ನಿಯಮ ಗಾಳಿಗೆ ತೂರಿ ಕೋವಿಡ್ ಲಸಿಕೆಗೆ ಮುಗಿಬಿದ್ದ ಜನ
Team Udayavani, Aug 3, 2021, 6:15 PM IST
ಲೋಕಾಪುರ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದುಕೊಳ್ಳಲು ನಿಯಮ ಮೀರಿ ಮುಗಿಬಿದ್ದ ಪರಿಣಾಮ ಕೆಲ ಕಾಲ ಗೊಂದಲ ಸೃಷ್ಟಿಯಾಗಿತ್ತು.
ಸೋಮವಾರ ಬೆಳಗ್ಗೆಯಿಂದ ನೂರಾರು ಜನ ಜಮಾಯಿಸಿದ್ದರು. ಲಸಿಕೆಗಾಗಿ ಸಾಮಾಜಿಕ ಅಂತರವಿಲ್ಲದೆ ಗುಂಪು- ಗುಂಪಾಗಿ ಸೇರಿದ್ದರು. ಕೊರೊನಾ ಮೂರನೇ ಅಲೆ ಹಿನ್ನೆಯಲ್ಲಿ ಲಸಿಕೆ ಪಡೆದುಕೊಳ್ಳಲು ಹೆಚ್ಚಿನ ಜನರು ಬರುತ್ತಿದ್ದಾರೆ. ಮೂರನೇ ಅಲೆಯ ಕೊರೊನಾ ಸೋಂಕು ತಡೆಗಟ್ಟಲು ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕಿದೆ.
ಮೊದಲು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹೋಗುತ್ತಿದ್ದ ಜನರಲ್ಲಿ ಲಸಿಕೆಯ ಬಗ್ಗೆ ಜಾಗೃತಿ ಮೂಡಿದೆ. ಈ ಹಿನ್ನೆಲೆಯಲ್ಲಿ ಜನರು ಲಸಿಕೆ ಹಾಕಿಸಿಕೊಳ್ಳಲು ಬರುತ್ತಿದ್ದಾರೆ. ಇಂದು ಆರಂಭವಾಗಿರುವ ಲಸಿಕಾ ಅಭಿಯಾನ ನಿರಂತರವಾಗಿ ನಡೆಯಲಿದೆ ಎಂದು ಡಾ|ಕವಿತಾ ಬೂದಿಹಾಳ ಹೇಳಿದರು. ರೋಗಿಗಳಿಗೆ ಯಾವುದೇ ಅಡ್ಡ ಪರಿಣಾಮಗಳಿದ್ದರೆ ಪ್ಯಾರಾಸಿಟಮಲ್ ಮಾತ್ರೆ ತೆಗೆದುಕೊಳ್ಳುವಂತೆ ಹೇಳುತ್ತೇವೆ.
ಲಸಿಕೆ ತೆಗೆದುಕೊಳ್ಳಲು ಜನ ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆ ಯಾಗಿದೆ ಎಂದು ಡಾ| ವಿನಯ ಕುಲಕರ್ಣಿ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ತಕ್ಷಣ ಜನರ ನಿಯಂತ್ರಣಕ್ಕೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದರು. ನಂತರ ಜನರು ಲಸಿಕೆ ಪಡೆಯಲು ಸರತಿ ಸಾಲುಗಳಲ್ಲಿ ನಿಂತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.