ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ


Team Udayavani, Sep 4, 2020, 5:08 PM IST

ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಸೆ.7ರಿಂದ 19ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಪಿಯುಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಬಾಗಲಕೋಟೆ ಮತ್ತು ಜಮಖಂಡಿಯಲ್ಲಿ ತಲಾ 2 ಹಾಗೂ ಬಾದಾಮಿ, ಹುನಗುಂದ, ಬೀಳಗಿ, ಮುಧೋಳದಲ್ಲಿ ತಲಾ 1ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 6,727 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ 4300 ಬಾಲಕರು ಮತ್ತು 2427 ಬಾಲಕಿಯರು ಇದ್ದಾರೆ ಎಂದು ತಿಳಿಸಿದರು. ಕೋವಿಡ್‌-19 ಹಿನ್ನಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ನಡೆಯುವ 3 ದಿನಗಳ ಮುಂಚೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸುವಂತೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಆದೇಶಿಸಲು ಸೂಚಿಸಿದರು.

ಪರೀಕ್ಷಾ  ಕೇಂದ್ರಕ್ಕೆ ವಿದ್ಯಾರ್ಥಿಗಳು 2 ಗಂಟೆ ಮುಂಚಿತವಾಗಿ ಹಾಜರಾಗಿಬೇಕು. ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವ ಅಥವಾ ಕಂಟೇನ್ಮೆಂಟ್‌ ವಲಯದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಮಾಸ್ಕ್ ಧರಿಸಿಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಿದರು. ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿಗಳಿಂದ ಥರ್ಮಲ್‌ ಸ್ಕ್ಯಾನಿಂಗ್‌ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆಯೊಂದಿಗೆ ಹಾಜರಿರಬೇಕು. ಪರೀಕ್ಷಾ ಕೇಂದ್ರದಲ್ಲಿನ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್‌, ಇ-ಕ್ಯಾಮರಾ, ಲ್ಯಾಪ್‌ಟಾಪ್‌ ತರುವುದನ್ನು ನಿಷೇಧಿಸಲಾಗಿದೆಎಂದರು.

ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ವ್ಯವಸ್ಥೆಯಾಗಬೇಕು. ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಪರೀಕ್ಷೆಯ ಪ್ರತಿಯೊಂದು ಪ್ರಕ್ರಿಯೆಯನ್ನು ಸಿಸಿ ಕ್ಯಾಮರಾದಡಿಯಲ್ಲಿ ನಡೆಸಬೇಕು. ಯಾವುದೇ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯದಂತೆ ನೋಡಿಕೊಳ್ಳತಕ್ಕದ್ದು. ಪ್ರತಿ ವಿದ್ಯಾರ್ಥಿಗೆ ಆಸನದ ವ್ಯವಸ್ಥೆ ಮಾಡಬೇಕು. ಆಸನಗಳ ವ್ಯವಸ್ಥೆಯ ಬಗ್ಗೆ ಸೂಚನಾ ಫಲಕದಲ್ಲಿ ಅಂಟಿಸಬೇಕು ಎಂದು ತಿಳಿಸಿದರು.

ಪರೀಕ್ಷೆ ಸುಸೂತ್ರವಾಗಿ ನಡೆಸುವ ದೃಷ್ಠಿಯಿಂದ ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್‌ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಆದೇಶ ಹೊರಡಿಸಲಾಗುವುದು. ಅಲ್ಲದೇ ಪರೀûಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ ಮುತ್ತಲೂ ಇರುವ ಝರಾಕ್ಸ ಅಂಗಡಿಗಳನ್ನು ಮುಚ್ಚಿಸಲು ಕಲಂ 144ನಡಿ ಆದೇಶ ಹೊರಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ತಲಾ ಒಬ್ಬರಂತೆ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಶಿಧರ ಪೂಜಾರ ಮಾತನಾಡಿ, ಪರೀಕ್ಷೆ ನಡೆಸಲು ಕೈಗೊಂಡ ಸಿದ್ಧತೆ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು.

ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಅಲ್ಪಸಂಖ್ಯಾತರ ಇಲಾಖೆಯ ಉಪ ನಿರ್ದೇಶಕ ಎಂ.ಎನ್‌. ಮೇಲಿನಮನಿ ಮುಂತಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.