ತೋಟಗಾರಿಕೆ ವಿವಿಗೆ ಕಾಯಂ ಕುಲಪತಿ ನೇಮಿಸಲು ಆಗ್ರಹ
Team Udayavani, Nov 24, 2019, 11:37 AM IST
ಬಾಗಲಕೋಟೆ: ರಾಜ್ಯದ 23 ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಬಾಗಲಕೋಟೆಯ ತೋಟಗಾರಿಕೆ ವಿವಿಗೆ ಒಂದು ವರ್ಷ ಕಳೆದರೂ ಕಾಯಂ ಕುಲಪತಿ ನೇಮಕ ಮಾಡಿಲ್ಲ. ಪ್ರಭಾರಿ ಕುಲಪತಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡು
ಉಪನ್ಯಾಸಕರ ವರ್ಗಾವಣೆ, ವಿವಿಧ ಕಟ್ಟಡ ಕಾಮಗಾರಿ ನಡೆಸುತ್ತಿದ್ದಾರೆ. ಸರ್ಕಾರ, ವಿವಿಗೆ ಕಾಯಂ ಕುಲಪತಿ ನೇಮಕ ಮಾಡಬೇಕು ಎಂದು ಸತ್ಯಶೋಧಕ ಸಂಘದ ಅಧ್ಯಕ್ಷ ಪರಶುರಾಮ ಮಹಾರಾಜನವರ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೋಟಗಾರಿಕೆ ವಿವಿಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಸರ್ಕಾರ ಕೂಡಲೇ ಭರ್ತಿ ಮಾಡಬೇಕು. ಕಳೆದ ಒಂದು ವರ್ಷಕ್ಕೂ ಮೇಲ್ಪಟ್ಟು ಪ್ರಭಾರಿ ಕುಲಪತಿಗಳ ಆಡಳಿತದಲ್ಲೇ ವಿವಿ ನಡೆಯುತ್ತಿದ್ದು, ಕಾಯಂ ಕುಲಪತಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಪ್ರಭಾರಿ ಕುಲಪತಿಗಳಿಂದ ವಿವಿಯ ಆಡಳಿತ ಯಂತ್ರ ಸರಿಯಾಗಿ ನಡೆಯುತ್ತಿಲ್ಲ. ವ್ಯವಸ್ಥಾಪನ ಮಂಡಳಿ ಅನುಮೋದನೆ ಇಲ್ಲದೇ ತಮಗೆ ಬೇಕಾದವರನ್ನು ವರ್ಗಾವಣೆ ಮಾಡುತ್ತಿದ್ದಾರೆ. ಕ್ರಿಯಾ ಯೋಜನೆ ಇಲ್ಲದೇ ವಿವಿಧ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಆದರೂ, ವಿವಿಯ ಬೋಧಕ ಸಿಬ್ಬಂದಿಗೆ ಬಡ್ತಿ ನೀಡಿಲ್ಲ. ಇದಕ್ಕೆ ವ್ಯವಸ್ಥಾಪನ ಮಂಡಳಿ ಪರವಾನಗಿ ಅನುಮೋದನೆ ಕೊಟ್ಟಿಲ್ಲ ಎಂದು ಕುಲಪತಿ ಹೇಳುತ್ತಿದ್ದಾರೆ. ಹಾಗಾದರೆ, ವ್ಯವಸ್ಥಾಪನ ಮಂಡಳಿ ಅನುಮೋದನೆ ಕಾಮಗಾರಿ ಹೇಗೆ ಕೈಗೊಳ್ಳಲಾಯಿತು ಎಂದು ಪ್ರಶ್ನಿಸಿದರು.
ವಿವಿಯಲ್ಲಿ ಕಳೆದ 10 ವರ್ಷಗಳಿಂದ ದಿನಗೂಲಿ ಕೆಲಸ ಮಾಡುತ್ತಿರುವ ಡಿ ದರ್ಜೆ ನೌಕರರನ್ನು ಕಾಯಂ ಮಾಡಿಲ್ಲ. ವಿವಿಯ ಆವರಣದಲ್ಲಿ ದ್ರಾಕ್ಷಿ ಸಂಸ್ಕೃರಣ ಘಟಕ ಸ್ಥಾಪಿಸಿದ್ದರೂ ಅದನ್ನು ಆರಂಭಿಸಿಲ್ಲ. ಅಲ್ಲಿರುವ ಯಂತ್ರಗಳು, ಧೂಳು ತಿಂದು ಹಾಳಾಗುತ್ತಿವೆ. ಈ ಸಂಸ್ಕೃರಣ ಘಟಕ ಆರಂಭಿಸಿದರೆ ಹಲವರಿಗೆ ಉದ್ಯೋಗ ದೊರೆಯಲಿದೆ. ಆದರೂ, ಪ್ರಭಾರಿ ಕುಲಪತಿಗಳು ಈ ಕುರಿತು ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರಾದ ಸದಾಶಿವ ಕೊಟಬಾಗಿ, ಮಂಜು ಚಲವಾದಿ, ವಿವೇಕಾನಂದ ಚಂದರಗಿ, ಶ್ರೀಧರ ನೀಲನಾಯಕ, ಅರುಣ್ ಗರಸಂಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.