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಿಂದ ಮತ್ತೆ ಹೊಸದಾಗಿ 333 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಮೇ 23ರಂದು ಕಳುಹಿಸಲಾದ ಸ್ಯಾಂಪಲ್‌ಗಳಲ್ಲಿ 16, 25 ರಂದು ಕಳುಹಿಸಲಾದ ಸ್ಯಾಂಪಲ್ ಗಳ ಪೈಕಿ 45 ಸ್ಯಾಂಪಲ್‌ಗಳ ವರದಿ ಬಾಕಿ ಇವೆ. ಅಲ್ಲದೆ ಮೇ 24 ರಂದು ಕಳುಹಿಸಲಾದ ಒಟ್ಟು 613 ಸ್ಯಾಂಪಲ್ ಗಳ ವರದಿ ಇನ್ನು ಬಂದಿಲ್ಲ. ಒಟ್ಟು 1033 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಈ ವರೆಗೆ 169 ಸ್ಯಾಂಪಲ್ ಪರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತ್ಯೇಕವಾಗಿ 1899 ಜನರ ಮೇಲೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 7,629 ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 6,484 ನೆಗೆಟಿವ್ ಪ್ರಕರಣ, 77 ಪಾಸಿಟಿವ್ ಬಂದಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 63 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 13 ಜನ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಇನ್ನು 5 ಕಂಟೇನ್ಮೆಂಟ್ ಝೋನ್‌ಗಳಿವೆ. ಇಲ್ಲಿಯವರೆಗೆ ಒಟ್ಟು 13ಸ್ಯಾಂಪಲ್‌ಗಳು ರಿಜೆಕ್ಟ್ ಆಗಿವೆ. 14 ದಿನಗಳವರೆಗೆ ಇನ್‌ಸ್ಟಿಟ್ಯೂಶನ್ ಕ್ವಾರಂಟೈನ್‌ನಲ್ಲಿದ್ದ 1151 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ಥಾಪಿಸಲಾದ 9 ಚೆಕ್‌ಪೋಸ್ಟ್‌ಗಳ ಪೈಕಿ ಸದ್ಯ 3 ಚೆಕ್ ಪೋಸ್ಟ್ ಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿಯವರೆಗೆ ಚೆಕ್‌ಪೋಸ್ಟ್‌ಗಳ ಮೂಲಕ 54908 ವಾಹನಗಳ ತಪಾಸಣೆ ಹಾಗೂ 2,12,113 ಜನರನ್ನು ಥರ್ಮಲ್ ಸ್ಕ್ರೀನಿಂಗ್ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.