Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು
Team Udayavani, Jun 13, 2024, 8:19 PM IST
ಮುದ್ದೇಬಿಹಾಳ: ಮತಕ್ಷೇತ್ರದ ಅಭಿವೃದ್ಧಿ ಸೇರಿ ರಾಜ್ಯದ ಎಲ್ಲ ಹಿಂದುಳಿದ ಪ್ರದೇಶಗಳಿಗೆ ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಸಿಗುತ್ತಿಲ್ಲ. ಎಲ್ಲ ಹಿಂದುಳಿದ ಪ್ರದೇಶಗಳಿಗೆ ಸಮಾನವಾಗಿ, ಸಮತೋಲನ ಮಾಡಿ ಅಭಿವೃದ್ಧಿಗೆ ಮುಂದಾಗದಿದ್ದರೆ ನನಗೆ ರಾಜಕೀಯ ಮಾಡುವ ಇಚ್ಛೆ ಇಲ್ಲ. ರಾಜಕೀಯ ತ್ಯಾಗಕ್ಕೂ ನಾನು ಸಿದ್ದನಾಗಿದ್ದೇನೆ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಕೆಬಿಜೆಎನ್ನೆಲ್ ಅಧಿಕಾರಿಗಳ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕೀಯ ತ್ಯಾಗದ ಕುರಿತು ಬಿಚ್ಚು ಮನಸ್ಸಿನಿಂದ ಹೇಳುತ್ತಿದ್ದೇನೆ. ಸರ್ಕಾರ ಸ್ಪಂದಿಸಬೇಕು ಅನ್ನೋದು ನನ್ನ ಅಭಿಲಾಷೆ. ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಹಮ್ಮಿಕೊಂಡ ಕಾರ್ಯಕ್ರಮಗಳನ್ನು ಜಾರಿಗೂಳಿಸಬೇಕು ಅನ್ನೋದು ನನ್ನ ಬೇಡಿಕೆ. ಒಂದು ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ಕೊಟ್ಟು ಭಾರಿ ಕೆಲಸ ಮಾಡಿದ್ದಾರೆಂದು ಮತ್ತು ಬೇರೆಯವರಿಗೆ ಕೇಳಿದಷ್ಟು ಅನುದಾನ ನೀಡದೆ ಮತಕ್ಷೇತ್ರದ ಜನರು ಅಭಿವೃದ್ಧಿ ವಂಚಿತರಾಗಿದ್ದಾರೆ ಎನ್ನಿಸಿಕೊಳ್ಳುವ ರಾಜಕೀಯ ನನಗೆ ಬೇಡ ಎನ್ನುವ ಸಂದೇಶವನ್ನು ಸರ್ಕಾರಕ್ಕೆ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಇಬ್ಬರಿಗೂ ಆಪ್ತರಾಗಿದ್ದು, ಅವರ ಆಪ್ತ ವಲಯದಲ್ಲಿ ಗುರುತಿ ಸಿಕೊಂಡಿರುವ ನಾಡಗೌಡರ ಈ ಹೇಳಿಕೆ ಭಾರೀ ಸಂಚಲನ ಮೂಡಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.