ಸಾಮಾಜಿಕ ಅಂತರ ಪಾಲಿಸದ ಜನತೆ
Team Udayavani, Jul 24, 2020, 9:18 AM IST
ಬನಹಟ್ಟಿ: ಇಲ್ಲಿಯ ಮಾರುಕಟ್ಟೆಯು ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲದೆ ಜನತೆ ನಿರ್ಲಕ್ಷ್ಯದಿಂದ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು ದಿಢೀರ್‌ನೇ ಆಗಮಿಸಿ ಗುಂಪು ಗುಂಪಾಗಿದ್ದ ಜನರು ಹಾಗೂ ವ್ಯಾಪಾರಸ್ಥರನ್ನು ಚದುರಿಸುವಲ್ಲಿ ಯಶಸ್ವಿಯಾದರು.
ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ, ರಬಕವಿ, ಬನಹಟ್ಟಿ, ಹಿಪ್ಪರಗಿ, ಚಿಮ್ಮಡ ಗ್ರಾಮಗಳು ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ಸಮುದಾಯದತ್ತ ಹರಡುವ ಭೀತಿ ಭಯಂಕರವಾಗಿದೆ. ಕಳೆದೆರೆಡು ದಿನಗಳಿಂದ ಯಾವುದೇ ಶಂಕೆಯಿಲ್ಲದೆ ವ್ಯಕ್ತಿಗಳಿಗೆ ಸೋಂಕು ತಗುಲುತ್ತಿದ್ದರೆ, ಕೆಲ ಸಾರಿ ಹಾಗೂ ಐಎಲ್‌ಐ ಕೇಸ್‌ಗಳಿಂದ ಆಸ್ಪತ್ರೆಗಳಿಗೆ ತೆರಳಿದ ನಂತರ ರ್ಯಾಪಿಡ್ ಪರೀಕ್ಷೆಯ ನಂತರ ರೋಗಿಗಳಲ್ಲಿ ಕೋವಿಡ್ ಇರುವುದು ಪತ್ತೆಯಾಗುತ್ತಿದೆ. ಇದರಿಂದ ಆಸ್ಪತ್ರೆಗಳಲ್ಲಿನ ಸಿಬ್ಬಂದಿಗೂ ಸೋಂಕು ತಗುಲಿದ ಉದಾಹರಣೆಗಳು ತಾಲೂಕಿನಲ್ಲಿ ನಡೆದಿವೆ.
ತೇರದಾಳ, ರಬಕವಿ ಹಾಗೂ ಬನಹಟ್ಟಿ ಪಟ್ಟಣದ ಮಧ್ಯ ಭಾಗಗಳಲ್ಲಿಯೇ ಕಂಟೇನ್ಮೆಂಟ್ ವಲಯಗಳಾಗಿದ್ದು, ಜನತೆ ತೀವ್ರ ಎಚ್ಚರದಿಂದ ಮಾಸ್ಕ್ ಹಾಗೂ ಸಾಮಾಜಿಕ ಅಂತರದಿಂದ ಕಾರ್ಯ ನಿರ್ವಹಣೆ ಮಾಡಬೇಕಿದೆ. ಕೆಲ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದ್ದರೂ, ಇವರನ್ನು ಬಿಟ್ಟು ಸಮುದಾಯದತ್ತ ಸೋಂಕು ಪಸರಿಸುತ್ತಿರುವುದು ಆತಂಕ ಮೂಡಿಸಿದೆ.
ಅರ್ಧ ಲಾಕ್‌ಡೌನ್: ಈಗಾಗಲೇ ತಾಲೂಕಿನಾದ್ಯಂತ ಅರ್ಧ ಲಾಕ್‌ಡೌನ್ ಮುಂದುವರಿದಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಸಂಪೂರ್ಣ ಲಾಕ್‌ಡೌನ್ ಅನಿವಾರ್ಯವಾಗಿದೆ. ಸಂತೆ ತಂದ ಆತಂಕ: ಬನಹಟ್ಟಿಯಲ್ಲಿ ಬೆಳಗ್ಗೆಯಿಂದ ನಡೆಯುವ ಸಂತೆಯಲ್ಲಿ ಯಾರೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನಜಂಗುಳಿಯಿಂದ ಸೇರುತ್ತಿರುವುದು ಕೋವಿಡ್ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಸಂತೆಗೆ ಬರುವ ಜನತೆಗೆ ಅಧಿಕಾರಿಗಳು ಮನವಿ ಮಾಡಿದರೂ ಸಹಿತ ಸಂಬಂಧವೇ ಇಲ್ಲದಂತೆ ಕಾರ್ಯನಿರ್ವಹಿಸುತ್ತಿರುವುದು ಬೇಸರದ ಸಂಗತಿ. ತಹಶೀಲ್ದಾರ್ ಪ್ರಶಾಂತ ಚನಗೊಂಡ, ಪೌರಾಯುಕ್ತ ಶ್ರೀನಿವಾಸ ಜಾಧವ, ಸಿಪಿಐ ಕರುಣೇಶಗೌಡ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.