ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧ
•ಕೃಷ್ಣಾ ನದಿಗೆ 1.17 ಲಕ್ಷ ಕ್ಯೂಸೆಕ್ ಒಳಹರಿವು•ಘಟಪ್ರಭಾ ನದಿಗೂ ಹೆಚ್ಚಿದ ನೀರಿನ ಒತ್ತಡ
Team Udayavani, Jul 31, 2019, 11:27 AM IST
ಬಾಗಲಕೋಟೆ: ನಗರದಲ್ಲಿ ಪ್ರವಾಹ ನಿಯಂತ್ರಣ ಕುರಿತು ಜರುಗಿದ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ಜಿಲ್ಲೆಯಲ್ಲಿ ಮುಂಗಾರು ಮಾನ್ಸೂನ್ ತಡವಾಗಿ ಪ್ರಾರಂಭವಾಗಿದ್ದು, ಜಿಲ್ಲೆಯ ತ್ರಿವಳಿ ನದಿಗಳಾದ ಕೃಷ್ಣಾ, ಮಲಪ್ರಭೆ ಮತ್ತು ಘಟಪ್ರಭೆ ನದಿಗಳಿಗೆ ನೀರು ಬರುತ್ತಿದೆ. ಮುಂದಿನ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ, ಪ್ರವಾಹ ನಿಯಂತ್ರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಸೂಚಿಸಿದರು.
ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರವಾಹ ನಿಯಂತ್ರಣ ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು.
ಪ್ರವಾಹ ಉಂಟಾಗುವ ನದಿ ದಡದಲ್ಲಿರುವ ಹಾಗೂ ಮುಳುಗಡೆಯಾಗುವ ಪ್ರದೇಶಗಳಲ್ಲಿ ವಾಸವಾಗಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು. ಆಯಾ ತಾಲೂಕಾ ತಹಶೀಲ್ದಾರ್‌ರು ಮುನ್ನಚ್ಚರಿಕೆ ಕ್ರಮವಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಕೃಷ್ಣಾ ನದಿಯಿಂದ ಪ್ರವಾಹ ಉಂಟಾದಲ್ಲಿ ಜಮಖಂಡಿ ತಾಲೂಕಿನಲ್ಲಿ 11 ಗ್ರಾಮಗಳು ಪೂರ್ತಿ ಬಾಧಿತಗೊಳ್ಳುತ್ತಿದ್ದರೆ, 16 ಗ್ರಾಮಗಳು ಬಾಗಶಃ ಬಾಧಿತಗೊಳಗಾಗುತ್ತವೆ. ನಾರಾಯಣಪುರ ಜಲಾಯಶದ ಪ್ರಭಾವದಿಂದ ಬಾಗಲಕೋಟೆ ತಾಲೂಕಿನಲ್ಲಿ 13 ಹಳ್ಳಿಗಳು ಭಾಗಶಃ ಬಾಧಿತಗೊಳಗಾಗುತ್ತವೆ. ಹುನಗುಂದ ತಾಲೂಕಿನಲ್ಲಿ 12 ಗ್ರಾಮಗಳು ಪೂರ್ತಿಯಾಗಿ, 23 ಗ್ರಾಮಗಳು ಭಾಗಶಃ ಬಾಧಿತಗೊಳ್ಳಲಿವೆ.
ಆಲಮಟ್ಟಿ ಜಲಾಶಯದಿಂದ ಮಂಗಳವಾರ 1,17,336 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಆಲಮಟ್ಟಿ, ನಾರಾಯಣಪುರ, ನವಿಲುತೀರ್ಥ ಹಾಗೂ ಹಿಪ್ಪರಗಿ ಜಲಾಶಯದ ಇಂಜಿನೀಯರ್‌ಗಳು ಜಲಾಶಯದ ಅಧಿಕಾರಿಗಳೊಡನೆ ಸತತ ಸಂಪರ್ಕವಿಟ್ಟುಕೊಂಡು ಹೊರಹರಿವು ಸ್ಥಿತಿಗತಿಗಳ ಮಾಹಿತಿ ಪಡೆಯುತ್ತಿರಬೇಕು.
ಪ್ರವಾಹ ಪರಿಸ್ಥಿತಿ ಬಗ್ಗೆ ಬಾಧಿತಗೊಳ್ಳುವ ಎಲ್ಲ ಗ್ರಾಮಗಳಿಗೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಭೇಟಿ ನೀಡಿ ಬಾಧಿತಗೊಳ್ಳುವ ಕುಟುಂಬ, ಜಾನುವಾರು ಹಾಗೂ ಹಾನಿಗೊಳಗಾಗಬಹುದಾದ ಕ್ಷೇತ್ರದ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸ್ಥಳದ ಆಯ್ಕೆ, ಆಹಾರ ಧಾನ್ಯ ಸಂಗ್ರಹಣೆ, ಗಂಜಿ ಕೇಂದ್ರಕ್ಕಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ನದಿಗಳ ದಡದಲ್ಲಿರುವ ಗ್ರಾಮಗಳಲ್ಲಿ ಈಗಾಗಲೇ ಕೆಲವು ಗ್ರಾಮಗಳಲ್ಲಿ ಯಾಂತ್ರಿಕ ಬೋಟ್ ಹಾಗೂ ನಾವೆಗಳು ಲಭ್ಯವಿದ್ದು, ಅವುಗಳನ್ನು ಪರಿಶೀಲಿಸುವುದು ಹಾಗೂ ಪ್ರವಾಹ ಪರಿಸ್ಥಿತಿ ತಕ್ಕಂತೆ ರಕ್ಷಣಾ ಸಾಮಗ್ರಿಗಳು ಹಾಗೂ ಉಪಕರಣ ಇಟ್ಟುಕೊಳ್ಳುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗಿರಮಾ ಪೋವಾರ, ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಚ್. ಜಯಾ, ಜಮಖಂಡಿ ಉಪ ವಿಭಾಗಾಧಿಕಾರಿ ಮೊಹಮ್ಮದ ಈಕ್ರಮ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.