ಮೋದಿ ಎದುರಲ್ಲಿ ನೇತಾಜಿ ಕುರಿತು ಭಾಷಣಕ್ಕೆ ರಾಜ್ಯದ ಪರೇಶ ಆಯ್ಕೆ
Team Udayavani, Jan 23, 2023, 7:55 AM IST
ಬಾಗಲಕೋಟೆ: ನಗರದ ವಿದ್ಯಾರ್ಥಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಎದುರಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಕುರಿತು ಭಾಷಣ ಮಾಡಲು ಆಯ್ಕೆಯಾಗಿದ್ದಾನೆ.
ಪ್ರತಿಷ್ಠಿತ ಬಸವೇಶ್ವರ ವಿದ್ಯಾವರ್ಧಕ ಸಂಘದ ಬಸವೇಶ್ವರ ವಾಣಿಜ್ಯ ಕಾಲೇಜಿನಲ್ಲಿ ಬಿಬಿಎ 3ನೇ ಸೆಮಿಸ್ಟರ್‌ನ ಲ್ಲಿ ಅಧ್ಯಯನ ಮಾಡುತ್ತಿರುವ ಪರೇಶ ಸಚಿನಕುಮಾರ ಗುಂಡೇಚಾ ಈ ಹೆಮ್ಮೆಗೆ ಪಾತ್ರನಾಗಿದ್ದಾನೆ. ದಿಲ್ಲಿಯಲ್ಲಿ ಫೆ. 23ರಂದು ರಾಷ್ಟ್ರೀಯ ಯುವ ಜನೋತ್ಸವ ಜರಗಲಿದ್ದು, ಅಲ್ಲಿ ಭಾಷಣ ಮಾಡಲಿರುವ ವಿವಿಧ ರಾಜ್ಯಗಳ ಸುಮಾರು 8 ವಿದ್ಯಾರ್ಥಿಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಇವರಾಗಿದ್ದಾರೆ. ರಾಷ್ಟ್ರೀಯ ಯುವಜನೋತ್ಸವಕ್ಕೆ ಆಯ್ಕೆಯಾದ 30 ವಿದ್ಯಾರ್ಥಿಗಳ ಪೈಕಿ ಎಂಟು ಮಂದಿ ಯನ್ನು ಮೋದಿ ಎದುರು ಭಾಷಣ ಮಾಡಲು ರಾಷ್ಟ್ರೀಯ ಸಮಿತಿ ಆಯ್ಕೆ ಮಾಡಿದೆ.
ಪ್ರಧಾನಿ ಮೋದಿ ಅವರನ್ನು ನೋಡುವುದೇ ದೊಡ್ಡ ಸೌಭಾಗ್ಯ. ಅದರಲ್ಲೂ ಅವರ ಎದುರು ಮೂರು ನಿಮಿಷ ಭಾಷಣ ಮಾಡಲು ಅವಕಾಶ ಸಿಕ್ಕಿರುವುದರಿಂದ ಬಹಳ ಖುಷಿಯಾಗಿದೆ. ಇದಕ್ಕೆ ತಂದೆ-ತಾಯಿ, ಕಾಲೇಜು ಪ್ರಾಧ್ಯಾಪಕರು, ಸಂಘದ ಆಡಳಿತ ಮಂಡಳಿಯ ಪ್ರತಿಯೊಬ್ಬರ ಹಾರೈಕೆಯೂ ಕಾರಣ.
-ಪರೇಶ ಸಚಿನಕುಮಾರ ಗುಂಡೇಚಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.