ಫುಲೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು:ಶಾಂತಲಿಂಗ ಶ್ರೀ
Team Udayavani, Jan 8, 2024, 3:50 PM IST
ಉದಯವಾಣಿ ಸಮಾಚಾರ
ಕುಳಗೇರಿ ಕ್ರಾಸ್: ದಮನಿತ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು ತೆರೆದು ಕ್ರಾಂತಿಕಾರಿ ಚಳವಳಿ ಮಾಡಿದ ಭಾರತದ ಆಧುನಿಕ ಶಿಕ್ಷಣದ ಮೊದಲ ಅಕ್ಷರದಾತೆ ಸಾವಿತ್ರಿಬಾಯಿ ಫುಲೆ. ಆಗಿನ ಕಾಲದಲ್ಲಿಯೇ ರಾತ್ರಿ ಶಾಲೆಗಳನ್ನು ಆರಂಭಿಸಿ ಸಮಾನ ಶಿಕ್ಷಣದ ಕಲ್ಪನೆ ಕೊಟ್ಟ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು ಎಂದು ಶಾಂತಲಿಂಗ ಶ್ರೀ ಹೇಳಿದರು.
ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಶ್ರೀ ದೊರೆಸ್ವಾಮಿ ವಿವಿಧೋದ್ದೇಶ ಟ್ರಸ್ಟ್ ಹಾಗೂ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಸ್ತ್ರೀಯರು ಕೂಡಾ ಪುರುಷರಂತೆ ಶಿಕ್ಷಣ ಪಡೆಯಬೇಕೆಂದು 12 ನೇ ಶತಮಾನದ ಬಸವಾದಿ ಶಿವಶರಣರ ಕನಸನ್ನು ನನಸಾಗಿಸಲು
ಹೆಣ್ಣು ಮಕ್ಕಳಿಗಾಗಿಯೇ ವಿಶೇಷ ಶಾಲೆ, ಶಿಶು ಕೇಂದ್ರ ಸ್ಥಾಪಿಸಿ ಆ ಮೂಲಕ ಮಹಿಳೆಯರ ಮತ್ತು ಮಕ್ಕಳ ಬದುಕಿಗೆ ಭದ್ರವಾದ
ನೆಲೆಕೊಟ್ಟ ದಿಟ್ಟ ಸಾಮಾಜಿಕ ಹೋರಾಟಗಾರ್ತಿ ಫುಲೆಯವರು. ವಿವಾಹ ಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗೂ ಸಹಿತ ಅವರ ಶಿಕ್ಷಣಕ್ಕೆ ರಹದಾರಿಯನ್ನು ಕಲ್ಪಿಸಿದ ಶಿಕ್ಷಣ ಮಾತೆ ಎಂದು ಬಣ್ಣಿಸಿದರು.
ಸ್ನೇಹಜೀವಿ ವಿದ್ಯಾಲಯದ ಮುಖ್ಯಶಿಕ್ಷಕಿ ಮಾಲಾ ಪಾಟೀಲ ಮಾತನಾಡಿ, ಸತ್ಯಶೋಧಕ ಸಮಾಜದ ಅಧ್ಯಕ್ಷೆಯಾಗಿ 19ನೇ ಶತಮಾನದಲ್ಲಿ ಬಾಲ್ಯವಿವಾಹ, ಸತಿಸಹಗಮನ ಪದ್ಧತಿಯಂತ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ವೀರ
ಮಹಿಳೆ ಸಾವಿತ್ರಿಬಾಯಿ ಫುಲೆಯವರು. ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನುಗ್ಗುತ್ತಿರುವುದಕ್ಕೆ ಸಾವಿತ್ರಿಬಾಯಿ
ಹೋರಾಟ ಮುಖ್ಯವಾಗಿದೆ. ಪ್ರತಿಯೊಬ್ಬ ಮಹಿಳೆಯರು ಅಕ್ಷರದಾತೆಯನ್ನು ನೆನೆಯಬೇಕು ಅದು ಎಲ್ಲರ ಆದ್ಯ ಕರ್ತವ್ಯ ಎಂದು ಅವರು ಹೇಳಿದರು.
ಸಾವಿತ್ರಿಬಾಯಿ ಫುಲೆಯವರ ಇತಿಹಾಸವನ್ನು ಪ್ರತಿಯೊಬ್ಬರು ಅರಿಯಬೇಕಿದೆ. ಶಿಕ್ಷಕ ಸಮುದಾಯಕ್ಕೆ ಅವರ ಚಿಂತನೆಗಳು,
ವಿಚಾರಧಾರೆಗಳು ಪ್ರೇರಣೆ. ಅವರಂತೆಯೇ ಎಲ್ಲರೂ ಅನ್ಯಾಯದ ವಿರುದ್ಧ ಪ್ರತಿಭಟಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು.
ಫುಲೆಯವರ ಜಯಂತಿಯನ್ನು ಶಿಕ್ಷಕಿಯರ ದಿನವನ್ನಾಗಿ ಆಚರಿಸಲು ಸರಕಾರ ಘೋಷಣೆ ಮಾಡಬೇಕೆಂದು ಬೈರನಹಟ್ಟಿ ಪೂಜ್ಯ
ಶಾಂತಲಿಂಗ ಶ್ರೀ ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯಶಿಕ್ಷಕ ಸಲ್ಮಾ ಎ.ಎಸ್. ಹಾಗೂ ಮಾಲಾ ಪಾಟೀಲ ಅವರನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಾದ ಶರಣಮ್ಮ ತೆಗ್ಗಿನಮನಿ, ರೇಣುಕಾ ಹುಜರತ್ತಿ, ಮೋಹನಕೃಷ್ಣ, ರೇಣಕ್ಕ ನರಸಾಪುರ ಪ್ರಮುಖರು ಉಪಸ್ಥಿತರಿದ್ದರು.ಮಹಾಂತೇಶ ಹಿರೇಮಠ ನಿರೂಪಿಸಿ-ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.